ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಈತ ಕಣಕ್ಕಿಳಿದರೆ ಹಾರ್ದಿಕ್, ದಿನೇಶ್ ಕಾರ್ತಿಕ್ ಮೇಲಿನ ಒತ್ತಡ ಕಡಿಮೆಯಾಗಲಿದೆ: ಸಂಜಯ್ ಮಂಜ್ರೇಕರ್

Sanjay Manjrekar suggested inclusion of Deepak Hooda will help Team India against Ireland

ಭಾರತ ಹಾಗೂ ಐರ್ಲೆಂಡ್ ತಂಡಗಳ ನಡುವಿನ ಟಿ20 ಸರಣಿಯ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಹೆಚ್ಚಾಗಿ ಯುವ ಆಟಗಾರನ್ನು ಹೊಂದಿರುವ ಭಾರತ ತಂಡ ಆತಿಥೇಯ ಐರ್ಲೆಂಡ್ ವಿರುದ್ಧ ಯಾವ ರೀತಿಯ ಪ್ರದರ್ಶನ ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ. ಹಾರ್ದಿಲ್ ಪಾಂಡ್ಯ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ತಂಡವನ್ನು ಮುನ್ನಡೆಸಲು ಸಜ್ಜಾಗಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಕ್ರಿಕೆಟಿಗ ಹಾಗೂ ಹಾಲಿ ಕಾಮೆಂಟೇಟರ್ ಸಂಜಯ್ ಮಂಜ್ರೇಕರ್ ಭಾರತೀಯ ಮ್ಯಾನೇಜ್‌ಮೆಂಟ್‌ಗೆ ಸಲಹೆಯೊಂದನ್ನು ನೀಡಿದ್ದಾರೆ. ಐರ್ಲೆಂಡ್ ವಿರುದ್ಧಧ ಸರಣಿಯಲ್ಲಿ ಮಧ್ಯಮ ಕ್ರಮಾಂಕದಲ್ಲಿ ಓರ್ವ ಆಟಗಾರನನ್ನು ಆಡುವ ಬಳಗದಲ್ಲಿ ಸೇರಿಕೊಂಡರೆ ಕೆಳ ಕ್ರಮಾಂಕದ ಆಟಗಾರರ ಒತ್ತಡ ಕಡಿಕೆಯಾಗಲಿದೆ ಎಂದಿದ್ದಾರೆ.

ಅಭ್ಯಾಸ ಪಂದ್ಯದಲ್ಲಿ ಆಕರ್ಷಕ ಬ್ಯಾಟಿಂಗ್: ಶ್ರೀಕರ್ ಭರತ್ ಓಪನರ್ ಆಗಿ ಕಣಕ್ಕಿಳಿಯುವ ಸಾಧ್ಯತೆಅಭ್ಯಾಸ ಪಂದ್ಯದಲ್ಲಿ ಆಕರ್ಷಕ ಬ್ಯಾಟಿಂಗ್: ಶ್ರೀಕರ್ ಭರತ್ ಓಪನರ್ ಆಗಿ ಕಣಕ್ಕಿಳಿಯುವ ಸಾಧ್ಯತೆ

ಕೆಳ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ದಿನೇಶ್ ಕಾರ್ತಿಕ್ ದಕ್ಷಿಣ ಆಪ್ರಿಕಾ ವಿರುದ್ಧದ ಸರಣಿಯಲ್ಲಿ ಅದ್ಭುಯ ಪ್ರದರ್ಶನ ನೀಡಿದ್ದರು. ಈ ಆಟಗಾರರ ಮೇಲಿನ ಒತ್ತಡವನ್ನು ಕಡಿಮೆ ಮಾಡಬಲ್ಲ ಆ ಆಟಗಾರ ಯಾರು? ಮುಂದೆ ಓದಿ..

ದೀಪಕ್ ಹೂಡಾಗೆ ನೀಡಲಿ ಅವಕಾಶ

ದೀಪಕ್ ಹೂಡಾಗೆ ನೀಡಲಿ ಅವಕಾಶ

ಐರ್ಲೆಂಡ್ ವಿರುದ್ದದ ಟಿ20 ಸರಣಿಗೆ ಆಯ್ಕೆಯಾಗಿರುವ ದೀಪಕ್ ಹೂಡಾ ಈ ಸರಣಿಯಲ್ಲಿ ಆಡುವ ಬಳಗದಲ್ಲಿ ಅವಕಾಶ ಪಡೆದುಕೊಳ್ಳಬಹುದು ಎಂಬ ನಿರೀಕ್ಷೆಯಿದೆ. ಈ ಬಗ್ಗೆ ಮಾತನಾಡಿರುವ ಸಂಜಯ್ ಮಂಜ್ರೇಕರ್ ಆಲ್‌ರೌಂಡರ್ ದೀಪಕ್ ಹೂಡಾಗೆ ಈ ಸರಣಿಯಲ್ಲಿ ಅವಕಾಶ ದೊರೆತರೆ ಅದು ಅವರ ಪಾಲಿಗೆ ಸ್ಮರಣೀಯ ಸರಣಿಯಾಗಲಿದೆ ಎಂದಿದ್ದಾರೆ. ಐಪಿಎಲ್‌ನಲ್ಲಿಯೂ ಉತ್ತಮ ಪ್ರದರ್ಶನ ನಿಡಿರುವ ಹೂಡಾ ರಾಷ್ಟ್ರೀಯ ತಂಡದ ಪರವಾಗಿಯೂ ಖಂಡಿತಾ ಅಂಥಾದ್ದೇ ಪ್ರದರ್ಶನ ನೀಡಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

1983ರ ವಿಶ್ವಕಪ್ ವಿಜಯೋತ್ಸವಕ್ಕೆ 39 ವರ್ಷಗಳು: ಇಡೀ ದೇಶಕ್ಕೆ ಸ್ಫೂರ್ತಿ ನೀಡಿದ್ದ ಕಪಿಲ್ ದೇವ್ ತಂಡ!

ಪಾಂಡ್ಯ, ಡಿಕೆ ಒತ್ತಡ ಕಡಿಮೆ ಮಾಡಲಿದ್ದಾರೆ

ಪಾಂಡ್ಯ, ಡಿಕೆ ಒತ್ತಡ ಕಡಿಮೆ ಮಾಡಲಿದ್ದಾರೆ

ಇನ್ನು ಈ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ್ನು ಉಲ್ಲೇಖಿಸಿ ಮಾತನಾಡಿದ್ದಾರೆ ಮಂಜ್ರೇಕರ್. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಮಧ್ಯಮ ಕ್ರಮಾಂಕದ ಆಟಗಾರರಾದ ಶ್ರೇಯಸ್ ಐಯ್ಯರ್ ಹಾಗೂ ರಿಷಭ್ ಪಂತ್ ಇಬ್ಬರೂ ಕಳಪೆ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಕೆಳ ಕ್ರಮಾಂಕದ ಮೇಲೆ ಸಾಕಷ್ಟು ಒತ್ತಡ ಬಿದ್ದಿತ್ತು. ಆದರೆ ದೀಪಕ್ ಹೂಡಾಗೆ ಅವಕಾಶ ದೊರೆತರೆ ಹಾರ್ದಿಕ್ ಪಾಂಡ್ಯ ಹಾಗೂ ದಿನೇಶ್ ಕಾರ್ತಿಕ್ ಮೇಲಿನ ಒತ್ತಡ ಕಡಿಮೆಯಾಗಲಿದೆ ಎಂದಿದ್ದಾರೆ ಸಂಜಯ್ ಮಂಜ್ರೇಕರ್.

ಐಪಿಎಲ್‌ನಲ್ಲಿ ಮಿಂಚಿದ್ದ ದೀಪಕ್ ಹೂಡಾ

ಐಪಿಎಲ್‌ನಲ್ಲಿ ಮಿಂಚಿದ್ದ ದೀಪಕ್ ಹೂಡಾ

ಈ ಬಾರಿಯ ಐಪಿಎಲ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರವಾಗಿ ಆಡಿದ್ದ ದೀಪಕ್ ಹೂಡಾ ಅದ್ಭುತ ಪ್ರದರ್ಶನ ನೀಡಿ ತಂಡದ ಯಶಸ್ಸಿನಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ. ಪರಿಸ್ಥಿತಿಗೆ ತಕ್ಕಂತೆ ಆಡಿ ಹಲವು ಸಂದರ್ಭಗಳಲ್ಲಿ ತಂಡಕ್ಕೆ ನೆರವಾಗಿದ್ದ ಹೂಡ ಅಗತ್ಯವಿದ್ದಾಗ ದೊಡ್ಡ ಹೊಡೆತಗಳನ್ನು ಬಾರಿಸಿ ತಂಡದ ರನ್ ವೇಗವನ್ನು ಹೆಚ್ಚಿಸಿದ್ದರು. ಐಪಿಎಲ್ 2022ರ ಆವಧಿಯಲ್ಲಿ ಹೂಡಾ 451 ರನ್‌ಗಳಿಸಿದ್ದು ನಾಲ್ಕು ಅರ್ಧ ಶತಕ ಬಾರಿಸಿದ್ದಾರೆ.

ಇತ್ತಂಡಗಳ ಸ್ಕ್ವಾಡ್ ಹೀಗಿದೆ

ಇತ್ತಂಡಗಳ ಸ್ಕ್ವಾಡ್ ಹೀಗಿದೆ

ಭಾರತ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಭುವನೇಶ್ವರ್ ಕುಮಾರ್ (ಉಪ ನಾಯಕ), ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಸಂಜು ಸ್ಯಾಮ್ಸನ್, ಸೂರ್ಯಕುಮಾರ್ ಯಾದವ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಆರ್. ಬಿಷ್ಣೋಯ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಶ್ದೀಪ್ ಸಿಂಗ್, ಉಮ್ರಾನ್ ಮಲಿಕ್.


ಐರ್ಲೆಂಡ್: ಆಂಡ್ರ್ಯೂ ಬಾಲ್ಬಿರ್ನಿ (ನಾಯಕ), ಮಾರ್ಕ್ ಅಡೇರ್, ಕರ್ಟಿಸ್ ಕ್ಯಾಂಫರ್, ಗರೆಥ್ ಡೆಲಾನಿ, ಜಾರ್ಜ್ ಡಾಕ್ರೆಲ್, ಸ್ಟೀಫನ್ ಡೊಹೆನಿ, ಜೋಶ್ ಲಿಟಲ್, ಆಂಡ್ರ್ಯೂ ಮೆಕ್‌ಬ್ರೈನ್, ಬ್ಯಾರಿ ಮೆಕಾರ್ಥಿ, ಕಾನರ್ ಓಲ್ಫರ್ಟ್, ಪಾಲ್ ಸ್ಟಿರ್ಲಿಂಗ್, ಹ್ಯಾರಿ ಟೆಕ್ಟರ್, ಲೋರ್ಕನ್ ಟಕರ್, ಕ್ರೇಗ್ ಯಂಗ್.

Story first published: Saturday, June 25, 2022, 14:54 [IST]
Other articles published on Jun 25, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X