ನ್ಯೂಜಿಲೆಂಡ್ ವಿರುದ್ಧ ಇಂಗ್ಲೆಂಡ್ ಭರ್ಜರಿ ಜಯ: ಟಿ20 ಕ್ರಿಕೆಟ್‌ನಲ್ಲಿ ಈ ರೀತಿಯಾಗಿದ್ದು ಇದು 13ನೇ ಬಾರಿ
ಕ್ರೈಸ್ಟ್ ಚರ್ಚ್: ನ್ಯೂಜಿಲೆಂಡ್ ಪ್ರವಾಸದಲ್ಲಿ ಇಂಗ್ಲೆಂಡ್ ಭರ್ಜರಿ ಪ್ರದರ್ಶನ ನೀಡಿದ್ದು, ಎರಡನೇ ಟಿ20 ಪಂದ್ಯವನ್ನು 65 ರನ್‌ಗಳಿಂದ ಜಯ ಸಾಧಿಸಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ, ನ್ಯೂಜಿಲೆಂಡ್‌ನ ಎಲ್ಲಾ ಬ್ಯಾಟ್ಸ್‌ಮನ್‌ಗಳು ಕ್ಯಾಚ್ ಔಟ್ ಆದರು. ಮತ್ತು ಟಿ20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಎಲ್ಲಾ ಬ್ಯಾಟರ್‌ಗಳು ಕ್ಯಾಚ್ ಔಟ್ ಆಗಿರುವುದು ಇದು 13 ನೇ ಬಾರಿಯಾಗಿದೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡದ ಆರಂಭ ಕಳಪೆಯಾಗಿತ್ತು. ಜೋಸ್ ಬಟ್ಲರ್ (4) ರನ್ ಕಲೆ ಹಾಕುವಲ್ಲಿ ವಿಫಲರಾದರು. ಎರಡನೇ ವಿಕೆಟ್‌ಗೆ ಆರ್‌ಸಿಬಿ ತಂಡದ ಪರ ಆಡಿರುವ ಇಬ್ಬರು ಆಟಗಾರರಾದ ಫಿಲ್ ಸಾಲ್ಟ್ ಹಾಗೂ ಜಾಕಬ್ ಬೇತೆಲ್ ಸ್ಥಿರ ಪ್ರದರ್ಶನ ನೀಡಿತು. ಈ ಜೋಡಿ 24 ಎಸೆತಗಳಲ್ಲಿ 44 ರನ್ ಸೇರಿಸಿತು. ಈ ಅವಧಿಯಲ್ಲಿ ಜಾಕಬ್ 12 ಎಸೆತಗಳಲ್ಲಿ 2 ಬೌಂಡರಿ, 2 ಸಿಕ್ಸರ್ ಸಹಾಯದಿಂದ 24 ರನ್ ಸಿಡಿಸಿದರು.

ಮೂರನೇ ವಿಕೆಟ್‌ಗೆ ಫಿಲ್ ಸಾಲ್ಟ್ ಹಾಗೂ ಹ್ಯಾರಿ ಬ್ರೂಕ್ ಜೋಡಿ ಅಮೋಘ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿಯನ್ನು ಕಟ್ಟಿ ಹಾಕುವ ನ್ಯೂಜಿಲೆಂಡ್ ತಂಡದ ಆಸೆ ಮಣ್ಣು ಪಾಲಾಯಿತು. ಈ ಜೋಡಿ 69 ಎಸೆತಗಳಲ್ಲಿ 129 ರನ್ ಸೇರಿಸಿತು. ಹ್ಯಾರಿ ಬ್ರೂಕ್ 35 ಎಸೆತಗಳಲ್ಲಿ 6 ಬೌಂಡರಿ, 5 ಸಿಕ್ಸರ್ ಸಹಾಯದಿಂದ 78 ರನ್ ಸಿಡಿಸಿದರು. ಈ ವೇಳೆ ಇವರ ಸ್ಟ್ರೈಕ್ ರೇಟ್ 222 ಆಗಿತ್ತು. ಇವರು ಔಟ್ ಆದರೂ ಸಹ ತಮ್ಮ ನೈಜ್ಯ ಆಟವನ್ನು ಮುಂದುವರೆಸಿದ ಫಿಲ್ ಸಾಲ್ಟ್ 56 ಎಸೆತಗಳಲ್ಲಿ 11 ಬೌಂಡರಿ, 1 ಸಿಕ್ಸರ್ ನೆರವಿನಿಂದ 85 ರನ್ ಬಾರಿಸಿ ಅಬ್ಬರಿಸಿದರು.
ಕೆಳ ಕ್ರಮಾಂಕದಲ್ಲಿ ಟಾಮ್ ಲಾಥಮ್ ಅಜೇಯ 29, ಆಲ್‌ರೌಂಡರ್ ಸ್ಯಾಮ್ ಕರನ್ ಅಜೇಯ 8 ರನ್ ಸಿಡಿಸಿದರು. ಅಂತಿಮವಾಗಿ ಇಂಗ್ಲೆಂಡ್ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 236 ರನ್ ಸೇರಿಸಿತು. ಕಿವೀಸ್ ಪರ ಕೈಲ್ ಜೈಮಿಸನ್ 2 ವಿಕೆಟ್ ಉರುಳಿಸಿದರು.
ರನ್ ಕಲೆ ಹಾಕಲು ಕಿವೀಸ್ ಪರದಾಟ
ಗುರಿಯನ್ನು ಬೆನ್ನಟ್ಟಿದ ನ್ಯೂಜಿಲೆಂಡ್ ತಂಡದ ಬ್ಯಾಟರ್‌ಗಳು ಸಮಯೋಚಿತ ಬ್ಯಾಟಿಂಗ್ ನಡೆಸುವಲ್ಲಿ ವಿಫಲರಾದರು. ತಂಡದ ಪರ ಮೂರನೇ ವಿಕೆಟ್‌ಗೆ ಟಿಮ್ ಸೀಫರ್ಟ್ (39) ಹಾಗೂ ಮಾರ್ಕ್ ಚಾಂಪಮನ್ (28) ಅರ್ಧಶತಕ ಜೊತೆಯಾಟವನ್ನು ನೀಡಿ ತಂಡಕ್ಕೆ ಆಸರೆಯಾಯಿತು. 7ನೇ ವಿಕೆಟ್‌ಗೆ ಜೇಮ್ಸ್ ನೀಶಾಮ್ (17) ಹಾಗೂ ಮಿಚೆಲ್ ಸ್ಯಾಂಟ್ನರ್ (36) ಸಹ ಅರ್ಧಶತಕದ ಕಾಣಿಕೆ ನೀಡಿದರು. ಅಂತಿಮವಾಗಿ ಕಿವೀಸ್ 18 ಓವರ್‌ಗಳಲ್ಲಿ 171 ರನ್‌ಗಳಿಗೆ ಆಲೌಟ್ ಆಯಿತು. ಇಂಗ್ಲೆಂಡ್ ತಂಡದ ಪರ ಆದೀಲ್ ರಶೀದ್ 4 ವಿಕೆಟ್ ಉರುಳಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications