ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ನಾಲ್ಕನೇ ಟೆಸ್ಟ್ ಪಂದ್ಯ ಮೆಲ್ಬೋರ್ನ್‌ನಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾದ ಪರ 19 ವರ್ಷದ ಯುವ ಆಟಗಾರ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಪಡೆದರು. ಈ ವೇಳೆ ಸಿಕ್ಕ ಅವಕಾಶವನ್ನು ಅಮೋಘ ಬ್ಯಾಟಿಂಗ್ ನಡೆಸಿದ, ಸ್ಯಾಮ್ ಕಾನ್‌ಸ್ಟಾಸ್ ಹಲವು ದಾಖಲೆಗಳನ್ನು ಬರೆದಿದ್ದಾರೆ. ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಆಸೀಸ್ ಪರ ಅಬ್ಬರದ ಆರಂಭ ನೀಡಿದ ಸ್ಯಾಮ್ ಕಾನ್‌ಸ್ಟಾಸ್ ಆರ್ಭಟಿಸಿದರು.
ಐತಿಹಾಸಿಕ ಮೆಲ್ಬೋರ್ನ್ ಅಂಗಳದಲ್ಲಿ ಕ್ಲಾಸ್ ಇನಿಂಗ್ಸ್ ಅರಂಭಿಸಿದ ಸ್ಯಾಮ್ ಕಾನ್‌ಸ್ಟಾಸ್ ರನ್‌ಗಳನ್ನು ಕಲೆ ಹಾಕಿ ಮಿಂಚಿದರು. ಇವರು ಭಾರತದ ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರಿತ್ ಬುಮ್ರಾ ಅವರನ್ನು ಮನ ಬಂದಂತೆ ಥಳಿಸಿದ, ಯುವ ಬ್ಯಾಟರ್ ಹೊಸ ಭರವಸೆ ಮೂಡಿಸಿದರು. ಟೆಸ್ಟ್ ಕ್ರಿಕೆಟ್‌ನಲ್ಲಿ ಏಕದಿನ ಶೈಲಿಯಲ್ಲಿ ಬ್ಯಾಟ್ ಮಾಡಿದ ಜೋಡಿ ಆರ್ಭಟಿಸಿದರು. ಇವರ ಆಟವನ್ನು ಕಂಡು ಅಭಿಮಾನಿಗಳು ಇವರು ಐಪಿಎಲ್‌ನಲ್ಲಿ ಯಾವ ತಂಡದ ಪರ ಆಡುತ್ತಾರೆ ಎಂಬುದರ ಬಗ್ಗೆ ಹುಡುಕಲು ಆರಂಭಿಸಿದ್ದಾರೆ. ಇದಕ್ಕೆ ಉತ್ತರ ಇಲ್ಲಿದೆ.

ಸ್ಯಾಮ್ ಕಾನ್‌ಸ್ಟಾಸ್ ಆಸ್ಟ್ರೇಲಿಯಾದ ದೇಶೀಯ ಟೂರ್ನಿಯಲ್ಲಿ ಅಬ್ಬರದ ಆಟವನ್ನು ಆಡಿ ಗಮನ ಸೆಳೆದಿದ್ದರು. ಅಲ್ಲದೆ ಪಿಎಂ ಇಲೆವೆನ್ ಪರ ಭಾರತದ ವಿರುದ್ಧ ಅಭ್ಯಾಸ ಪಂದ್ಯದಲ್ಲಿ ಅಬ್ಬರಿಸಿದರು. ಶೆಫೀಲ್ಡ್ ಶೀಲ್ಡ್ ದೇಶೀಯ ಪಂದ್ಯಾವಳಿಯ ಒಂದೇ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಶತಕಗಳನ್ನು ಗಳಿಸುವ ಮೂಲಕ ಅವರು ಮೊದಲ ಬಾರಿಗೆ ಬೆಳಕಿಗೆ ಬಂದರು. ಬಿಗ್ ಬ್ಯಾಷ್ ಲೀಗ್‌ನಲ್ಲಿ ಸಿಡ್ನಿ ಥಂಡರ್ ಪರ ಬಿರುಗಾಳಿಯ ಇನ್ನಿಂಗ್ಸ್‌ಗಳನ್ನು ಆಡುವ ಮೂಲಕ ಟಿ20 ಕ್ರಿಕೆಟ್‌ನಲ್ಲಿ ತಮ್ಮದೇ ಆದ ಛಾಪು ಮೂಡಿಸಿದರು.
ಟೆಸ್ಟ್ ಕ್ರಿಕೆಟ್‌ನಲ್ಲಿ ಟಿ20 ರೀತಿ ಬ್ಯಾಟ್ ಮಾಡಿದ ಸ್ಯಾಮ್ ಕಾನ್‌ಸ್ಟಾಸ್ ಬಿರುಸಿನ ಬ್ಯಾಟಿಂಗ್ ಶೈಲಿಯಿಂದ ವಿಶ್ವದಾದ್ಯಂತ ಗುರುತಿಸಿಕೊಂಡವರು. ಇವರು ಐಪಿಎಲ್ 2025ರಲ್ಲಿ ಆಡದಿರುವುದು ನಿಜಕ್ಕೂ ಅಭಿಮಾನಿಗಳಿಗೆ ಬೇಸರ ತರಿಸಿದೆ. ಏಕೆಂದರೆ ಇವರ ಹೆಸರನ್ನೇ ಐಪಿಎಲ್ ಮೆಗಾ ಹರಾಜು ಪಟ್ಟಿಯಲ್ಲಿ ಸೇರಿಸಿರಲಿಲ್ಲ. ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಈಗ ಪದಾರ್ಪಣೆ ಮಾಡಿದ್ದು, ಇದೇ ಸ್ಥಿರತೆಯಲ್ಲಿ ಬ್ಯಾಟಿಂಗ್ ಮಾಡಿದ್ದೇ ಆದಲ್ಲಿ ಖಂಡಿತವಾಗಿಯೂ ಐಪಿಎಲ್ 2026ರಲ್ಲಿ ಕಾಣಿಸಿಕೊಳ್ಳುಬಹುದು.

ಸ್ಯಾಮ್ ಬಿಬಿಎಲ್‌ನಲ್ಲಿ ಸಿಡ್ನಿ ಥಂಡರ್ ಪರ ಆಡುತ್ತಾ, ಅಡಿಲೇಡ್ ಸ್ಟ್ರೈಕರ್ಸ್ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಿದರು. ತಾವಾಡಿದ ಮೊದಲ ಪಂದ್ಯದಲ್ಲಿ 27 ಎಸೆತಗಳಲ್ಲಿ 56 ರನ್‌ಗಳ ಇನಿಂಗ್ಸ್ ಕಟ್ಟಿ ಎಲ್ಲರ ಗಮನ ಸೆಳೆದರು. ಇದೇ ಪಂದ್ಯದಲ್ಲಿ ಇವರು ಕೇವಲ 20 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಎಲ್ಲರ ಗಮನ ಸೆಳೆದರು.
ನಾಲ್ಕನೇ ಪಂದ್ಯದ ಎರಡನೇ ಇನಿಂಗ್ಸ್ ಹಾಗೂ ಐದನೇ ಟೆಸ್ಟ್‌ನಲ್ಲಿ ಇವರು ಹೇಗೆ ಬ್ಯಾಟಿಂಗ್ ಮಾಡುತ್ತಾರೆ ಎಂಬುದರ ಅಭಿಮಾನಿಗಳು ಚಿತ್ತ ನೆಟ್ಟಿದ್ದಾರೆ.