Sanju Samson: ಧೋನಿ ದಾಖಲೆ ಮೀರಿ ನಿಲ್ಲುವ ಕನಸಿನಲ್ಲಿ ಸಂಜು
ಟೀಮ್ ಇಂಡಿಯಾ ಹಾಗೂ ಪಾಕಿಸ್ತಾನ ನಡುವಣ ಮತ್ತೊಂದು ಹೈವೋಲ್ಟೇಜ್ ಪಂದ್ಯ ಸೆ.28 ರಂದು ನಡೆಯಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸುವತ್ತ ಚಿತ್ತ ನೆಟ್ಟಿದೆ. ಈ ಪಂದ್ಯದಲ್ಲಿ ಹಲವು ಸ್ಟಾರ್ ಆಟಗಾರರು ದೊಡ್ಡ ದಾಖಲೆಯ ಮೇಲೆ ಚಿತ್ತ ನೆಟ್ಟಿದ್ದಾರೆ. ಟೀಮ್ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ಸಹ ಈ ವೇಳೆ ದಾಖಲೆ ನಿರ್ಮಿಸುವತ್ತ ಚಿತ್ತ ನೆಟ್ಟಿದ್ದಾರೆ.
ಸಂಜು ಸ್ಯಾಮ್ಸನ್ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡಿ ತಂಡಕ್ಕೆ ಆಧಾರವಾಗಿದ್ದರು. ಈ ವೇಳೆ ಸಂಜು 23 ಎಸೆತಗಳಲ್ಲಿ 39 ರನ್ ಬಾರಿಸಿದ್ದರು. ಈ ವೇಳೆ ಸಂಜು 1 ಬೌಂಡರಿ, 3 ಸಿಕ್ಸರ್ ಸಿಡಿಸಿದ್ದರು. ಈ ಮೂಲಕ ಸಂಜು ಸ್ಯಾಮ್ಸನ್ ಅವರು ಎಂಎಸ್ ಧೋನಿ ಅವರ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದಾರೆ. ಪಾಕಿಸ್ತಾನ ವಿರುದ್ಧದ ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ಸಂಜು ದೊಡ್ಡ ದಾಖಲೆಯ ಕನಸಿನಲ್ಲಿದ್ದಾರೆ.

ಸಂಜು ಸ್ಯಾಮ್ಸನ್ ಅವರು ಟಿ20 ಟೂರ್ನಿಯ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಭಾರಿಸಿದ ಭಾರತೀಯ ವಿಕೆಟ್ ಕೀಪರ್ ಬ್ಯಾಟರ್‌ಗಳ ಪಟ್ಟಿಯಲ್ಲಿ ಜಂಟಿ ಅಗ್ರ ಸ್ಥಾನದಲ್ಲಿದ್ದಾರೆ. ಸಂಜು ಈ ವರೆಗೆ ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ 6 ಸಿಕ್ಸರ್ ಸಿಡಿಸಿದ ಹಿರಿಮೆ ಹೊಂದಿದ್ದಾರೆ. 2009ರ ಟಿ20 ವಿಶ್ವಕಪ್‌ನಲ್ಲಿ ಎಂಎಸ್ ಧೋನಿ 6 ಸಿಕ್ಸರ್ ಬಾರಿಸಿದ್ದರು. ಇನ್ನು ಸ್ಟಾರ್ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಸಹ 2024ರ ಟಿ20 ವಿಶ್ವಕಪ್‌ನಲ್ಲಿ 6 ಸಿಕ್ಸರ್ ಸಿಡಿಸಿ ಬೀಗಿದ್ದರು. ಪಾಕ್ ವಿರುದ್ಧದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಒಂದು ಸಿಕ್ಸರ್ ಬಾರಿಸುವಲ್ಲಿ ವಿಫಲರಾದರೆ, ದೊಡ್ಡ ದಾಖಲೆ ಬರೆಯಲಿದ್ದಾರೆ.
ಸಂಜು ದಾಖಲೆ
ಈ ಸರಣಿಯಲ್ಲಿ ಸಂಜು ಸ್ಯಾಮ್ಸನ್ ಸ್ಥಿರ ಪ್ರದರ್ಶನ ನೀಡಿದ್ದು ಎಲ್ಲರ ಗಮನ ಸೆಳೆದಿದ್ದಾರೆ. ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಹೆಗ್ಗಳಿಕೆಯನ್ನು ಸಂಜು ಸ್ಯಾಮ್ಸನ್ ಹೊಂದಿದ್ದಾರೆ. ಧೋನಿ 2016ರ ಏಷ್ಯಾ ಕಪ್ ಟಿ20 ಟೂರ್ನಿಯ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ 4 ಸಿಕ್ಸರ್ ಬಾರಿಸಿದ ಹೆಗ್ಗಳಿಕೆ ಹೊಂದಿದ್ದರು. ಈ ಆವೃತ್ತಿಯಲ್ಲಿ ಸಂಜು ಸ್ಯಾಮ್ಸನ್ ಈಗಾಗಲೇ 6 ಸಿಕ್ಸರ್ ಬಾರಿಸುವ ಮೂಲಕ ದಾಖಲೆ ಬರೆದಿದ್ದಾರೆ. ಇವರು ಏಷ್ಯಾ ಕಪ್ ಟಿ20 ಟೂರ್ನಿಯ ಫೈನಲ್ ಪಂದ್ಯದಲ್ಲಿ ದೊಡ್ಡ ಇನಿಂಗ್ಸ್ ಕಟ್ಟುವ ಕನಸಿನಲ್ಲಿದ್ದಾರೆ.

ಟೀಮ್ ಇಂಡಿಯಾದ ಪರ ಸಂಜು ಸ್ಯಾಮ್ಸನ್ ಈ ಮೊದಲ ಟಿ20 ಕ್ರಿಕೆಟ್‌ನಲ್ಲಿ ಅಗ್ರ ಕ್ರಮಾಂಕದಲ್ಲಿ ಬ್ಯಾಟ್ ಮಾಡುತ್ತಿದ್ದರು. ಆದರೆ ಈ ಟೂರ್ನಿಯಲ್ಲಿ ಶುಭಮನ್ ಗಿಲ್ ತಂಡಕ್ಕೆ ಎಂಟ್ರಿ ಪಡೆದಿದ್ದರಿಂದ, ಸಂಜು ತಮ್ಮ ಅಗ್ರ ಸ್ಥಾನವನ್ನು ಅವರಿಗೆ ಬಿಟ್ಟು ಕೊಟ್ಟಿದ್ದರು. ಹೀಗಾಗಿ ಇವರು ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡಿ ತಂಡಕ್ಕೆ ಆಧರವಾಗಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications