For Quick Alerts
ALLOW NOTIFICATIONS  
For Daily Alerts
 

ಚಾಂಪಿಯನ್ಸ್‌ ಟ್ರೋಫಿ ತಂಡದಲ್ಲಿ ಸಂಜು, ಮಯಾಂಕ್‌ಗೆ ಸ್ಥಾನವಿಲ್ಲ

ಟೀಮ್ ಇಂಡಿಯಾವನ್ನು ಟಿ20 ಕ್ರಿಕೆಟ್‌ನಲ್ಲಿ ಭಾರತ ತಂಡದ ಭಾಗವಾಗಿರುವ ಸಂಜು ಸ್ಯಾಮ್ಸನ್‌ ಹಾಗೂ ತಂಡಕ್ಕೆ ಕಂ ಬ್ಯಾಕ್ ಮಾಡುವ ಕನಸಿನಲ್ಲಿದ್ದ ಕರ್ನಾಟಕದ ಮಯಾಂಕ್‌ ಅಗರ್‌ವಾಲ್‌ ಅವರಿಗೆ ಚಾಂಪಿಯನ್ಸ್‌ ಟ್ರೋಫಿ ತಂಡದಲ್ಲಿ ಸ್ಥಾನ ಲಭಿಸಿಲ್ಲ. ದೇಶೀಯ ಏಕದಿನ ಟೂರ್ನಿ ವಿಜಯ್ ಹಜಾರೆಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಕರ್ನಾಟಕದ ಮಯಾಂಕ್‌ ಅಗರ್‌ವಾಲ್‌ರನ್ನು ಆಯ್ಕೆ ಸಮಿತಿ ಕಡೆಗಣನೆ ಮಾಡಿದೆ. ಮಯಾಂಕ್‌ ಅವರನ್ನು ಏಕದಿನ ತಂಡಕ್ಕೆ ಆಯ್ಕೆ ಮಾಡಬಹುದು ಎಂದು ಅಂದಾಜಿಸಲಾಗಿತ್ತು.

ಕರ್ನಾಟಕ ತಂಡವನ್ನು ವಿಜಯ್‌ ಹಜಾರೆ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಮುನ್ನಡೆಸುತ್ತಿರುವ ಮಯಾಂಕ್‌ ಅಗರ್‌ವಾಲ್‌ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಅಲ್ಲದೆ ಆಯ್ಕೆ ಸಮಿತಿಯ ಕದವನ್ನು ತಟ್ಟಿದ್ದರು. ಆದರೂ ಕರ್ನಾಟಕದ ಸ್ಟಾರ್ ಆಟಗಾರರನ್ನು ಬಿಸಿಸಿಐ ಕಡೆಗಣನೆ ಮಾಡಿದೆ. ಇವರು ದೇಶೀಯ ವಿಜಯ್‌ ಹಜಾರೆ ಟ್ರೋಫಿಯಲ್ಲಿ ಗರಿಷ್ಠ ರನ್‌ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದಿದ್ದಾರೆ.

Sanju Samson and Mayank Agarwal Miss Out on India s Champions Trophy 2025 Squad

ಮಯಾಂಕ್‌ ಸಾಧನೆ

ಮಯಾಂಕ್‌ ಅಗರ್‌ವಾಲ್‌ ಈಗಾಗಲೇ ಭಾರತದ 21 ಟೆಸ್ಟ್‌ ಹಾಗೂ 5 ಏಕದಿನ ಪಂದ್ಯಗಳನ್ನು ಆಡಿದ ಅನುಭವ ಹೊಂದಿದ್ದಾರೆ. 21 ಟೆಸ್ಟ್‌ ಪಂದ್ಯಗಳಲ್ಲಿ 4 ಶತಕ ಹಾಗೂ 6 ಅರ್ಧಶತಕಗಳ ಸಹಾಯದಿಂದ 1488 ರನ್‌ ಸಿಡಿಸಿದ್ದಾರೆ. ದೇಶೀಯ ವಿಜಯ್ ಹಜಾರೆ ಕ್ರಿಕೆಟ್‌ ಟೂರ್ನಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ರನ್‌ಗಳನ್ನು ಗುಡ್ಡೆ ಹಾಕಿದ್ದರು. ಇವರು ಆಡಿದ 10 ಪಂದ್ಯಗಳಲ್ಲಿ 93ರ ಸರಾಸರಿಯಲ್ಲಿ 651 ರನ್‌ ಸಿಡಿಸಿದ್ದಾರೆ. ಇದರಲ್ಲಿ 4 ಶತಕ ಹಾಗೂ 1 ಅರ್ಧಶತಕ ಸೇರಿದೆ. ದೇಶೀಯ ಟೂರ್ನಿಯಲ್ಲಿ ಇವರು ಸ್ಥಿರ ಪ್ರದರ್ಶನ ನೀಡಿದರು. ಆಯ್ಕೆಗಾರರ ಮನ ಗೆಲ್ಲುವಲ್ಲಿ ವಿಫಲರಾಗಿದ್ದಾರೆ.

ಸಂಜು ಮಿಸ್‌

ಇನ್ನು ಚಾಂಪಿಯನ್ಸ್ ಟ್ರೋಫಿಯಲ್ಲಿ ಸ್ಥಾನ ಪಡೆಯಬಹುದು ಎಂದು ನಿರೀಕ್ಷಿಸಲಾಗಿದ್ದ ಸಂಜು ಸ್ಯಾಮ್ಸನ್‌ ಅವರಿಗೆ ನಿರಾಸೆ ಆಗಿದೆ. ಇವರು ಭಾರತದ ಪರ ಟಿ20 ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿ ಎಲ್ಲರ ಗಮನ ಸೆಳೆದಿದ್ದರು. ಆದರೆ ಇವರಿಗೆ ಏಕದಿನ ಕ್ರಿಕೆಟ್‌ನಲ್ಲಿ ಮತ್ತೆ ಅವಕಾಶ ನೀಡಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಆ ಆಸೆ ಸಹ ಮಣ್ಣು ಪಾಲಾಗಿದೆ.

ಸಂಜು ಸ್ಯಾಮ್ಸನ್‌ ಕೇರಳ ತಂಡದ ಪರ ವಿಜಯ್ ಹಜಾರೆ ಏಕದಿನ ಟೂರ್ನಿಯನ್ನು ಸಹ ಆಡಿಲ್ಲ. ಇವರು ದೇಶೀಯ ಸರ್ಕಿಟ್‌ನಲ್ಲಿ ರಣಜಿ ಹಾಗೂ ಟಿ20 ಕ್ರಿಕೆಟ್‌ನಲ್ಲಿ ಮಾತ್ರ ಕೇರಳ ತಂಡದ ಪರ ಆಡುತ್ತಿದ್ದಾರೆ. ಎರಡನೇ ವಿಕೆಟ್‌ ಕೀಪರ್‌ ಆಗಿ ತಂಡದಲ್ಲಿ ಸ್ಥಾನ ಪಡೆಯುವ ಸಂಜು ಆಸೆ ನುಚ್ಚು ನೂರಾಗಿದೆ. ಪ್ರಕಟಿತ ಭಾರತ ತಂಡದಲ್ಲಿ ರಿಷಭ್ ಪಂತ್‌ ಹಾಗೂ ಕೆಎಲ್ ರಾಹುಲ್ ವಿಕೆಟ್‌ ಕೀಪರ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಸಂಜು ಸ್ಯಾಮ್ಸನ್‌ ಅವರಿಗೆ ನಿರಾಸೆ ಆಗಿದೆ. ದೇಶೀಯ ಟೂರ್ನಿಯಲ್ಲಿ ಭಾಗವಹಿಸಿದ್ದಕ್ಕೆ ಈ ಅವರಿಗೆ ಬರೆ ಬಿದ್ದಿದೆ.

Story first published: Saturday, January 18, 2025, 15:27 [IST]
Other articles published on Jan 18, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+