Sachin Tendulkar: ಇಂಟರ್ನ್ಯಾಷನಲ್ ಮಾಸ್ಟರ್ಸ್ ಲೀಗ್‌ನಲ್ಲಿ ಕ್ರಿಕೆಟ್ ದೇವರು
ಕ್ರಿಕೆಟ್ ಜಗತ್ತಿನಲ್ಲಿ ಮತ್ತೊಂದು ಹೊಸ ಟೂರ್ನಿ ಪ್ರಾರಂಭವಾಗಲಿದೆ. ಹಲವು ದಿಗ್ಗಜರು ಒಟ್ಟಿಗೆ ಮತ್ತೊಮ್ಮೆ ಈ ಟೂರ್ನಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಟೂರ್ನಿಯಲ್ಲಿ ಹಿರಿಯ ಆಟಗಾರರು ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಲಿದ್ದಾರೆ. ಜೊತೆಗೆ ದಿಗ್ಗಜ ಕ್ರಿಕೆಟಿಗರು ಒಟ್ಟಿಗೆ ಸೇರಿ ಆಡುತ್ತಿರುವುದರಿಂದ ಟೂರ್ನಿ ರೋಚಕವಾಗಿರಲಿದೆ.
ಭಾರತ ತಂಡದ ಮಾಜಿ ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್ ಕೂಡ ಈ ಟೂರ್ನಿಯಲ್ಲಿ ಆಡಲಿದ್ದಾರೆ. ಈ ಸಂದರ್ಭದಲ್ಲಿ ಮತ್ತೊಮ್ಮೆ ತಮ್ಮ ನೆಚ್ಚಿನ ಕ್ರಿಕೆಟ್ ದೇವರ ಆಟವನ್ನು ಸಚಿನ್ ಅಭಿಮಾನಿಗಳು ಕಣ್ತುಂಬಿಕೊಳ್ಳಲಿದ್ದಾರೆ.

ಈ ವರ್ಷ ಪ್ರಾರಂಭವಾಗುವ 2024ರ ಇಂಟರ್ನ್ಯಾಷನಲ್ ಮಾಸ್ಟರ್ಸ್ ಲೀಗ್ (ಐಎಂಎಲ್) ನಲ್ಲಿ ಮಾಜಿ ಭಾರತೀಯ ಕ್ರಿಕೆಟಿಗರು ಆಡುತ್ತಿದ್ದಾರೆ. ಈ ಲೀಗ್‌ನ ಉದ್ಘಾಟನಾ ಆವೃತ್ತಿಯಲ್ಲಿ ಸಚಿನ್ ತಮ್ಮ ಹಳೆಯ ಖದರ್ ತೋರಲು ಸಜ್ಜಾಗಿದ್ದಾರೆ. ಅಭಿಮಾನಿಗಳು ಕೂಡ ಕಾತರದಿಂದ ಕಾಯುತ್ತಿದ್ದಾರೆ.
ಲೀಗ್ ಹಿನ್ನೆಲೆ?
2024ರ ಇಂಟರ್ನ್ಯಾಷನಲ್ ಮಾಸ್ಟರ್ಸ್ ಲೀಗ್ ಅನ್ನು ಟಿ20 ಮಾದರಿಯಲ್ಲಿ ಆಯೋಜಿಸಲಾಗುತ್ತಿದೆ. ಈ ಲೀಗ್‌ನಲ್ಲಿ ಒಟ್ಟು 6 ತಂಡಗಳು ಭಾಗವಹಿಸಲಿವೆ. ಈ ಲೀಗ್‌ನ ನಡೆಸುವುದಕ್ಕೆ ಮುಖ್ಯ ಕಾರಣ ಭಾರತದ ಇಬ್ಬರು ಶ್ರೇಷ್ಠ ಕ್ರಿಕೆಟಿಗರಾದ ಸುನಿಲ್ ಗವಾಸ್ಕರ್ ಮತ್ತು ಸಚಿನ್ ತೆಂಡೂಲ್ಕರ್. ಕ್ರೀಡಾ ನಿರ್ವಹಣಾ ಕಂಪನಿಗಳಾದ ಪಿಎಂಜಿ ಸ್ಪೋರ್ಟ್ಸ್ ಮತ್ತು ಸ್ಪೋರ್ಟ್‌ಫೈವ್ ಸಹಯೋಗದೊಂದಿಗೆ ಈ ಲೀಗ್ ಅನ್ನು ಆಯೋಜಿಸಲು ಅವರು ನಿರ್ಧರಿಸಿದ್ದಾರೆ. ಸುನಿಲ್ ಗವಾಸ್ಕರ್ ಅವರನ್ನು ಈ ಲೀಗ್‌ನ ಅಧ್ಯಕ್ಷರಾಗಿ ನೇಮಿಸಲಾಗಿದ್ದು, ಸಚಿನ್ ಅವರನ್ನು ರಾಯಭಾರಿ ಆಯ್ಕೆ ಮಾಡಲಾಗಿದೆ.
ಆರು ತಂಡಗಳ ನಡುವೆ ಕಾದಾಟ
ಇಂಟರ್ನ್ಯಾಷನಲ್ ಮಾಸ್ಟರ್ಸ್ ಲೀಗ್ ಆರು ದೇಶಗಳ ನಡುವೆ ನಡೆಯಲಿದೆ. ಭಾರತ, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್, ಇಂಗ್ಲೆಂಡ್ ಮತ್ತು ಶ್ರೀಲಂಕಾ ತಂಡಗಳು ಇದರಲ್ಲಿ ಸೇರಿವೆ. ಈ ಎಲ್ಲಾ ತಂಡಗಳ ಹಿರಿಯ ಕ್ರಿಕೆಟಿಗರು ಮತ್ತೊಮ್ಮೆ ಮೈದಾನದಲ್ಲಿ ದಾಖಲೆಗಳನ್ನು ಸೃಷ್ಟಿಸಲು ತಯಾರಾಗಿದ್ದಾರೆ.
ಈ ಲೀಗ್‌ನ ಪಂದ್ಯಗಳನ್ನು ಮುಂಬೈ, ಲಕ್ನೋ ಮತ್ತು ರಾಯ್‌ಪುರದಲ್ಲಿ ಆಯೋಜಿಸಲಾಗುತ್ತಿದೆ. ಭಾರತದಲ್ಲಿಯೇ ಇಂಟರ್ನ್ಯಾಷನಲ್ ಮಾಸ್ಟರ್ಸ್ ಲೀಗ್ ನಡೆಯುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಮೈದಾನಕ್ಕೆ ಬರುವ ಸಾಧ್ಯತೆಯಿದೆ. ಹೀಗಾಗಿ ಎಲ್ಲಾ ರೀತಿ ಸಿದ್ಧತೆ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಈ ಲೀಗ್‌ನ ವೇಳಾಪಟ್ಟಿ ಮತ್ತು ತಂಡಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications