ಸಂಜು ಸ್ಯಾಮ್ಸನ್ ಈ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ರೆ ಬೆಸ್ಟ್
ಇನ್ನೇನು ಕೆಲವೇ ದಿನಗಳಲ್ಲಿ ಏಷ್ಯಾ ಕಪ್ ಟಿ20 ಟೂರ್ನಿ ಆರಂಭವಾಗಲಿದೆ. ಈ ಟೂರ್ನಿಗೆ ಭರದ ಸಿದ್ಧತೆಗಳು ನಡೆದಿವೆ. ಇದೇ ವೇಳೆ ಟೀಮ್ ಇಂಡಿಯಾ ಈ ಬಾರಿ ಈ ಟೂರ್ನಿಯನ್ನು ಆಯೋಜಿಸುತ್ತಿದೆ. ಈ ಬಾರಿ ಏಷ್ಯಾ ಕಪ್ ಅನ್ನು ಟಿ20 ಮಾದರಿಯಲ್ಲಿ ಆಡಿಸಲಾಗುತ್ತಿದೆ. ಈಗಾಗಲೇ ಟೀಮ್ ಇಂಡಿಯಾವನ್ನು ಈ ಟೂರ್ನಿಗಾಗಿ ಪ್ರಕಟಿಸಲಾಗಿದೆ. ಭಾರತ ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಇದೆ. ಅಲ್ಲದೆ ತಂಡದಲ್ಲಿ ತಮ್ಮ ಸ್ಥಾನವನ್ನು ಭಧ್ರ ಪಡಿಸಿಕೊಳ್ಳಲು ಆಟಗಾರರು ದೇಶೀಯ ಟಿ20 ಲೀಗ್‌ನಲ್ಲಿ ಬೆವರು ಹರಿಸುತ್ತಿದ್ದಾರೆ.
ಟೀಮ್ ಇಂಡಿಯಾಕ್ಕೆ ಶುಭಮನ್ ಗಿಲ್ ವರ್ಷದ ಬಳಿಕ ಕಂ ಬ್ಯಾಕ್ ಮಾಡಿದ್ದಾರೆ. ಇವರಿಗೆ ಉಪನಾಯಕತ್ವದ ಜವಾಬ್ದಾರಿಯನ್ನು ಸಹ ನೀಡಲಾಗಿದೆ. ಗಿಲ್ ಅವರು ತಂಡಕ್ಕೆ ಎಂಟ್ರಿ ಆಗಿದ್ದರಿಂದ ತಂಡದ ಸಂಯೋಜನೆಯ ಮೇಲೆ ಪರಿಣಾಮ ಬಿದ್ದಿದೆ. ಹೀಗಾಗಿ ತಂಡದಲ್ಲಿ ಬ್ಯಾಟಿಂಗ್ ಕ್ರಮಾಂಕವನ್ನು ಮತ್ತೊಮ್ಮೆ ಹೊಂದಿಸುವ ಅನಿವಾರ್ಯತೆ ಇದೆ. ವರ್ಷಗಳ ಕಾಲ ಭಾರತದ ಪರ ಆರಂಭಿಕರಾಗಿ ಆಡಿದ್ದ ಸಂಜು ಸ್ಯಾಮ್ಸನ್ ಏಷ್ಯಾ ಕಪ್‌ನಲ್ಲಿ ಪ್ಲೇಯಿಂಗ್ ಇಲೆವೆನ್‌ನಲ್ಲಿ ಆಡುವ ಅವಕಾಶ ಪಡೆದಲ್ಲಿ ನಿಶ್ಚಿತವಾಗಿ ಬ್ಯಾಟಿಂಗ್ ಕ್ರಮಾಂಕದಲ್ಲಿ ಬದಲಾವಣೆ ಕಾಣಬಹುದಾಗಿದೆ.

ದೇಶೀಯ ಟಿ20 ಕ್ರಿಕೆಟ್‌ನಲ್ಲಿ ಸಂಜು ಸ್ಯಾಮ್ಸನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದಾರೆ. ಕೇರಳದಲ್ಲಿ ನಡೆಯುತ್ತಿರುವ ಟಿ20 ಲೀಗ್‌ನಲ್ಲಿ ಕೊಚ್ಚಿ ಟಸ್ಕರ್ಸ್ ಪರ ಬ್ಯಾಟ್ ಮಾಡಿರುವ ಸಂಜು ಭರ್ಜರಿ ಪ್ರದರ್ಶನ ನೀಡಿದ್ದಾರೆ. ಅಲ್ಲದೆ ಆರಂಭಿಕರಾಗಿ ಬ್ಯಾಟಿಂಗ್ ಮಾಡಿ ಬ್ಯಾಕ್ ಟು ಬ್ಯಾಕ್ ಅರ್ಧಶತಕ ಸಿಡಿಸಿದ್ದಾರೆ. ಹೀಗಾಗಿ ಇವರಿಗೆ ತಂಡದಲ್ಲಿ ಸ್ಥಾನ ನೀಡುವುದು ಅನಿವಾರ್ಯವಾದಂತೆ ಆಗಿದೆ. ಟೀಮ್ ಇಂಡಿಯಾದ ಮಾಜಿ ಆಟಗಾರ ಮೊಹಮ್ಮದ್ ಕೈಫ್ ಸಂಜೂ ಸ್ಯಾಮ್ಸನ್ ಈ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ರೆ ಸೂಕ್ತ ಎಂದು ತಿಳಿಸಿದ್ದಾರೆ.
ಈ ಕ್ರಮಾಂಕದಲ್ಲಿ ಸಂಜು ಬ್ಯಾಟಿಂಗ್ ಮಾಡಿದರೆ ಸೂಕ್ತ
ಏಷ್ಯಾ ಕಪ್ ಟಿ20 ಕ್ರಿಕೆಟ್‌ನಲ್ಲಿ ಅಭಿಷೇಕ್ ಶರ್ಮಾ, ಶುಭಮನ್ ಗಿಲ್ ಆರಂಭಿಕರಾಗಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ತಿಲಕ್ ವರ್ಮ ಯು ಆಟಗಾರರಾಗಿದ್ದು, ಅವರು ಇನ್ನು ಕಾಯಬಹುದಾಗಿದೆ. ಸಂಜು ಅನುಭವಿ ಬ್ಯಾಟರ್. ಇವರು ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದರೆ ಬೆಸ್ಟ್. ಇದರಿಂದ ಇವರ ಅನುಭವದ ಲಾಭವನ್ನು ತಂಡ ಪಡೆಯಬೇಕಿದೆ. ಇನ್ನು ಆರು ತಿಂಗಳಲ್ಲಿ ವಿಶ್ವಕಪ್ ಬರಲಿದ್ದು ಅದರ ತಯಾರಿನ್ನು ಸಹ ಭಾರತ ಮಾಡಿಕೊಳ್ಳಬೇಕಿದೆ. ಏಷ್ಯಾ ಕಪ್‌ನಲ್ಲಿ ಸಂಜು ತಂಡಕ್ಕೆ ನೆರವಾಗಬಲ್ಲರು. ಇವರು ಬಿಗ್ ಹಿಟ್ಟಿಂಗ್‌ಗಳನ್ನು ಬಾರಿಸಬಲ್ಲ ಪ್ಲೇಯರ್ ಎಂದು ಕೈಫ್ ತಿಳಿಸಿದ್ದಾರೆ.

ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿ ಸೆ.9 ರಂದು ಆರಂಭವಾಗಲಿದೆ. ಭಾರತ ತನ್ನ ಅಭಿಯಾನವನ್ನು ಈ ಟೂರ್ನಿಯಲ್ಲಿ ಸೆ.10 ರಂದು ಆರಂಭಿಸಲಿದೆ. ಭಾರತ ಹಾಗೂ ಪಾಕಿಸ್ತಾನ ನಡುವಣ ಸೆ.14 ರಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಈ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications