ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ಸಂಜು, ಬುಮ್ರಾ ನಮನಿರ್ದೇಶನ
ಭಾರತ ಟಿ20 ವಿಶ್ವಕಪ್ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಈ ಬಾರಿ ಟೀಮ್ ಇಂಡಿಯಾ ವಿಶ್ವಕಪ್ ಗೆಲ್ಲುವಲ್ಲಿ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ ಅವರ ಕೊಡುಗೆ ಅಪಾರ. ಸಂಜು ಅವರಿಗೆ ಟಿ20 ವಿಶ್ವಕಪ್‌ನ ಆರಂಭಿಕ ಪಂದ್ಯಗಳಲ್ಲಿ ಆಡುವ ಅವಕಾಶ ಲಭಿಸದೇ ಇದ್ದರೂ, ಬಳಿಕ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಂಡು ಅಬ್ಬರಿಸಿದ ಆಟಗಾರ. ಇವರ ಸ್ಥಿರ ಪ್ರದರ್ಶನಕ್ಕೆ ಟಿ20 ವಿಶ್ವಕಪ್ ಸರಣಿ ಶ್ರೇಷ್ಠ ಆಟಗಾರ ಗರಿ ಸಹ ಸಂದಿದೆ. ಇದೇ ವೇಳೆ ಐಸಿಸಿ ಸಹ ಸಂಜು ಅವರನ್ನು ತಿಂಗಳು ಆಟಗಾರರ ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಿದೆ.
ಭಾರತ ಹಾಗೂ ಶ್ರೀಲಂಕಾದಲ್ಲಿ ಟಿ20 ವಿಶ್ವಕಪ್ ಟೂರ್ನಿ ಫೆಬ್ರವರಿ 7ರಿಂದ ಆರಂಭವಾದರೂ ಸಹ ಸಂಜು ಸ್ಯಾಮ್ಸನ್ ಅವರಿಗೆ ಆಡುವ ಅವಕಾಶ ಸಿಕ್ಕಿದ್ದು ಮಾತ್ರ ನಾಕೌಟ್ ಹಂತದಲ್ಲಿ. ಇವರು ಮಾರ್ಚ್ ತಿಂಗಳಲ್ಲಿ ನೀಡಿದ ಪ್ರದರ್ಶನವನ್ನು ಗಮನಿಸಿ ಐಸಿಸಿ ತಿಂಗಳು ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದೆ. ಇವರೊಂದಿಗೆ ಜಸ್ಪ್ರೀತ್ ಬುಮ್ರಾ ಹಾಗೂ ದಕ್ಷಿಣ ಆಫ್ರಿಕಾದ ಕಾನರ್ ಎಸ್ಟರ್‌ಹೌಜನ್ ಅವರನ್ನು ಸಹ ನಾಮ ನಿರ್ದೇಶನ ಮಾಡಲಾಗಿದೆ.

ಸಂಜು ಸ್ಯಾಮ್ಸನ್
ಟೀಮ್ ಇಂಡಿಯಾ ಪರ ಸೂಪರ್ 8 ಹಂತದ ಪಂದ್ಯಗಳಲ್ಲಿ ಆಡುವ ಅವಕಾಶವನ್ನು ಪಡೆದ ಸಂಜು ಅಬ್ಬರಿಸಿದ್ದಾರೆ. ಮಹತ್ವದ ಪಂದ್ಯದಲ್ಲಿ ಸಂಜು ವೆಸ್ಟ್ ಇಂಡೀಸ್ ತಂಡದ ವಿರುದ್ಧ ಆರ್ಭಟ ನಡೆಸಿದ್ದಾರೆ. ಕೋಲ್ಕತ್ತದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಸಂಜು ಅಜೇಯ 97 ರನ್ ಸಿಡಿಸಿ ತಂಡಕ್ಕೆ ಆಧಾರವಾದರು. ಇವರ ಈ ಅಮೋಘ ಇನಿಂಗ್ಸ್ ಬಲದಿಂದ ಟೀಮ್ ಇಂಡಿಯಾ ಸೆಮಿಫೈನಲ್ ಪ್ರವೇಶಿಸಲು ಸಹಕಾರಿಯಾಯಿತು.
ಮುಂಬೈನ ವಾಂಖೆಡೆ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ 89 ರನ್ ಸಿಡಿಸಿ ತಂಡಕ್ಕೆ ಆಧಾರವಾದರು. ಇನ್ನು ಅಹಮದಾಬಾದ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲೂ ಸಂಜು 89 ರನ್ ಸಿಡಿಸಿದರು. ಇವರು ಮಾರ್ಚ್‌ನಲ್ಲಿ 137.50 ರ ಸರಾಸರಿಯಲ್ಲಿ 275 ರನ್ ಗಳಿಸಿದ್ದಾರೆ. ಈ ವೇಳೆ 199.27 ರ ಸ್ಟ್ರೈಕ್ ರೇಟ್‌ನಲ್ಲಿ ರನ್ ಕಲೆ ಹಾಕಿದ್ದಾರೆ. ಇದರಲ್ಲಿ ಮೂರು ಅರ್ಧಶತಕಗಳು ಸೇರಿವೆ.
ಜಸ್ಪ್ರೀತ್ ಬುಮ್ರಾ
ಈ ನಾಮನಿರ್ದೇಶನದಲ್ಲಿ ಜಸ್ಪ್ರೀತ್ ಬುಮ್ರಾ ಸಹ ಕಾಣಿಸಿಕೊಂಡಿದ್ದಾರೆ. ಇವರು ಇಂಗ್ಲೆಂಡ್ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ ನಡೆಸಿದ ಬಿಗುವಿನ ದಾಳಿ ಎಲ್ಲರ ಮೆಚ್ಚುಗೆಗೆ ಪಾತ್ರರವಾಗಿದೆ. ಇವರು ಡೆತ್ ಓವರ್‌ಗಳಲ್ಲಿ ಬಿಗುವಿನ ದಾಳಿ ನಡೆಸಿ ಎಲ್ಲರ ಗಮನ ಸೆಳೆದಿದ್ದಾರೆ. ಇವರು ಈ ಹಂತದಲ್ಲಿ ವಿಕೆಟ್ ಬೇಟೆಯಲ್ಲಿ ಹಿಂದೆ ಬಿದ್ದರೂ ಸಹ ರನ್ ಕಡಿವಾಣ ಹಾಕುವಲ್ಲಿ ಸಫಲರಾಗಿದ್ದಾರೆ. ಇನ್ನು ಫೈನಲ್‌ನಲ್ಲಿ 4 ಓವರ್ ಬೌಲ್ ಮಾಡಿ 15 ರನ್ ನೀಡಿ 4 ವಿಕೆಟ್ ಪಡೆದಿದ್ದಾರೆ.
ಮಾರ್ಚ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ದಕ್ಷಿಣ ಆಫ್ರಿಕಾದ ಕಾನರ್ ಎಸ್ಟರ್‌ಹೌಜನ್ ಅವರನ್ನು ಐಸಿಸಿ ತಿಂಗಳು ಆಟಗಾರ ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications