ಟೀಮ್ ಇಂಡಿಯಾದ ಸ್ಪಿನ್ ಕೋಚ್ ಆಗಿ ಸಾಯಿರಾಜ್ ಬಹುತುಲೆ ನೇಮಕ
ಜೂನ್ 6 ರಿಂದ ಅಫ್ಘಾನಿಸ್ತಾನ ವಿರುದ್ಧ ಭಾರತ ತಂಡ ಏಕೈಕ ಟೆಸ್ಟ್ ಪಂದ್ಯವನ್ನು ಆಡಲಿದೆ. ಈ ಟೆಸ್ಟ್ ಸರಣಿಗೂ ಮುನ್ನ ಭಾರತೀಯ ಕ್ರಿಕೆಟ್ ನಿಯಂತ್ರಣಾ ಮಂಡಳಿ (ಬಿಸಿಸಿಐ) ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಭಾರತ ತಂಡದ ಮಾಜಿ ಸ್ಪಿನ್ ಬೌಲರ್ ಸಾಯಿರಾಜ್ ಬಹುತುಲೆ ಅವರನ್ನು ಸ್ಪಿನ್ ಬೌಲಿಂಗ್ ಕೋಚ್ ಆಗಿ ನೇಮಿಸಲಾಗಿದೆ. ನ್ಯೂ ಚಂಡೀಗಢದಲ್ಲಿ ಅಫ್ಘಾನಿಸ್ತಾನ ವಿರುದ್ಧ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯದ ವೇಳೆ ಇವರು ತಮ್ಮ ಜವಾಬ್ದಾರಿಯನ್ನು ನಿಭಾಯಿಸಲು ಸಿದ್ಧರಾಗಿದ್ದಾರೆ.
ಸಾಯಿರಾಜ್ ಬಹುತುಲೆ ಅವರು ಐಪಿಎಲ್ 2026 ರಲ್ಲಿ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ತಂಡದ ಸ್ಪಿನ್-ಬೌಲಿಂಗ್ ಕೋಚ್ ಆಗಿದ್ದರು. ಅವರು ದೇಶೀಯ ಕ್ರಿಕೆಟ್‌ನಲ್ಲಿ ಕೇರಳ ಮತ್ತು ಬಂಗಾಳ ತಂಡಗಳೊಂದಿಗೆ ಸಹ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಇವರು 2018 ರಿಂದ 2021 ರವರೆಗೆ ರಾಜಸ್ಥಾನ್ ರಾಯಲ್ಸ್ ತಂಡದ ಕೋಚಿಂಗ್ ಸಿಬ್ಬಂದಿಯಾಗಿಯೂ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಅಲ್ಲದೆ ಇವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ (ಎನ್‌ಸಿಎ)ನಲ್ಲೂ ಬೌಲರ್‌ಗಳನ್ನು ರೂಪಿಸುವಲ್ಲಿ ಶ್ರಮಿಸಿದ್ದಾರೆ.

ರಾಹುಲ್ ದ್ರಾವಿಡ್ ಅವರು ಟೀಮ್ ಇಂಡಿಯಾದ ಮುಖ್ಯ ಕೋಚ್ ಹುದ್ದೆಯನ್ನು ಅಲಂಕರಿಸಿದ್ದಾಗ ಸಾಯಿರಾಜ್ ಬಹುತುಲೆ ಭಾರತ-ಎ ಮತ್ತು ಕೆಲವು ಅಂತಾರಾಷ್ಟ್ರೀಯ ಸರಣಿಗಳಲ್ಲಿ ಸಹಾಯಕ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು.
ಬಹುತುಲೆ ಸಾಧನೆ
ಸಾಯಿರಾಜ್ ಬಹುತಲೆ ಅವರು 1997 ರಲ್ಲಿ ಭಾರತದ ಪರ ಪದಾರ್ಪಣೆ ಮಾಡಿದರು. ಇವರು ಕೊನೆಯ ಬಾರಿಗೆ 2003 ರಲ್ಲಿ ತಮ್ಮ ಕೊನೆಯ ಪಂದ್ಯವನ್ನು ಆಡಿದರು. ಈ ಅವಧಿಯಲ್ಲಿ ಇವರು 2 ಟೆಸ್ಟ್, 8 ಏಕದಿನ ಪಂದ್ಯಗಳನ್ನು ಆಡಿದ ಅನುಭವ ಇವರದ್ದಾಗಿದೆ. ಇವರು 188 ಪ್ರಥಮ ದರ್ಜೆ ಪಂದ್ಯಗಳಲ್ಲಿ 630 ವಿಕೆಟ್‌ಗಳನ್ನು ಮತ್ತು 143 ಲಿಸ್ಟ್-ಎ ಪಂದ್ಯಗಳಲ್ಲಿ 197 ವಿಕೆಟ್‌ಗಳನ್ನು ಪಡೆದಿದ್ದಾರೆ.
ಟೀಮ್ ಇಂಡಿಯಾ ಸ್ಪಿನ್ ಬೌಲಿಂಗ್ ಕೋಚ್ ಇರಲಿಲ್ಲ. ಇದಕ್ಕೂ ಮೊದಲು ವೇಗದ ಬೌಲಿಂಗ್ ಕೋಚ್ ಆಗಿ ಮೋರ್ನೆ ಮೊರ್ಕೆಲ್ ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನು ಸಾಯಿರಾಜ್ ಬಹುತುಲೆ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರೊಂದಿಗೆ ಕೆಲಸ ಮಾಡಲು ಸಿದ್ಧರಾಗಿದ್ದಾರೆ. ಉಳಿದಂತೆ ಬ್ಯಾಟಿಂಗ್ ಕೋಚ್ ಆಗಿ ಸಿತಾಂಶು ಕೊಟಕ್, ಫೀಲ್ಡಿಂಗ್ ಕೋಚ್ ಆಗಿ ಟಿ ದಿಲೀಪ್, ಸಹಾಯಕ ಕೋಚ್ ರಿಯಾನ್ ಟೆನ್ ಡೋಸ್ಚೇಟ್ ಸೇವೆ ಸಲ್ಲಿಸುತ್ತಿದ್ದಾರೆ. ಜೂನ್ 6 ರಂದು ಭಾರತ ತಂಡ ಅಫ್ಘಾನಿಸ್ತಾನ ವಿರುದ್ಧ ಏಕೈಕ ಟೆಸ್ಟ್ ಪಂದ್ಯವನ್ನು ಆಡಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications