ಟೀಮ್ ಇಂಡಿಯಾದಲ್ಲಿ ತನಿಖೆಗೆ ಒತ್ತಾಯಿಸಿದ ಮಾಜಿ ಕ್ರಿಕೆಟಿಗ
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯ ಬ್ರಿಸ್ಬೇನ್‌ನಲ್ಲಿ ನಡೆಯುತ್ತಿದೆ. ಈ ವೇಳೆ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್‌ನಲ್ಲಿ 445 ರನ್‌ಗಳಿಗೆ ಆಲೌಟ್ ಆಯಿತು. ಮೊದಲ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಬ್ಯಾಟರ್‌ಗಳು ನೆಲಕಚ್ಚಿ ನಿಂತು ಬ್ಯಾಟ್ ಮಾಡುವಲ್ಲಿ ವಿಫಲರಾದರು. ಟಾಪ್ ಆರ್ಡರ್ ಬ್ಯಾಟರ್‌ಗಳು ಸಿಂಗಲ್ ಡಿಜಿಟ್‌ನಲ್ಲಿ ಆಟ ಮುಗಿಸಿದ್ದು, ಪ್ರಶ್ನೆಗುಳು ಏಳುವಂತೆ ಮಾಡಿದೆ. ಟೀಮ್ ಇಂಡಿಯಾದ ಈ ಪ್ರದರ್ಶನವನ್ನು ಕಂಡು ಟೀಮ್ ಇಂಡಿಯಾದ ಮಾಜಿ ಆಟಗಾರ ತನಿಖೆಗೆ ಒತ್ತಾಯಿಸಿದ್ದಾರೆ. ಹಾಗಿದ್ದರೆ ಆ ಆಟಗಾರ ಯಾರು? ತನಿಖೆ ಏನು ಎಂಬ ಬಗ್ಗೆ ವರದಿ ಇಲ್ಲಿದೆ.
ಗಬ್ಬಾದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಆಟಗಾರರು ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಇದೇ ಕಾರಣಕ್ಕೆ ಇದೀಗ ಭಾರತ ತಂಡ ಎಲ್ಲೆಡೆ ಟ್ರೋಲ್ ಆಗುತ್ತಿದೆ. ಭಾರತದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್ ಕೂಡ ಭಾರತದ ಬ್ಯಾಟಿಂಗ್ ಬಗ್ಗೆ ದೊಡ್ಡ ಪ್ರಶ್ನೆ ಮಾಡಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ತಾಣದಲ್ಲಿ ಟ್ವೀಟ್ ಒಂದನ್ನು ಹಂಚಿಕೊಂಡಿದ್ದಾರೆ.

ಟೀಮ್ ಇಂಡಿಯಾ ಬ್ಯಾಟಿಂಗ್‌ಗೆ ಟೀಕೆ
ಬ್ರಿಸ್ಬೇನ್ ಟೆಸ್ಟ್ ಪಂದ್ಯದ ಮೂರನೇ ದಿನ ಟೀಮ್ ಇಂಡಿಯಾ ನೆಲಕಚ್ಚಿ ನಿಂತು ಬ್ಯಾಟ್ ಮಾಡುವಲ್ಲಿ ವಿಫಲವಾಗಿದೆ. ಮಳೆ ಬಾಧಿತ ಪಂದ್ಯದಲ್ಲಿ ಟೀಮ್ ಇಂಡಿಯಾ 4 ವಿಕೆಟ್ ಕಳೆದುಕೊಂಡು 44 ರನ್ ಸಿಡಿಸಿತ್ತು. ಟೀಮ್ ಇಂಡಿಯಾದ ಬ್ಯಾಟಿಂಗ್ ಬಗ್ಗೆ ಮಾಜಿ ಆಟಗಾರ ಸಂಜಯ್ ಮಾಂಜ್ರೇಕರ್ ಪ್ರಶ್ನೆ ಮಾಡಿದ್ದಾರೆ. ಭಾರತ ತಂಡದಲ್ಲಿ ಬ್ಯಾಟಿಂಗ್ ಕೋಚ್ ಪಾತ್ರವನ್ನು ಪರಿಶೀಲಿಸುವ ಸಮಯ ಇದಾಗಿದೆ ಎಂದು ನಾನು ಭಾವಿಸುತ್ತೇನೆ ಎಂದು ಅವರು ಸಾಮಾಜಿಕ ತಾಣದಲ್ಲಿ ಬರೆದುಕೊಂಡಿದ್ದಾರೆ. ಕೆಲವು ಬ್ಯಾಟರ್‌ಗಳು ಟೆಕ್ನಿಕಲ್ ಸಮಸ್ಯೆಗಳು ಈಗಲೂ ಏಕೆ ಕ್ಯಾರಿ ಆಗುತ್ತಿವೆ ಎಂಬುದೇ ದೊಡ್ಡ ಪ್ರಶ್ನೆ ಆಗಿದೆ ಎಂದು ಬರೆದು ಕೊಂಡಿದ್ದಾರೆ.
ಟೀಮ್ ಇಂಡಿಯಾದ ಬ್ಯಾಟಿಂಗ್ ಕೋಚ್ ಅಭಿಷೇಕ್ ನಾಯರ್ ಅವರ ಪಾತ್ರದ ಬಗ್ಗೆ ಪ್ರಶ್ನೆಗಳು ಏಳುತ್ತಿವೆ. ಟೀಮ್ ಇಂಡಿಯಾ ಮೊದಲ ಇನಿಂಗ್ಸ್‌ನಲ್ಲಿ ಪಟ ಪಟನೇ ವಿಕೆಟ್ ಬಿದ್ದವು. ಭರವಸೆಯ ಆಟಗಾರರು ತಂಡಕ್ಕೆ ಅಗತ್ಯವಿದ್ದಾಗ ರನ್ ಕಲೆ ಹಾಕುವಲ್ಲಿ ವಿಫಲರಾದರು. ಬೌನ್ಸಿ ಪಿಚ್‌ನಲ್ಲಿ ಆಡುವ ಭರವಸೆಯ ಮೂಡಿಸಿದ್ದ ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ ರನ್ ಬರ ಅನುಭವಿಸಿದರು. ಇದರಿಂದ ಬ್ಯಾಟಿಂಗ್ ಕೋಚ್ ಸ್ಥಾನದ ಮೇಲೆ ಪ್ರಶ್ನೆಗಳು ಎದ್ದಿವೆ.

ಟೀಮ್ ಇಂಡಿಯಾ ನಾಲ್ಕನೇ ದಿನದಾಟದಲ್ಲಿ ಸ್ಥಿರವಾಗಿ ಬ್ಯಾಟಿಂಗ್ ಮಾಡುವ ಅವಶ್ಯಕತೆ ಇದೆ. ಕೆಎಲ್ ರಾಹುಲ್, ರೋಹಿತ್ ಶರ್ಮಾ, ಉತ್ತಮ ಬ್ಯಾಟಿಂಗ್ ಮಾಡುವ ಅನಿವಾರ್ಯತೆ ಇದೆ. ಇನ್ನು ಆಲ್‌ರೌಂಡರ್‌ಗಳು ತಮ್ಮ ಮೇಲೆ ತಂಡ ಇಟ್ಟ ನಂಬಿಕೆಗೆ ಪೂರಕವಾಗಿ ಬ್ಯಾಟ್ ಮಾಡಬೇಕಿದೆ. ಅಂದಾಗ ಮಾತ್ರ ಟೀಮ್ ಇಂಡಿಯಾ ಫಾಲೋ ಆನ್ ನಿಂದ ಬಚಾವ್ ಆಗಬಹುದು. ಇಲ್ಲದೇ ಇದ್ದಲ್ಲಿ ಟೀಮ್ ಇಂಡಿಯಾ, ನಾಲ್ಕನೇ ದಿನದಲ್ಲಿ ಮತ್ತೊಮ್ಮೆ ಬ್ಯಾಟಿಂಗ್ ಬಂದರೂ ಅಚ್ಚರಿಯಿಲ್ಲ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications