ಟೀಮ್ ಇಂಡಿಯಾವನ್ನು ಮತ್ತೆ ಮುನ್ನಡೆಸಲಿದ್ದಾರೆ ಸಚಿನ್ ತೆಂಡೂಲ್ಕರ್
ಕ್ರಿಕೆಟ್‌ನಲ್ಲಿ ತಮ್ಮದೇ ಛಾಪು ಮೂಡಿಸಿರುವ ಆಟಗಾರರು ಮತ್ತೆ ಮೈದಾನಕ್ಕೆ ಎಂಟ್ರಿ ನೀಡಲಿದ್ದಾರೆ. ವಿಶ್ವದಲ್ಲೇಡೆ ಅಪಾರ ಅಭಿಮಾನಿಗಳ ಬಳಗವನ್ನು ಹೊಂದಿರುವ ದಿಗ್ಗಜ ಪ್ಲೇಯರ್ ಒಂದೇ ಟೂರ್ನಿಯಲ್ಲಿ ಕಾದಾಟ ನಡೆಸಲಿದ್ದಾರೆ. ಭಾರತದಲ್ಲಿ ನಡೆಯಲಿರುವ ಟೂರ್ನಿಯಲ್ಲಿ ಹಲವು ದೇಶಗಳು ಭಾವಗಹಿಸುತ್ತಿವೆ.
ಈ ಟೂರ್ನಿಯಲ್ಲಿ ಟೀಮ್ ಇಂಡಿಯಾವನ್ನು ದಿಗ್ಗಜ ಕ್ರಿಕೆಟ್ ಆಟಗಾರ ಸಚಿನ್ ತೆಂಡೂಲ್ಕರ್ ಮುನ್ನಡೆಸಲಿದ್ದಾರೆ. ಈ ಮೂಲಕ 24 ವರ್ಷಗಳ ಬಳಿಕ ಭಾರತ ತಂಡದ ನಾಯಕತ್ವವನ್ನು ವಹಿಸಿಕೊಳ್ಳಲಿದ್ದಾರೆ. ಸುಮಾರು 11 ವರ್ಷಗಳ ಹಿಂದೆ ಮುಂಬೈನಲ್ಲಿ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ್ದ ಕ್ರಿಕೆಟ್ ದೇವರು ಖ್ಯಾತಿಯ ಸಚಿನ್, ಇಂಟರ್ನ್ಯಾಷನಲ್ ಮಾಸ್ಟರ್ಸ್ ಲೀಗ್ ಟೂರ್ನಿಯಲ್ಲಿ ಭಾರತವನ್ನು ಮುನ್ನಡೆಸಲಿದ್ದಾರೆ.

ಹೊಸ ಟೂರ್ನಮೆಂಟ್ ಭಾರತೀಯ ಅಭಿಮಾನಿಗಳ ಮನ ಗೆಲ್ಲಲು ತಯಾರಿ ನಡೆಸಿದೆ. ಈ ಟೂರ್ನಿಯಲ್ಲಿ ಶ್ರೀಲಂಕಾ, ಆಸ್ಟ್ರೇಲಿಯಾ, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ತಂಡಗಳು ಈ ಲೀಗ್‌ನಲ್ಲಿ ಭಾಗವಹಿಸಲಿವೆ.
ಯಾವ ತಂಡಕ್ಕೆ ಯಾರು ನಾಯಕರು?
ಈ ಟೂರ್ನಿಯಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಬ್ರಿಯಾನ್ ಲಾರಾ, ಶ್ರೀಲಂಕಾ ತಂಡವನ್ನು ಕುಮಾರ್ ಸಂಗಕ್ಕಾರ, ಆಸ್ಟ್ರೇಲಿಯಾ ತಂಡವನ್ನು ಶೇನ್ ವ್ಯಾಟ್ಸನ್, ಇಂಗ್ಲೆಂಡ್ ತಂಡವನ್ನು ಇಯಾನ್ ಮೋರ್ಗನ್, ದಕ್ಷಿಣ ಆಫ್ರಿಕಾ ತಂಡವನ್ನು ಜಾಕ್ ಕಾಲಿಸ್ ಮುನ್ನಡೆಸಲಿದ್ದಾರೆ. ಸಚಿನ್ ತೆಂಡೂಲ್ಕರ್ 24 ವರ್ಷಗಳ ಹಿಂದೆ ಭಾರತ ತಂಡದ ನಾಯಕರಾಗಿದ್ದರು. 2000ರಲ್ಲಿ ಸಚಿನ್ ಟೆಸ್ಟ್‌ನಲ್ಲಿ ದೇಶವನ್ನು ಮುನ್ನಡೆಸಿದ್ದರು. ಇದಾದ ಬಳಿಕ ಸೌರವ್ ಗಂಗೂಲಿಗೆ ಟೀಂ ಇಂಡಿಯಾದ ಚುಕ್ಕಾಣಿ ಹಿಡಿದರು.
ಇಂಟರ್ನ್ಯಾಷನಲ್ ಮಾಸ್ಟರ್ಸ್ ಲೀಗ್ ಮುಂಬೈನ ಡಿ.ವೈ. ಪಾಟೀಲ್ ಅಂಗಳದಲ್ಲಿ ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಭಾರತ ಹಾಗೂ ಶ್ರೀಲಂಕಾ ತಂಡಗಳು ನವೆಂಬರ್ 17 ರಂದು ಕಾದಾಡಲಿವೆ. ಎರಡನೇ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ನವೆಂಬರ್ 21 ರಂದು, ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ನವೆಂಬರ್ 24 ತಂಡವನ್ನು ಎದುರಿಸಲಿದೆ.

ಮುಂಬೈನಲ್ಲಿ ನವೆಂಬರ್ 18 ರಂದು ಆಸ್ಟ್ರೇಲಿಯಾ ವಿರುದ್ಧ ದಕ್ಷಿಣ ಆಫ್ರಿಕಾ, ನವೆಂಬರ್ 19 ರಂದು ಶ್ರೀಲಂಕಾ ವಿರುದ್ಧ ಇಂಗ್ಲೆಂಡ್, ನವೆಂಬರ್ 20 ರಂದು ವೆಸ್ಟ್ ಇಂಡೀಸ್ ವಿರುದ್ಧ ಆಸ್ಟ್ರೇಲಿಯಾ ತಂಡಗಳು ಕಾದಾಟ ನಡೆಸಲಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications