For Quick Alerts
ALLOW NOTIFICATIONS  
For Daily Alerts
 

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಸಂಜುಗೆ ಶತಕದ ತಿಲಕ

ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತ ತಂಡದ ಸ್ಟಾರ್ ಬ್ಯಾಟರ್‌ಗಳಾದ ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ಶತಕ ಸಿಡಿಸುವ ಮೂಲಕ ಇತಿಹಾಸದ ಪುಟಗಳಲ್ಲಿ ತಮ್ಮ ಹೆಸರನ್ನು ಸುವರ್ಣಾಕ್ಷರಗಳಲ್ಲಿ ದಾಖಲಿಸಿದ್ದಾರೆ. ಸಂಜು ಅವರ ತಮ್ಮ ಟಿ20 ವೃತ್ತಿಜೀವನದ ಮೂರನೇ ಶತಕ ಬಾರಿಸಿದ್ದು, ತಿಲಕ್ ಅವರು ಎರಡನೇ ಟಿ20 ಸಿಡಿಸಿ ಸಂಭ್ರಮಿಸಿದ್ದಾರೆ. ತಿಲಕ್ ವರ್ಮಾ ಅವರು ಸತತ ಎರಡು ಪಂದ್ಯಗಳಲ್ಲಿ ಶತಕ ಸಿಡಿಸಿರುವುದು ದಾಖಲೆಯಾಗಿದೆ. ಈ ಇಬ್ಬರು ಬ್ಯಾಟರ್‌ಗಳ ಸ್ಫೋಟಕ ಆಟದಿಂದ ಭಾರತ ನಿಗದಿತ 20 ಓವರ್‌ಗಳಲ್ಲಿ 1 ವಿಕೆಟ್‌ ನಷ್ಟಕ್ಕೆ 283 ರನ್ ಗಳಿಸಿದೆ.

ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ದಕ್ಷಿಣ ಆಫ್ರಿಕಾ ಬೌಲರ್‌ಗಳನ್ನು ಬೆಂಡೆತ್ತಿದರು. ಸ್ಪೋಟಕ ಇನ್ನಿಂಗ್ಸ್ ಆಡಿದ ಈ ಜೋಡಿ ದಾಖಲೆಯ ಜೊತೆಯಾಡವಾಡಿತು. ಸಂಜು 51 ಎಸೆತಗಳಲ್ಲಿ 6 ಬೌಂಡರಿ ಹಾಗೂ 8 ಸಿಕ್ಸರ್‌ಗಳ ನೆರವಿನಿಂದ 100 ರನ್ ಪೂರೈಸಿದರು. ಆದರೆ ತಿಲಕ್ ವರ್ಮಾ 41 ಎಸೆತಗಳಲ್ಲಿ 6 ಬೌಂಡರಿ ಹಾಗೂ 9 ಸಿಕ್ಸರ್‌ಗಳ ನೆರವಿನಿಂದ 100 ರನ್ ಕೆಲ ಹಾಕಿದರು. ಇದರೊಂದಿಗೆ ಟಿ20 ಪಂದ್ಯದ ಇನ್ನಿಂಗ್ಸ್‌ನಲ್ಲಿ ಎರಡು ಶತಕ ಗಳಿಸಿದ ಮೊದಲ ಬ್ಯಾಟರ್‌ಗಳು ಎಂಬ ಹೆಗ್ಗಳಿಕೆಗೆ ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ಪಾತ್ರರಾದರು. ಟೀಮ್ ಇಂಡಿಯಾ ಈ ಸಾಧನೆ ಮಾಡಿದ ಮೊದಲ ತಂಡವಾಗಿದೆ.

Sanju Samson and Tilak Varma create a record century in the 4th T20I against South Africa

ತಿಲಕ್ ವರ್ಮಾ ಸತತ ಎರಡನೇ ಶತಕ

ಸಂಜು ಸ್ಯಾಮ್ಸನ್ ನಂತರ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ತಿಲಕ್ ತಮ್ಮ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಕೇವಲ 3 ದಿನಗಳಲ್ಲಿ ಸಂಜು ಸ್ಯಾಮ್ಸನ್ ದಾಖಲೆಯನ್ನು ಸರಿಗಟ್ಟಿದರು. ಕೇವಲ 22 ವರ್ಷ ವಯಸ್ಸಿನ ತಿಲಕ್ ವರ್ಮಾ ಟಿ20 ಕ್ರಿಕೆಟ್‌ನಲ್ಲಿ ಸತತ ಎರಡು ಶತಕ ಸಿಡಿಸಿದ ಎರಡನೇ ಭಾರತ ಬ್ಯಾಟರ್‌ ಎನಿಸಿಕೊಂಡಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ನಾಲ್ಕನೇ ಟಿ20 ಪಂದ್ಯಕ್ಕೂ ಮುನ್ನ ತಿಲಕ್ ಮತ್ತು ಸಂಜು ಈ ಸರಣಿಯಲ್ಲಿ ಶತಕ ಬಾರಿಸಿದ್ದರು. ಮೊದಲ ಟಿ20 ಪಂದ್ಯದಲ್ಲಿ ಸಂಜು 47 ಎಸೆತಗಳಲ್ಲಿ 7 ಬೌಂಡರಿ ಹಾಗೂ 9 ಸಿಕ್ಸರ್‌ಗಳೊಂದಿಗೆ ಶತಕ ಪೂರೈಸಿದರು. ಇದು ಟಿ20 ಕ್ರಿಕೆಟ್‌ನಲ್ಲಿ ಸಂಜು ಅವರ ಎರಡನೇ ಶತಕ ಆಗಿತ್ತು. ಇದೀಗ ಮೂರನೇ ಶತಕವನ್ನು ದಾಖಲಿಸಿದ್ದಾರೆ. ಸೆಂಚೂರಿಯನ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ತಿಲಕ್ ವರ್ಮಾ 51 ಎಸೆತಗಳಲ್ಲಿ 8 ಬೌಂಡರಿ ಮತ್ತು 6 ಸಿಕ್ಸರ್‌ಗಳ ತಮ್ಮ ವೃತ್ತಿಜೀವನದ ಮೊದಲ ಶತಕವನ್ನು ಗಳಿಸಿದರು. ಈ ಪಂದ್ಯದಲ್ಲಿ ತಿಲಕ್ 56 ಎಸೆತಗಳಲ್ಲಿ 8 ಬೌಂಡರಿ ಹಾಗೂ 7 ಸಿಕ್ಸರ್‌ಗಳ ನೆರವಿನಿಂದ ಅಜೇಯ 107 ರನ್ ಬಾರಿಸಿದ್ದಾರೆ.

Story first published: Friday, November 15, 2024, 23:09 [IST]
Other articles published on Nov 15, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+