Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಅಭ್ಯಾಸದ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ಬೌಲರ್‌ಗೆ ಗಾಯ; ಆಸ್ಪತ್ರೆಗೆ ದಾಖಲು

ಇಂಡಿಯನ್ ಪ್ರೀಮಿಯರ್ ಲೀಗ್‌ನ 19 ನೇ ಋತುವಿನ 35 ನೇ ಲೀಗ್ ಪಂದ್ಯ ಶನಿವಾರ ನಡೆಯಲಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ದೆಹಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ನಡೆಯಲಿದೆ. ಡೆಲ್ಲಿ ಕ್ಯಾಪಿಟಲ್ಸ್‌ ತರಬೇತಿ ಅವಧಿಯಲ್ಲಿ ನೆಟ್ ಬೌಲರ್ ಬೌನ್ಸರ್‌ನಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರ ಮುಖಕ್ಕೆ ಬಡಿದ ನಂತರ ಅವರಿಗೆ ತೀವ್ರ ನೋವು ಕಾಣಿಸಿಕೊಂಡಿದ್ದು ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಾಹಿಲ್ ಪರಾಖ್ ಗಾಯಕ್ಕೆ ತುತ್ತಾದ ಆಟಗಾರ. ಇವರು ಅಭ್ಯಾಸದ ಸಮಯದಲ್ಲಿ ಮುಖಕ್ಕೆ ಬೌನ್ಸರ್ ಬಡಿದಾಗ, ಅವರು ತಕ್ಷಣವೇ ನೆಲದ ಮೇಲೆ ಕುಸಿದು ಬಿದ್ದು, ತೀವ್ರ ರಕ್ತಸ್ರಾವವಾಯಿತು. ಮುಖಕ್ಕೆ ಚೆಂಡು ಬಡೆದಾಗ ತೀವ್ರ ನೋವು ಕಾಣಿಸಿಕೊಂಡಿತು. ಅವರಿಗೆ ಡೆಲ್ಲಿ ಕ್ಯಾಪಿಟಲ್ಸ್ ವೈದ್ಯಕೀಯ ಸಿಬ್ಬಂದಿ, ಸಹಾಯಕ್ಕೆ ಧಾವಿಸಿದರು. ಬಳಿಕ ಅವರು ಚೇತರಿಸಿಕೊಂಡರು ನಂತರ ಅವರನ್ನು ಸ್ಟ್ರೆಚರ್‌ನಲ್ಲಿ ಆಂಬ್ಯುಲೆನ್ಸ್‌ನಲ್ಲಿ ಮೈದಾನದಿಂದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಸಾಹಿಲ್ ಅವರ ಗಾಯದ ಬಗ್ಗೆ ಡೆಲ್ಲಿ ಕ್ಯಾಪಿಟಲ್ಸ್ ಇನ್ನೂ ಯಾವುದೇ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ.

Sahil Parakh

ಐಪಿಎಲ್‌ನಲ್ಲಿ ಡೆಲ್ಲಿ ಸಾಧನೆ

ಇವರನ್ನು ಮಿನಿ ಹರಾಜಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ 30 ಲಕ್ಷ ರೂ.ಗೆ ಖರೀದಿಸಿದೆ. ಇವರು ನಾಸಿಕ ಮೂಲದ 18 ವರ್ಷದವರಾಗಿದ್ದು, ಇನ್ನೂ ಐಪಿಎಲ್‌ಗೆ ಪಾದಾರ್ಪಣೆ ಮಾಡಿಲ್ಲ. ಡೆಲ್ಲಿ ಕ್ಯಾಪಿಟಲ್ಸ್ ಲೀಗ್‌ನಲ್ಲಿ ಆರು ಪಂದ್ಯಗಳನ್ನು ಆಡಿದ್ದು, ಮೂರು ಪಂದ್ಯಗಳನ್ನು ಗೆದ್ದು ಉಳಿದ ಮೂರನ್ನು ಕಳೆದುಕೊಂಡಿದ್ದು, ಆರು ಅಂಕಗಳನ್ನು ಕಲೆ ಹಾಕಿದೆ. ಶನಿವಾರ ನಡೆಯುವ ಪಂದ್ಯದಲ್ಲಿ ಡೆಲ್ಲಿ ಪಂಜಾಬ್ ತಂಡವನ್ನು ಮಣಿಸಿದಲ್ಲಿ ಅಂಕಪಟ್ಟಿಯಲ್ಲಿ ಸುಧಾರಣೆ ಕಾಣಬಹುದಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ಆಟಗಾರರು ರನ್‌ ಕಲೆ ಹಾಕುವಲ್ಲಿ ಪರದಾಟ ನಡೆಸಿದ್ದಾರೆ. ಕರ್ನಾಟಕದ ಸ್ಟಾರ್ ಆಟಗಾರ ಕೆಎಲ್ ರಾಹುಲ್ ಅಬ್ಬರದ ಆಟವನ್ನು ನಡೆಸುವ ಅನಿವಾರ್ಯತೆ ಇದೆ. ಇನ್ನು ಪತುಮ್ ನಿಸ್ಸಂಕಾ, ಟ್ರಿಸ್ಟನ್‌ ಸ್ಟಬ್ಸ್‌, ಡೇವಿಡ್ ಮಿಲ್ಲರ್ ಸ್ಥಿರ ಪ್ರದರ್ಶನ ನೀಡುವಲ್ಲಿ ಎಡವಿದ್ದಾರೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಅನುಭವಿ ವೇಗದ ಬೌಲರ್‌ ಮಿಚೆಲ್ ಸ್ಯಾಂಟ್ನರ್ ಅವರ ಅನುಪಸ್ಥಿತಿ ತಂಡಕ್ಕೆ ಬಹುವಾಗಿ ಕಾಡುತ್ತಿದೆ. ಉಳಿದಂತೆ ಯುವ ವೇಗದ ಬೌಲರ್‌ಗಳು ಕರಾರುವಾಕ್ ದಾಳಿಯನ್ನು ನಡೆಸಿ ತಂಡದ ಜಯದಲ್ಲಿ ಮಿಂಚಬೇಕಿದೆ.

Story first published: Saturday, April 25, 2026, 13:00 [IST]
Other articles published on Apr 25, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+