ಸಾಯಿ ಸುದರ್ಶನ್ ಶತಕ, ಟೈಟಾನ್ಸ್ ದಾಖಲೆಯ ಜಯ; GT, RCB, PBKS ಪ್ಲೇ ಆಫ್‌ಗೆ
ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ಅಮೋಘ ಪ್ರದರ್ಶನ ನೀಡಿದೆ. 18ನೇ ಆವೃತ್ತಿಯ 60ನೇ ಪಂದ್ಯದಲ್ಲಿ ಗುಜರಾತ್ 10 ವಿಕೆಟ್‌ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿ, ಪ್ಲೇ ಆಫ್‌ಗೆ ಪ್ರವೇಶ ಪಡೆದಿದೆ. ಗುಜರಾತ್ ಟೈಟಾನ್ಸ್ ಗೆಲುವು ಸಾಧಿಸುತ್ತಿದ್ದಂತೆ ಪಂಜಾಬ್ ಕಿಂಗ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸಹ ಪ್ಲೇ ಆಫ್‌ಗೆ ಪ್ರವೇಶ ಪಡೆದಿವೆ.
ಭಾನುವಾರ ನಡೆದ ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 3 ವಿಕೆಟ್‌ಗೆ 199 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ವಿಕೆಟ್ ನಷ್ಟವಿಲ್ಲದೆ ಇನ್ನು ಆರು ಎಸೆತ ಬಾಕಿ ಇರುವಂತೆ 205 ರನ್ ಬಾರಿಸಿ ಅಬ್ಬರಿಸಿದರು. ಈ ಮೂಲಕ ಐಪಿಎಲ್‌ನಲ್ಲಿ 200ಕ್ಕೂ ಹೆಚ್ಚು ರನ್‌ಗಳನ್ನು ವಿಕೆಟ್ ನಷ್ಟವಿಲ್ಲದೆ ಗೆದ್ದ ತಂಡ ಎಂಬ ಖ್ಯಾತಿಯನ್ನು ಗುಜರಾತ್ ಪಡೆದುಕೊಂಡಿದೆ.

ಮೂರು ತಂಡಗಳು ಪ್ಲೇ ಆಫ್‌ಗೆ
ಗುಜರಾತ್ ಟೈಟಾನ್ಸ್ ತಂಡ ಆಡಿದ 12 ಪಂದ್ಯಗಳಲ್ಲಿ 18 ಅಂಕ ಕಲೆ ಹಾಕಿದ್ದು, ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ. ಇನ್ನು ಪ್ಲೇ ಆಫ್‌ಗೆ ಪ್ರವೇಶ ಪಡೆದಿದೆ. ಆರ್‌ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು 17 ಅಂಕಗಳನ್ನು ಕಲೆ ಹಾಕಿದ್ದು, ಈ ಎರಡೂ ತಂಡಗಳು ಸಹ ಪ್ಲೇ ಆಫ್‌ಗೆ ಪ್ರವೇಶ ಪಡೆದಿವೆ.
ಭರ್ಜರಿ ಜೊತೆಯಾಟ
ಬೃಹತ್ ಮೊತ್ತ ಹಿಂಬಾಲಿಸಿದ ಗುಜರಾತ್ ಟೈಟಾನ್ಸ್ ತಂಡದ ಆರಂಭಿಕರು ಭರ್ಜರಿ ಜೊತೆಯಾಟದ ಕಾಣಿಕೆ ನೀಡಿದರು. ಈ ಜೋಡಿಯ ಆಟಕ್ಕೆ ಬ್ರೇಕ್ ಹಾಕುವಲ್ಲಿ ಡೆಲ್ಲಿ ಬೌಲರ್‌ಗಳು ವಿಫಲರಾದರು. ಈ ಜೋಡಿ ಗುಜರಾತ್ ಟೈಟನ್ಸ್‌ಗೆ ಅಗತ್ಯವಿದ್ದ ರನ್‌ಗಳನ್ನು ಕಲೆ ಹಾಕಿತು. ಅಲ್ಲದೆ ಐಪಿಎಲ್ ಇತಿಹಾಸದಲ್ಲಿ ಈ ಜೋಡಿ ದೊಡ್ಡ ದಾಖಲೆಯನ್ನು ಬರೆಯಿತು. ಐಪಿಎಲ್ ಇತಿಹಾಸದಲ್ಲಿ 200 ರನ್‌ಗಳನ್ನು ಬೆನ್ನಟ್ಟುವಾಗ ವಿಕೆಟ್ ನಷ್ಟವಿಲ್ಲದೆ ಈ ಸಾಧನೆ ಮಾಡಿದ ಹೆಗ್ಗಳಿಕೆಗೆ ಗುಜರಾತ್ ತಂಡದ್ದಾಗಿದೆ.
ಗುಜರಾತ್ ಪರ ಸಾಯಿ ಸುದರ್ಶನ್ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವರು 61 ಎಸೆತಗಳಲ್ಲಿ 12 ಬೌಂಡರಿ, 4 ಸಿಕ್ಸರ್ ಸಹಾಯದಿಂದ ಅಜೇಯ 108 ರನ್ ಸಿಡಿಸಿದರು. ಇನ್ನು ಶುಭಮನ್ ಗಿಲ್ 53 ಎಸೆತಗಳಲ್ಲಿ 3 ಬೌಂಡರಿ, 7 ಸಿಕ್ಸರ್ ಸಹಾಯದಿಂದ ಅಜೇಯ 93 ರನ್ ಬಾರಿಸಿ ತಂಡಕ್ಕೆ ಆಧಾರವಾದರು.
ರಾಹುಲ್ ಶತಕ
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭ ಕಳಪೆಯಾಗಿತ್ತು. ಫಾಫ್ ಡುಪ್ಲೇಸಿಸ್ (5) ದೊಡ್ಡ ಇನಿಂಗ್ಸ್ ಆಡುವಲ್ಲಿ ವಿಫಲರಾದರು. ಎರಡನೇ ವಿಕೆಟ್‌ಗೆ ಕೆಎಲ್ ರಾಹುಲ್ ಹಾಗೂ ಅಭಿಷೇಕ್ ಪೋರೆಲ್ ಉತ್ತಮ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ ಎರಡನೇ ವಿಕೆಟ್‌ಗೆ 52 ಎಸೆತಗಳಲ್ಲಿ 90 ರನ್ ಸಿಡಿಸಿತು. ಅಭಿಷೇಕ್ ಪೋರೆಲ್ 1 ಬೌಂಡರಿ, 3 ಸಿಕ್ಸರ್ ಸಹಾಯದಿಂದ 30 ರನ್ ಕಲೆ ಹಾಕಿ ಔಟ್ ಆದರು. ನಾಯಕ ಅಕ್ಷರ್ ಪಟೇಲ್ 25 ರನ್ ಬಾರಿಸಿ ಇಲ್ಲದ ಶಾಟ್‌ಗೆ ಮುಂದಾಗಿ ಔಟ್ ಆದರು.

ಆರಂಭಿಕರಾದ ಕೆಎಲ್ ರಾಹುಲ್ ಹಾಗೂ ಟ್ರಿಸ್ಟನ್ ಸ್ಟಬ್ಸ್ ಉತ್ತಮ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿಯ ಅಮೋಘ ಜೊತೆಯಾಟದ ನೆರವಿನಿಂದ ಡೆಲ್ಲಿ ಉತ್ತಮ ಮೊತ್ತವನ್ನು ಕಲೆ ಹಾಕಿತು. ನಾಲ್ಕನೇ ವಿಕೆಟ್‌ಗೆ ಈ ಜೊಡಿ ಅಜೇಯ 48 ರನ್‌ಗಳ ಜೊತೆಯಾಟ ನೀಡಿತು. ಇನ್ನು ಆರಂಭಿಕ ಕೆಎಲ್ ರಾಹುಲ್ ಅಮೋಘ ಬ್ಯಾಟಿಂಗ್ ನಡೆಸಿದರು. ಇವರು 65 ಎಸೆತಗಳಲ್ಲಿ 14 ಬೌಂಡರಿ, 4 ಸಿಕ್ಸರ್ ಸಹಾಯದಿಂದ ಅಜೇಯ 112 ರನ್ ಬಾರಿಸಿದರು. ಇದು ರಾಹುಲ್ ಅವರ ಐದನೇ ಶತಕವಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications