IPL 2025 Mega Auction: ಸಚಿನ್ ತೆಂಡೂಲ್ಕರ್ ಪುತ್ರನಿಗೆ ಮೆಗಾ ಹರಾಜಿನಲ್ಲಿ ಅಘಾತ!
'ಕ್ರಿಕೆಟ್ ದೇವರು' ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಐಪಿಎಲ್ 2025ರ ಮೆಗಾ ಹರಾಜಿನಲ್ಲಿ ಆಘಾತ ಎದುರಿಸಿದರು. ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆಯುತ್ತಿರುವ ಮೆಗಾ ಹರಾಜಿನಲ್ಲಿ ಅರ್ಜುನ್ ತೆಂಡೂಲ್ಕರ್ ಅವರನ್ನು ಬಿಡ್ ಮಾಡಲು ಯಾವುದೇ ಫ್ರಾಂಚೈಸಿಗಳು ಮುಂದಾಗಲಿಲ್ಲ. ಆದರೆ ಎರಡನೇ ಬಾರಿಗೆ ಅವರ ಹೆಸರು ಬಂದಾಗ, ಮುಂಬೈ ಇಂಡಿಯನ್ಸ್ ಬಿಡ್ ಮಾಡಿದೆ. ಅರ್ಜುನ್ ತೆಂಡೂಲ್ಕರ್ ಅವರನ್ನು ಮೂಲ ಬೆಲೆ 30 ಲಕ್ಷ ರೂ.ಗೆ ಮುಂಬೈ ಸೇರಿಸಿಕೊಂಡಿದೆ.
ಅರ್ಜುನ್ ತೆಂಡೂಲ್ಕರ್ ಐಪಿಎಲ್ 2023 ರಲ್ಲಿ ಮುಂಬೈ ಇಂಡಿಯನ್ಸ್ ಪರ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ್ದರು. ಅರ್ಜುನ್ ಐಪಿಎಲ್‌ನಲ್ಲಿ ಆಡಿದ 5 ಪಂದ್ಯಗಳಲ್ಲಿ ಕೇವಲ 3 ವಿಕೆಟ್‌ಗಳನ್ನು ಪಡೆದಿದ್ದಾರೆ. ಐಪಿಎಲ್ 2023ರ ಮಿನಿ ಹರಾಜಿಗೂ ಮುನ್ನ ಮುಂಬೈ ಅವರನ್ನು ಬಿಡುಗಡೆ ಮಾಡಿತ್ತು. ಈ ಬಾರಿ 30 ಲಕ್ಷ ರೂ. ಮೂಲ ಬೆಲೆಯೊಂದಿಗೆ ಮೆಗಾ ಹರಾಜಿನಲ್ಲಿ ಭಾಗವಹಿಸಿದ್ದ ಅರ್ಜುನ್ ಬಗ್ಗೆ ಯಾವ ತಂಡವೂ ಆಸಕ್ತಿ ತೋರಲಿಲ್ಲ. ಹೀಗಾಗಿ ಮುಂಬೈ ಎರಡನೇ ಬಾರಿಗೆ ಅರ್ಜುನ್‌ಗೆ ಮಣೆ ಹಾಕಿದೆ.

ಐಪಿಎಲ್ 2025ರ ಮೆಗಾ ಹರಾಜಿಗೂ ಮೊದಲು ಎಲ್ಲಾ ಆಟಗಾರರು ಫ್ರಾಂಚೈಸಿಗಳ ಗಮನ ಸೆಳೆಯುವಲ್ಲಿ ನಿರತರಾಗಿದ್ದರು. ಅನೇಕ ಆಟಗಾರರು ತಂಡಗಳ ಗಮನ ಸೆಳೆದು ಮಿಲಿಯನೇರ್ ಆದರು. ಆದರೆ ಹರಾಜಿಗೂ ಮುನ್ನವೇ ಅರ್ಜುನ್ ತೆಂಡೂಲ್ಕರ್ ದೊಡ್ಡ ತಪ್ಪು ಮಾಡಿದ್ದಾರೆ.
ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಅವರು ದೊಡ್ಡ ಅವಕಾಶವನ್ನು ಕಳೆದುಕೊಂಡರು. ನಿರೀಕ್ಷೆಗೆ ವಿರುದ್ಧವಾಗಿ ಅರ್ಜುನ್ ಈ ಟೂರ್ನಿಯಲ್ಲಿ ದುಬಾರಿ ಬೌಲಿಂಗ್ ಮಾಡಿದ್ದರು. ಅವರು 4 ಓವರ್‌ಗಳಲ್ಲಿ 48 ರನ್‌ಗಳನ್ನು ನೀಡಿದರು. ಒಂದು ವೇಳೆ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಅವರು ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದರೆ, ತಂಡಗಳು ದೊಡ್ಡ ಮಟ್ಟದಲ್ಲಿ ಬಾಜಿ ಕಟ್ಟಬಹುದಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications