ಪುಣೆ ಟೆಸ್ಟ್ ಸೋಲಿಗೆ ಯಾರು ಕಾರಣ? ಮಾಜಿ ಆಟಗಾರ ಹೇಳಿದ್ದೇನು?
ತವರಿನಲ್ಲಿ 12 ವರ್ಷಗಳ ಬಳಿಕ ಟೀಮ್ ಇಂಡಿಯಾ ಮುಖಭಂಗ ಅನುಭವಿಸಿದೆ. ಈ ಸೋಲಿಗೆ ಭಾರತದ ಮಾಜಿ ಆಟಗಾರರು ತಮ್ಮ ತಮ್ಮ ಅಭಿಪ್ರಾಯಗಳನ್ನು ನೀಡಿದ್ದಾರೆ. ಈಗ ಈ ಸಾಲಿಗೆ ಟೀಮ ಇಂಡಿಯಾ ಮಾಜಿ ಆಟಗಾರ ಸಂಜಯ್ ಮಾಂಜ್ರೇಕರ್ ಸೇರಿಕೊಂಡಿದ್ದಾರೆ. ಹಾಗಿದ್ದಾರೆ ಸಂಜಯ್ ಅವರು ಯಾರನ್ನು ಗುರಿಯಾಗಿಸಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಟೀಮ್ ಇಂಡಿಯಾ ಹಾಗೂ ನ್ಯೂಜಿಲೆಂಡ್ ನಡುವಣ ಎರಡನೇ ಟೆಸ್ಟ್‌ನಲ್ಲಿ ಆತಿಥೇಯ ತಂಡ ಸೋಲು ಕಂಡಿದೆ. ಈ ಮೂಲಕ ರೋಹಿತ್ ಪಡೆ ತವರಿನಲ್ಲಿ ಸರಣಿ ಸೋಲನ್ನು ಅನುಭವಿಸಿದೆ. ಬೆಂಗಳೂರಿನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಸೋಲು ಕಂಡಿದ್ದ ಭಾರತ, ಎರಡನೇ ಟೆಸ್ಟ್‌ನಲ್ಲಿ 113 ರನ್‌ಗಳಿಂದ ಕೈ ಚೆಲ್ಲಿದೆ. ಈ ಪಂದ್ಯದ ಬಳಿಕ ಟೀಮ್ ಇಂಡಿಯಾದ ಪ್ರದರ್ಶನದ ಬಗ್ಗೆ ಮಾಜಿ ಆಟಗಾರರು ತಮ್ಮ ಅಭಿಪ್ರಾಯ ನೀಡುತ್ತಿದ್ದಾರೆ.

ಸ್ಪಿನ್ ಬೌಲರ್‌ಗಳ ವಿರುದ್ಧ ಹೆಣಗಾಟ
ಸರ್ಫರಾಜ್ ಖಾನ್ ಅವರು ತಂಡದಲ್ಲಿದ್ದಾಗಲೂ, ಅವರಿಗಿಂತ ಮೊದಲು ವಾಷಿಂಗ್ಟನ್ ಸುಂದರ್ ಅವರನ್ನು ಆಡಿಸಿದಕ್ಕ ಸಂಜಯ್ ಮಾಂಜ್ರೇಕರ್ ಪ್ರಶ್ನೆ ಎತ್ತಿದ್ದಾರೆ. ಇನ್ನು ಟೀಮ್ ಇಂಡಿಯಾ ಈ ಟೆಸ್ಟ್‌ನಲ್ಲಿ ಕೊಂಚ ಡಿಫೆನ್ಸ್ ಚೆನ್ನಾಗಿ ಆಡಬೇಕಿತ್ತು. ಟೀಮ್ ಇಂಡಿಯಾದ ಬ್ಯಾಟರ್‌ಗಳು ಜವಾಬ್ದಾರಿಯನ್ನು ಮರೆತರು. ಇಲ್ಲದಿದ್ದರೆ ಈ ಪಂದ್ಯ ಇನ್ನು ಹತ್ತರಿಕ್ಕೆ ಹೋಗುತ್ತಿತ್ತು ಎಂದು ತಿಳಿಸಿದ್ದಾರೆ.
ಮಧ್ಯಮ ಕ್ರಮಾಂಕದ ಶುಭ್‌ಮನ್ ಗಿಲ್ ಮತ್ತು ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಕ್ರೀಸ್‌ನಲ್ಲಿದ್ದಾಗ, ಅವರು ಭಾರತದ ಪರ ಪಂದ್ಯವನ್ನು ತಿರುಗಿಸಬಹುದು ಎಂದು ಎಲ್ಲರೂ ಅಂದಾಜಿಸಿದ್ರು. ಎಲ್ಲರ ಲೆಕ್ಕಾಚಾರ ಉಲ್ಟಾ ಆಗಿದೆ. ಈ ಸ್ಪಿನ್ ಟ್ರ್ಯಾಕ್‌ನಲ್ಲಿ ಶುಭಮನ್ ಗಿಲ್ ಬ್ಯಾಟ್ ಮಾಡಲು ವಿಫಲರಾಗಿದ್ದಾರೆ. ಸ್ಪಿನ್ಹ ಬೌಲರ್‌ಗಳನ್ನು ಎದುರಿಸುವಲ್ಲಿ ಗಿಲ್ ಹೋರಾಡಿದ್ದಾರೆ ಎಂದು ಸಂಜಯ್ ಮಾಂಜ್ರೇಕರ್ ಹೇಳಿದ್ದಾರೆ.

ವಿರಾಟ್ ಬಗ್ಗೆ ಹೇಳಿದ್ದೇನು?
ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಆಟದ ಬಗ್ಗೆಯೂ ಸಂಜಯ್ ಮಂಜ್ರೇಕರ್ ಪ್ರಶ್ನೆಗಳನ್ನು ಎತ್ತಿದ್ದಾರೆ. ವಿರಾಟ್ ಕೊಹ್ಲಿ, ಮಿಚೆಲ್ ಸ್ಯಾಂಟ್ನರ್ ಅವರ ಲೆಂಥ್ ಜಡ್ಜ್ ಮಾಡುವಲ್ಲಿ ಎಡವಿದ್ದಾರೆ. ಅಲ್ಲದೆ ಟೀಮ್ ಇಂಡಿಯಾದ ಆಟಗಾರರು ಸ್ಪಿನ್ ಬೌಲರ್‌ಗಳ ವಿರುದ್ಧ ತಮ್ಮ ಬತ್ತಳಿಕೆಯಲ್ಲಿನ ಶಾಟ್‌ಗಳನ್ನು ಸರಿಯಾಗಿ ಬಳಸಲಿಲ್ಲ. ಹೆದರುತ್ತಾ ಬ್ಯಾಟ್ ಮಾಡಿದಂತೆ ಕಂಡು ಬಂದಿದೆ ಎಂದು ಮಾಂಜ್ರೇಕರ್ ಅಭಿಪ್ರಾಯ ಪಟ್ಟಿದ್ದಾರೆ.
ರೋಹಿತ್ ಶರ್ಮಾ ನಾಯಕತ್ವದ ಬಗ್ಗೆಯೂ ಸಂಜಯ್ ಮಂಜ್ರೇಕರ್ ಪ್ರಶ್ನೆಗಳನ್ನು ಎತ್ತಿದ್ದಾರೆ. ಇನ್ ಫಾರ್ಮ್ ಬ್ಯಾಟ್ಸ್ ಮನ್ ಸರ್ಫರಾಜ್ ಖಾನ್ ಗಿಂತ ಮೊದಲು ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಅವರನ್ನು ಬ್ಯಾಟಿಂಗ್ ಗೆ ಕಳುಹಿಸಿದ್ದು ಏಕೆ ಎಂದು ಕಿಡಿ ಕಾರಿದ್ದಾರೆ. ವಾಷಿಂಗ್ಟನ್ ಸುಂದರ್ ಅವರನ್ನು ಎಡಗೈ ಬ್ಯಾಟ್ಸ್‌ಮನ್ ಎಂಬ ಕಾರಣಕ್ಕೆ ಅವರ ಮೇಲೆ ಕಳುಹಿಸುವುದು ಎಷ್ಟು ಸರಿ ಎಂದು ತಂಡದ ನಿರ್ಧಾರದ ವಿರುದ್ಧ ಧ್ವನಿ ಎತ್ತಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications