ಪಾಕಿಸ್ತಾನದ ಯುವ ಆರಂಭಿಕ ಬ್ಯಾಟರ್ ಸೈಮ್ ಅಯೂಬ್ ಕ್ರಿಕೆಟ್ ಲೋಕದಲ್ಲಿ ಹೊಸ ತಾರೆಯಾಗಿ ಹೊರಹೊಮ್ಮಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಸೈಮ್ ಅಯೂಬ್ ಎರಡು ಶತಕ ಬಾರಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಜೋಹಾನ್ಸ್‌ಬರ್ಗ್‌ನಲ್ಲಿ ಭಾನುವಾರ ನಡೆದ ಮೂರನೇ ಏಕದಿನ ಪಂದ್ಯದಲ್ಲಿ 22 ವರ್ಷದ ಸೈಮ್ ಅಯೂಬ್ 94 ಎಸೆತಗಳಲ್ಲಿ 13 ಬೌಂಡರಿ ಮತ್ತು 2 ಸಿಕ್ಸರ್‌ಗಳ ಸಹಾಯದಿಂದ 101 ರನ್ ಗಳಿಸಿದರು. ಈ ಸರಣಿಯಲ್ಲಿ ಇದು ಅಯೂಬ್ ಅವರ ಎರಡನೇ ಶತಕವಾಗಿದೆ. ಮೊದಲ ಪಂದ್ಯದಲ್ಲಿ 109 ರನ್‌ಗಳ ಇನಿಂಗ್ಸ್ ಆಡಿದ್ದ ಅಯೂಬ್ ಎರಡನೇ ಪಂದ್ಯದಲ್ಲಿ 25 ರನ್ ಗಳಿಸಿ ಔಟಾಗಿದ್ದರು. ಇದೀಗ ಮೂರನೇ ಏಕದಿನ ಪಂದ್ಯದಲ್ಲಿ ಅಯೂಬ್ ದಾಖಲೆ ಬರೆದಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಶತಕ ಬಾರಿಸಿದ ಸೈಮ್ ಅಯೂಬ್ ಟೀಮ್ ಇಂಡಿಯಾ ಇಬ್ಬರು ಸ್ಟಾರ್ ಬ್ಯಾಟರ್‌ಗಳಾದ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಅವರನ್ನು ಹಿಂದಿಕಿದ್ದಾರೆ. ಈ ವರ್ಷ, ಅಯೂಬ್ ಎಲ್ಲಾ ಮೂರು ಸ್ವರೂಪಗಳಲ್ಲಿ ಹೆಚ್ಚು ರನ್ ಗಳಿಸಿದ ವಿಷಯದಲ್ಲಿ ಹತ್ತನೇ ಸ್ಥಾನ ಪಡೆದಿದ್ದಾರೆ.

ಸೈಮ್ ಅಯೂಬ್ 34 ಪಂದ್ಯಗಳಲ್ಲಿ 33.69 ಸರಾಸರಿಯಲ್ಲಿ 1231 ರನ್ ಗಳಿಸಿದ್ದಾರೆ. ಶುಭಮನ್ ಗಿಲ್ 23 ಪಂದ್ಯಗಳಲ್ಲಿ 1189 ರನ್ ಗಳಿಸಿ 11ಣೇ ಸ್ಥಾನಕ್ಕೆ ಕುಸಿದಿದ್ದರೆ, ನಾಯಕ ರೋಹಿತ್ ಶರ್ಮಾ 27 ಪಂದ್ಯಗಳಲ್ಲಿ 1142 ರನ್ ಕಲೆ ಹಾಕಿ 13ನೇ ಸ್ಥಾನಕ್ಕೆ ಕುಳಿದಿದ್ದಾರೆ. ಸೈಮ್ ಅಯೂಬ್ ತಮ್ಮ ವೃತ್ತಿಜೀವನದ ಆರಂಭಕ್ಕೂ ಮನ್ನ ದಾಖಲೆ ಮಾಡಿರುವುದು ಪಾಕಿಸ್ತಾನ ತಂಡಕ್ಕೆ ಆನೆ ಬಲಬಂತಾಗಿದೆ.
ಪ್ರಸ್ತುತ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟ್ರೋಫಿಯ ಟೆಸ್ಟ್ ಸರಣಿ ಆಡುತ್ತಿದ್ದಾರೆ. ಆದರೆ, ಆಸ್ಟ್ರೇಲಿಯಾ ವಿರುದ್ಧ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಹೇಳಿಕೊಳ್ಳುವಂತ ಪ್ರದರ್ಶನ ನೀಡಿಲ್ಲ. ಈ ಇಬ್ಬರು ಸ್ಟಾರ್ ಬ್ಯಾಟರ್‌ಗಳ ಫಾರ್ಮ್‌ಗೆ ಮರಳುವ ಸಾಕಷ್ಟು ನಿರೀಕ್ಷೆಯಿದೆ. ಆಸ್ಟ್ರೇಲಿಯಾ ವಿರುದ್ಧ ಇನ್ನು ಎರಡು ಟೆಸ್ಟ್ ಪಂದ್ಯಗಳು ಬಾಕಿ ಉಳಿದಿವೆ. ಈ ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಪ್ರದರ್ಶನದ ಮೇಲೆ ಕುತೂಹಲ ಹೆಚ್ಚಿಸಿದೆ.
ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಕೊನೆಯ ಮತ್ತು ಮೂರನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ಮಳೆಯಿಂದಾಗಿ 47 ಓವರ್‌ಗಳಲ್ಲಿ 9 ವಿಕೆಟ್‌ಗೆ 309 ರನ್ ಗಳಿಸಿತು. ಪಾಕಿಸ್ತಾನ ಪರ ಸೈಮ್ ಅಯೂಬ್ 101 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಹೀಗಾಗಿ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ನೀಡಲಾಯಿತು. ಉತ್ತರವಾಗಿ ದಕ್ಷಿಣ ಆಫ್ರಿಕಾ ತಂಡ 271 ರನ್‌ಗಳಿಗೆ ಆಲೌಟ್ ಆಗುವ ಮೂಲಕ 36 ರನ್‌ಗಳಿಂದ ಸೋಲನುಭವಿಸಬೇಕಾಯಿತು. ಇದರೊಂದಿಗೆ ಪಾಕಿಸ್ತಾನ ದಕ್ಷಿಣ ಆಫ್ರಿಕಾದಲ್ಲಿ ಪಾಕಿಸ್ತಾನ ಸತತ ಮೂರನೇ ಬಾರಿಗೆ ಏಕದಿನ ಸರಣಿ ಗೆದ್ದಿತ್ತು.