Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Saim Ayub: ಪಾಕಿಸ್ತಾನಕ್ಕೆ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ದೊಡ್ಡ ಆಘಾತ; ಸ್ಟಾರ್ ಬ್ಯಾಟರ್‌ಗೆ ಗಾಯ

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಗೆ ಅತಿಥ್ಯ ವಹಿಸಲು ಪಾಕಿಸ್ತಾನ ಸಜ್ಜಾಗುತ್ತಿದೆ. ಆದರೆ ಭಾರತ ತಂಡ ಪಂದ್ಯಗಳು ಮಾತ್ರ ದುಬೈನಲ್ಲಿ ನಡೆಯಲಿವೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಹೈಬ್ರಿಡ್ ಮಾದರಿಯಲ್ಲಿ ನಡೆಯಲಿದೆ. ಇದರ ನಡುವೆ ಪಾಕಿಸ್ತಾನಕ್ಕೆ ದೊಡ್ಡ ಆಘಾತ ಎದುರಾಗಿದೆ. ಸ್ಟಾರ್ ಯುವ ಬ್ಯಾಟರ್ ಸೈಮ್ ಅಯೂಬ್ ಗಾಯಗೊಂಡಿದ್ದಾರೆ. ಪರಿಣಾಮ ಸೈಮ್ ಅಯೂಬ್ ಆರು ವಾರಗಳ ಕಾಲ ಕ್ರಿಕೆಟ್‌ನಿಂದ ಹೊರಗುಳಿದಿದ್ದಾರೆ. ಹೀಗಾಗಿ ಪಾಕಿಸ್ತಾನ ತಂಡಕ್ಕೆ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಹಿನ್ನಡೆಯಾಗಿದೆ.

ಸೈಮ್ ಅಯೂಬ್ ತೀವ್ರವಾಗಿ ಗಾಯಗೊಂಡಿರುವುದರಿಂದ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡುವುದು ಅನುಮಾನವಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದಂದು ಫೀಲ್ಡಿಂಗ್ ಮಾಡುವಾಗ ಸೈಮ್ ಅಯೂಬ್ ಗಾಯಗೊಂಡಿದ್ದಾರೆ. ಅವರ ಕಾಲಿನ ಮಂಡಿ ಮುರಿತವಾಗಿರುವುದು ಎಂಆರ್‌ಐ ಸ್ಕ್ಯಾನ್ ಮೂಲಕ ತಿಳಿದು ಬಂದಿದೆ.

Saim Ayub injured before Champions Trophy 2025

ಆಗಿದ್ದೇನು?

ದಕ್ಷಿಣ ಆಫ್ರಿಕಾ ಇನ್ನಿಂಗ್ಸ್‌ ವೇಳೆ ಫೀಲ್ಡಿಂಗ್ ಮಾಡುತ್ತಿದ್ದ ಸೈಮ್ ಅಯೂಬ್ ಬೌಂಡರಿ ಗೆರೆ ಬಳಿ ಹೋಗುತ್ತಿದ್ದ ಚೆಂಡನ್ನು ತಡೆಯಲು ಪ್ರಯತ್ನಿಸಿದರು. ಈ ವೇಳೆ ಎಡುವಿದ ಸೈಮ್ ಅಯೂಬ್ ಗಾಯಗೊಂಡರು. ಅವರ ಕೆಳಗೆ ಬಿದ್ದ ರಭಸಕ್ಕೆ ಮೈದಾನದ ಮಣ್ಣು ಕಿತ್ತು ಮೇಲೆ ಬಂದಿತ್ತು. ನಂತರ ಸೈಮ್ ಅಯೂಬ್ ನಡೆಯಲು ಸಾಧ್ಯವಾಗಲಿಲ್ಲ. ತಕ್ಷಣ ವೈದ್ಯರ ತಂಡ ಮೈದಾನಕ್ಕೆ ಆಗಮಿಸಿತು. ಹೆಚ್ಚಿನ ಚಿಕಿತ್ಸೆಗಾಗಿ ಪಂದ್ಯದ ಮಧ್ಯೆದಲ್ಲೇ ಮೈದಾನದಿಂದ ಹೊರ ನಡೆದರು.

ಸೈಮ್ ಅಯೂಬ್‌ಗೆ ಆರು ವಾರಗಳ ವಿಶ್ರಾಂತಿಯನ್ನು ವೈದ್ಯರು ಶಿಫಾರಸು ಮಾಡಿದ್ದಾರೆ ಎಂದು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಮಾಹಿತಿ ನೀಡಿದೆ. ಸೈಮ್ ಅವರ ಬಲ ಕಾಲಿನ ಪಾದದ ಮೂಳೆ ಮುರಿತವಾಗಿದ. ಇದರಿಂದ ಚೇತರಿಸಿಕೊಳ್ಳಲು ಕನಿಷ್ಠ ಆರು ವಾರಗಳನ್ನು ತೆಗೆದುಕೊಳ್ಳುತ್ತದೆ ಎಂದು ಪಿಸಿಬಿ ಅಧಿಕಾರಿವೊಬ್ಬರು ತಿಳಿಸಿದ್ದಾರೆ.

ಆಸ್ಟ್ರೇಲಿಯಾ, ಜಿಂಬಾಬ್ವೆ ಮತ್ತು ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಸೈಮ್ ಅಯೂಬ್ ಅದ್ಭುತ ಪ್ರದರ್ಶನ ನೀಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಎರಡು ಸೇರಿದಂತೆ ಮೂರು ಶತಕಗಳನ್ನು ಗಳಿಸಿದ್ದಾರೆ. ಈ ತಿಂಗಳ ಕೊನೆಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಮತ್ತು ಫೆಬ್ರವರಿ 19 ರಂದು ಪಾಕಿಸ್ತಾನ ಮತ್ತು ದುಬೈ ವಿರುದ್ಧದ ಎರಡು ಟೆಸ್ಟ್ ಸರಣಿಯನ್ನು ಸೈಮ್ ಕಳೆದಕೊಂಡಿದ್ದಾರೆ. ಇದಲ್ಲದೆ, ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಫೆಬ್ರವರಿಯಲ್ಲಿ ನಡೆಯಲಿರುವ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ಜೊತೆಗಿನ ತ್ರಿಕೋನ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಸ್ಯಾಮ್ ಬದಲಿಗೆ ಇಮಾಮ್-ಉಲ್-ಹಕ್ ಟೆಸ್ಟ್ ಮತ್ತು ಫಖರ್ ಜಮಾನ್ ಅವರನ್ನು ಏಕದಿನ ತಂಡಕ್ಕೆ ಸೇರಿಸಿಕೊಳ್ಳುವ ಸಾಧ್ಯತೆಯಿದೆ.

Story first published: Sunday, January 5, 2025, 8:20 [IST]
Other articles published on Jan 5, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+