For Quick Alerts
ALLOW NOTIFICATIONS  
For Daily Alerts
 

Shubman Gill: ರೋಹಿತ್ ನಂತರ ಗಿಲ್ ಟೀಮ್ ಇಂಡಿಯಾದ ನಾಯಕ

ಟೀಮ್ ಇಂಡಿಯಾ 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆಲ್ಲಲು ದೂರವಿಲ್ಲ. ನಾಯಕ ರೋಹಿತ್ ಶರ್ಮಾ ಅವರನ್ನು ಎಲ್ಲೆಡೆ ಪ್ರಶಂಸಿಸಲಾಗುತ್ತಿದೆ. ಆದರೆ ಈಗ ಹಿಟ್‌ಮ್ಯಾನ್ ತನ್ನ ವೃತ್ತಿಜೀವನದ ಅಂಚಿನಲ್ಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ಭಾರತ ತಂಡದ ಮ್ಯಾನೇಜ್ಮೆಂಟ್ ಭವಿಷ್ಯಕ್ಕಾಗಿ ಮಾರ್ಗಸೂಚಿಯನ್ನು ಸಿದ್ಧಪಡಿಸುವಲ್ಲಿ ನಿರತವಾಗಿದೆ. ಮಾಜಿ ಆಟಗಾರ ಸಂಜಯ್ ಬಂಗಾರ್ ಭವಿಷ್ಯದ ನಾಯಕನ ಬಗ್ಗೆ ಭವಿಷ್ಯ ನುಡಿದಿದ್ದಾರೆ.

ಭಾನುವಾರ ನಡೆದ ಚಾಂಪಿಯನ್ಸ್ ಟ್ರೋಫಿಯ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಆರು ವಿಕೆಟ್‌ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ ಶತಕ ಹೊರೆತುಪಡಿಸಿದರೆ, ಶುಭಮನ್ ಗಿಲ್ 46 ರನ್ ಗಳಿಸಿದ್ದರು. ಇದಕ್ಕೂ ಮೊದಲು ಅವರು ಬಾಂಗ್ಲಾದೇಶ ವಿರುದ್ಧ ಶತಕ ಗಳಿಸಿ ಮಿಂಚಿದ್ದರು. ಇದಾದ ನಂತರ ಟೀಮ್ ಇಂಡಿಯಾದ ಮುಂದಿನ ನಾಯಕ ಗಿಲ್ ಎನ್ನಲಾಗುತ್ತಿದೆ.

Sanjay Bangar predicts Shubman Gill to captain Team India after Rohit Sharma

ಟೀಮ್ ಇಂಡಿಯಾ ಮಾಜಿ ನಾಯಕ ನವಜೋತ್ ಸಿಂಗ್ ಸಿಧು ಅವರು ಶುಭಮನ್ ಗಿಲ್ ಅದ್ಭುತ ಬ್ಯಾಟಿಂಗ್ ಪ್ರದರ್ಶನಕ್ಕೆ ಮನ ಸೋತಿದ್ದಾರೆ. ಅಲ್ಲದೆ, ಸಂಜಯ್ ಬಂಗಾರ್ ಅವರ ಮಾತುಗಳನ್ನು ನವಜೋತ್ ಸಿಂಗ್ ಸಿಧು ಬೆಂಬಲಿಸಿದ್ದಾರೆ.

ಮುಂದಿನ ವರ್ಷಗಳಲ್ಲಿ ಭಾರತ ತಂಡದ ಉಸ್ತುವಾರಿ ವಹಿಸಿಕೊಳ್ಳುವ ಆಟಗಾರ ಶುಭಮನ್ ಗಿಲ್ ಅವರು ಎಂಬುದು ಸ್ಪಷ್ಟ ಎಂದು ಸಂಜಯ್ ಬಂಗಾರ್ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ. ತಂಡಕ್ಕೆ ಆರಂಭಿಕರಾಗಿ ಅವರ ಅಡಿಪಾಯ ನಿಜವಾಗಿಯೂ ಬಲಿಷ್ಠವಾಗಿದೆ. ಇದರಲ್ಲಿ ಸುಮಾರು ಎರಡೂವರೆ ವರ್ಷಗಳ ಏಕದಿನ ಪಂದ್ಯಗಳ ಪ್ರದರ್ಶನವೂ ಸೇರಿದೆ. ಅವರು ಏಕದಿನ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ ಎಂದು ಗಿಲ್ ಅವರನ್ನು ಬಂಗಾರ್ ಹೊಗಳಿದಿದ್ದಾರೆ.

ಏಕದಿನ ಕ್ರಿಕೆಟ್‌ನಲ್ಲಿ ಉತ್ತಮ ಫಾರ್ಮ್‌ನಲ್ಲಿರುವ ಶುಭಮನ್ ಗಿಲ್ ಅವರನ್ನು ಸಿಧು ಶ್ಲಾಘಿಸಿದ್ದಾತೆ. 'ನೋಡಿ, ಆಲದ ಮರದ ಕೆಳಗೆ ಏನೂ ಬೆಳೆಯುವುದಿಲ್ಲ. ಹಾಗೆಯೇ ಭಾರತ ಕ್ರಿಕೆಟ್‌ನ ಆಲದ ಮರಗಳು ಮೂಲತಃ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ. ಆದರೆ ನೀವು ಶುಭಮನ್ ಗಿಲ್ ಅವರನ್ನು ನೋಡಿದಾಗ, ಈ ಆಟಗಾರ ಆ ಆಲದ ಮರದ ನೆರಳಿನಿಂದ ಹೊರಬಂದು ಸ್ಟಾರ್ ಆಟಗಾರನಾಗಿದ್ದಾರೆ ಎಂದು ಸಿಧು ಹೇಳಿದ್ದಾರೆ.

ರೋಹಿತ್ ಶರ್ಮಾ ನಂತರ ಕೆಎಲ್ ರಾಹುಲ್, ರಿಷಭ್ ಪಂತ್ ಮತ್ತು ಹಾರ್ದಿಕ್ ಪಾಂಡ್ಯ ಕೂಡ ಭಾರತ ಏಕದಿನ ತಂಡ ನಾಯಕತ್ವದ ರೇಸ್‌ನಲ್ಲಿದ್ದಾರೆ. ಕೆಎಲ್ ರಾಹುಲ್ ಪ್ರಸ್ತುತ ಚಾಂಪಿಯನ್ಸ್ ಟ್ರೋಫಿಯಲ್ಲಿ ತಂಡದ ಭಾಗವಾಗಿದ್ದಾರೆ. ಆದರೆ ರಿಷಭ್ ಪಂತ್‌ಗೆ ಸದ್ಯಕ್ಕೆ ಅವಕಾಶ ಸಿಕ್ಕಿಲ್ಲ. ಹಾರ್ದಿಕ್ ಪಾಂಡ್ಯ ಟೀಮ್ ಇಂಡಿಯಾದ ನಾಯಕರೂ ಆಗಿದ್ದಾರೆ. ಆದರೆ ಟಿ20ಯಲ್ಲಿ ಅವರನ್ನು ಬದಿಗಿಟ್ಟು ಸೂರ್ಯಕುಮಾರ್ ಯಾದವ್ ಅವರನ್ನು ನಾಯಕರನ್ನಾಗಿ ಮಾಡಲಾಯಿತು. ಅಲ್ಲದೆ, ಹಾರ್ದಿಕ್ ಬದಲಿಗೆ ಶುಭಮನ್ ಗಿಲ್ ಅವರಿಗೆ ಉಪನಾಯಕತ್ವ ನೀಡಲಾಯಿತು. ಇಂತಹ ಪರಿಸ್ಥಿತಿಯಲ್ಲಿ, ಗಿಲ್ ಅವರನ್ನು ಭವಿಷ್ಯದ ನಾಯಕ ಎಂದು ಪರಿಗಣಿಸಲಾಗುತ್ತಿದೆ.

Story first published: Tuesday, February 25, 2025, 9:55 [IST]
Other articles published on Feb 25, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+