Asia cup T20 Final: ಭಾರತದ ಬೌಲರ್‌ಗಳ ಭರ್ಜರಿ ಕಂ ಬ್ಯಾಕ್: 146 ರನ್‌ಗಳಿಗೆ ಪಾಕ್ ಕಟ್ಟಿ ಹಾಕಿದ ಸೂರ್ಯ ಪಡೆ
ಭಾರತ ಹಾಗೂ ಪಾಕಿಸ್ತಾನ ನಡುವಣ ಏಷ್ಯಾ ಕಪ್ ಟಿ20 ಟೂರ್ನಿಯ ಫೈನಲ್ ಪಂದ್ಯದಲ್ಲಿ ಟಾಸ್ ಸೂರ್ಯ ಪಡೆಯ ಪಾಲಾಯಿತು. ಈ ಪಂದ್ಯದಲ್ಲಿ ಟಾಸ್ ಗೆಲ್ಲುತ್ತಿದ್ದಂತೆ ಸೂರ್ಯ ಬೌಲಿಂಗ್ ಮಾಡಲು ನಿರ್ಧರಿಸಿದರು. ಈ ವೇಳೆ ಮೊದಲು ಬ್ಯಾಟ್ ಮಾಡಿದ ಪಾಕ್ ಪವರ್ ಪ್ಲೇನಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ನಡೆಸಿತು. ಈ ವೇಳೆ ವಿಕೆಟ್ ಬೀಳದಂತೆ ಕಾಯ್ದುಕೊಂಡ ಸಲ್ಮಾನ್ ಪಡೆ ಉತ್ತಮ ಆಟವನ್ನು ಪ್ರದರ್ಶಿಸಿತು. ಈ ವೇಳೆ ಪಾಕಿಸ್ತಾನದ ಆರಂಭಿಕರು ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು.
ಪಾಕ್ ಆರಂಭಿಕರಾದ ಸಾಹಿಬ್‌ಜಾದಾ ಫರ್ಹಾನ್ ಹಾಗೂ ಫಖರ್ ಜಮಾನ್ ಜೋಡಿ ಉತ್ತಮ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿಯನ್ನು ಕಟ್ಟಿ ಹಾಕುವಲ್ಲಿ ಟೀಮ್ ಇಂಡಿಯಾ ಬೌಲರ್‌ಗಳು ಎಡವಿದರು. ಶಿವಂ ದುಬೆ ಬಿಗುವಿನ ದಾಳಿ ನಡೆಸಿದರೆ, ಜಸ್ಪ್ರೀತ್ ಬುಮ್ರಾ ಕೊಂಚ ದುಬಾರಿ ಆದರು. ಈ ಜೋಡಿ ಪವರ್ ಪ್ಲೇನಲ್ಲಿ ವಿಕೆಟ್ ನಷ್ಟವಿಲ್ಲದೆ 45 ರನ್ ಸೇರಿಸಿತು. ಈ ಜೊಡಿ ಮೊದಲ ವಿಕೆಟ್‌ಗೆ 9.4 ಓವರ್‌ಗಳಲ್ಲಿ 84 ರನ್‌ಗಳ ಜೊತೆಯಾಟವನ್ನು ನೀಡಿತು.

ಪ್ರಸಕ್ತ ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡಿರುವ ಸಾಹಿಬ್‌ಜಾದಾ ಫರ್ಹಾನ್ 150ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟಿಂಗ್ ನಡೆಸಿದರು. ಇವರು 38 ಎಸೆತಗಳಲ್ಲಿ 5 ಬೌಂಡರಿ, 3 ಸಿಕ್ಸರ್ ಸಹಾಯದಿಂದ 57 ರನ್ ಬಾರಿಸಿ ವರುಣ್ ಚಕ್ರವರ್ತಿಗೆ ವಿಕೆಟ್ ಒಪ್ಪಿಸದರು.
ಪಾಕ್ ತಂಡದ ಮಧ್ಯಮ ಕ್ರಮಾಂಕದ ಸೈಮ್ ಅಯೂಬ್ 14 ರನ್ ಬಾರಿಸಿ ಔಟ್ ಆದರು. ಇನ್ನು ಆರಂಭಿಕ ಫಖರ್ ಜಮನ್ 2 ಬೌಂಡರಿ, 2 ಸಿಕ್ಸರ್ ಸಹಾಯದಿಂದ 46 ರನ್ ಬಾರಿಸಿ ವರುಣ್ ಚಕ್ರವರ್ತಿಗೆ ವಿಕೆಟ್ ಒಪ್ಪಿಸಿದರು. ಉಳಿದಂತೆ ಪಾಕ್ ತಂಡದ ಬ್ಯಾಟರ್‌ಗಳು ಸಿಂಗಲ್ ಡಿಜಿಟ್‌ನಲ್ಲಿ ಆಡ ಮುಗಿಸಿದರು. ಕೊನೆಯ 10 ಓವರ್‌ಗಳಲ್ಲಿ ಟೀಮ್ ಇಂಡಿಯಾದ ಬೌಲರ್‌ಗಳು ಮೇಲುಗೈ ಸಾಧಿಸಿದರು. ಅಂತಿಮವಾಗಿ ಪಾಕಿಸ್ತಾನ 20 ಓವರ್‌ಗಳನ್ನು ಸಹ ಪೂರ್ಣವಾಗಿ ಆಡಲಿಲ್ಲ. ಪಾಕ್ 19.1 ಓವರ್‌ಗಳಲ್ಲಿ 146 ರನ್‌ಗಳಿಗೆ ಆಲೌಟ್ ಆಯಿತು.

ಪಟಪಟನೇ ಬಿದ್ದ ವಿಕೆಟ್
ಪಾಕಿಸ್ತನ ತಂಡದ ಮೊದಲ 10 ಓವರ್‌ಗಳಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿ ಅಬ್ಬರಿಸಿತ್ತು. ಪಾಕ್ ಈ ಅವಧಿಯಲ್ಲಿ 87 ರನ್ ಗಳಿಸಿ ಒಂದು ವಿಕೆಟ್ ಕಳೆದುಕೊಂಡು ಸುಸ್ಥಿತಿಯಲ್ಲಿತ್ತು. ಇದಾದ ಬಳಿಕ ಟೀಮ್ ಇಂಡಿಯಾದ ಬೌಲರ್‌ಗಳ ಬಿಗುವಿನ ದಾಳಿಯ ನೆರವಿನಿಂದ, ಪಾಕ್ ತಂಡವನ್ನು ಸ್ಪರ್ಧಾತ್ಮಕ ಮೊತ್ತಕ್ಕೆ ಕಟ್ಟಿ ಹಾಕುವಲ್ಲಿ ಟೀಮ್ ಇಂಡಿಯಾ ಬೌಲರ್‌ಗಳು ಸಫಲರಾದರು. ಪಾಕ್ 131 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡು ಸುಸ್ಥಿತಿಯಲ್ಲಿತ್ತು. ಈ ಅವಧಿಯಲ್ಲಿ ಟೀಮ್ ಇಂಡಿಯಾದ ಸ್ಪಿನ್ ಬೌಲರ್‌ಗಳು ಭರ್ಜರಿ ಕಂ ಬ್ಯಾಕ್ ಮಾಡಿದರು. ಟೀಮ್ ಇಂಡಿಯಾದ ಸ್ಪಿನ್ ಬೌಲರ್‌ಗಳ ಸವಾಲು ಮೆಟ್ಟಿ ನಿಲ್ಲುವಲ್ಲಿ ಪಾಕ್ ಬ್ಯಾಟರ್‌ಗಳು ವಿಫಲರಾದರು. ಪಾಕ್ ಜಸ್ಟ್ 10 ರನ್ ಸೇರಿಸುವಷ್ಟರಲ್ಲಿ 5 ವಿಕೆಟ್ ಕಳೆದಿಕೊಂಡು ಸಂಕಷ್ಟಕ್ಕೆ ಸಿಲುಕಿತು.
ಟೀಮ್ ಇಂಡಿಯಾದ ಸ್ಟಾರ್ ಸ್ಪಿನ್ ಬೌಲರ್ ಕುಲ್ ದೀಪ್ ಯಾದವ್ ಪಾಕ್ ತಂಡದ ಬ್ಯಾಟರ್‌ಗಳಿಗೆ ಬಹುವಾಗಿ ಕಾಡಿದರು. ಇವರು ಮಾಡಿದ 4 ಓವರ್‌ಗಳಲ್ಲಿ 7.50ರ ಸರಸಾರಿಯಲ್ಲಿ 30 ರನ್ ನೀಡಿ ಪಾಕಿಸ್ತಾನ ತಂಡದ ಪ್ರಮುಖ ನಾಲ್ಕು ವಿಕೆಟ್ ಕಬಳಿಸಿ ಮಿಂಚಿದರು. ಜಸ್ಪ್ರೀತ್ ಬುಮ್ರಾ, ಅಕ್ಷರ್ ಪಟೇಲ್, ಶಿವಂ ದುಬೆ ತಲಾ ಎರಡು ವಿಕೆಟ್ ಕಬಳಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications