For Quick Alerts
ALLOW NOTIFICATIONS  
For Daily Alerts
 

ತೆಂಡೂಲ್ಕರ್ ವಿಶ್ವದ ಸರ್ವಶ್ರೇಷ್ಟ ಕ್ರೀಡಾ ಪುರಸ್ಕಾರ : ಸಚಿನ್ ಮುಡಿಗೆ ಮತ್ತೊಂದು ಕಿರೀಟ

Sachin Tendulkar wins Laureus Sporting Moment Award

ಕ್ರಿಕೆಟ್ ಲೆಜೆಂಡ್ ಸಚಿನ್ ತೆಂಡೂಲ್ಕರ್ ವಿಶ್ವಶ್ರೇಷ್ಟ ಕ್ರೀಡಾ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಲೌರೆಸ್ ಸ್ಪೋರ್ಟಿಂಗ್ ಮೂಮೆಂಟ್ ಅವಾರ್ಡ್ ಸಚಿನ್ ತೆಂಡೂಲ್ಕರ್ ಪಾಲಾಗಿದೆ. ಈ ಪ್ರತಿಷ್ಟಿತ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಕ್ರೀಡಾಪಟು ಎಂಬ ಸಾಧೆಯನ್ನು ಸಚಿನ್ ತೆಂಡೂಲ್ಕರ್ ಮಾಡಿದ್ದಾರೆ.

2011ರ ವಿಶ್ವಕಪ್‌ಗೆದ್ದ ಬಳಿಕ ಟೀಮ್ ಇಂಡಿಯಾದ ಸದಸ್ಯರು ಸಚಿನ್ ತೆಂಡೂಲ್ಕರ್ ಅವರನ್ನು ಹೆಗಲ ಮೇಲೆ ಹೊತ್ತು ಮೈದಾನಕ್ಕೆ ಸುತ್ತುವರಿಸಿದ್ದರು. ಈ ಅದ್ಭುತ ಸನ್ನಿವೇಶಕ್ಕಾಗಿ ಸಚಿನ್ ತೆಂಡೂಲ್ಕರ್ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಈ ಪ್ರಶಸ್ತಿಗಾಗಿ ಅಭಿಮಾನಿಗಳು ವೋಟಿಂಗ್‌ಗೆ ಮಾಡಬೇಕಾಗಿತ್ತು. ಈ ವೋಟ್‌ನಲ್ಲಿ ಸಚಿನ್ ತೆಂಡೂಲ್ಕರ್ ಹೆಚ್ಚಿನ ವೊಟ್ ಪಡೆದಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ ಅವರನ್ನು ಆಯ್ಕೆ ಮಾಡಲಾಗಿದೆ. ಬರ್ಲಿನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿನ್ ತೆಂಡೂಲ್ಕರ್ ಈ ಪ್ರಶಸ್ತಿಯನ್ನು ಸ್ವೀಕಾರ ಮಾಡಿದ್ದಾರೆ.

ಈ ಪ್ರಶಸ್ತಿಯನ್ನು ಸ್ವೀಕಾರ ಮಾಡಿದ ಸಚಿನ್ ತೆಂಡೂಲ್ಕರ್ ವಿಶ್ವಕಪ್ ಗೆದ್ದ ಆ ಕ್ಷಣ ನನ್ನ ಜೀವನದ ಅತ್ಯಂತ ಹೆಮ್ಮೆಯ ಕ್ಷಣವಾಗಿದೆ ಎಂದು ನೆನಪಿಸಿಕೊಂಡಿದ್ದಾರೆ. ಆಸ್ಟ್ರೇಲಿಯಾ ಕ್ರಿಕೆಟ್‌ನ ಮಾಜಿ ನಾಯಕ ಸ್ಟೀವ್ ವಾ ಈ ಪ್ರಶಸ್ತಿಯನ್ನು ಸಚಿಮ್ ತೆಂಡೂಲ್ಕರ್‌ಗೆ ವಿತರಿಸಿದರು.

ಲೌರೆಸ್ ವಿಶ್ವದ ಕ್ರೀಡಾಪಟು ಪ್ರಶಸ್ತಿಯನ್ನು ಇಬ್ಬರು ಕ್ರೀಡಾಪಟುಗಳು ಹಂಚಿಕೊಂಡಿದ್ದಾರೆ. ಫಾರ್ಮುಲಾ 1 ರೇಸರ್ ಲೀವಿಸ್ ಹ್ಯಾಮಿಲ್ಟನ್ ಮತ್ತು ಫುಟ್ಬಾಲ್ ದಂತಕತೆ ಲಿಯೋನೆಲ್ ಮೆಸ್ಸಿ ಜಂಟಿಯಾಗಿ ಈ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

Story first published: Tuesday, February 18, 2020, 12:07 [IST]
Other articles published on Feb 18, 2020
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+