IPL 2026: ಈ ಆವೃತ್ತಿಯಲ್ಲಿ ದಾಖಲಾಯಿತು ಮೊದಲ ಶತಕ: ಸಂಜು ಅಬ್ಬರಕ್ಕೆ ಡೆಲ್ಲಿ ಕಂಗಾಲು
ಚೆನ್ನೈ: ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ ಬಾರಿಸಿದ ಶತಕ ಹಾಗೂ ಆಯುಷ್ ಮಾತ್ರೆ ಅವರು ಬಾರಿಸಿದ ಅರ್ಧಶತಕದ ಬಲದಿಂದ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) 19ನೇ ಆವೃತ್ತಿ ಐಪಿಎಲ್‌ನ 18ನೇ ಪಂದ್ಯದಲ್ಲಿ 212 ರನ್‌ಗಳ ಗುರಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ನೀಡಿದೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಚೆನ್ನೈ ತಂಡದ ಆರಂಭ ಭರ್ಜರಿಯಾಗಿತ್ತು. ಮೊದಲ ವಿಕೆಟ್‌ಗೆ ಭರವಸೆಯ ಬ್ಯಾಟರ್ ಸಂಜು ಸ್ಯಾಮ್ಸನ್ ಹಾಗೂ ನಾಯಕ ರುತುರಾಜ್ ಗಾಯಕ್ವಾಡ್ ಜೋಡಿ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿದರು. ಈ ಜೊತೆಯಾಟದಲ್ಲಿ ಸಂಜು ಸ್ಯಾಮ್ಸನ್ ಸಿಂಹಪಾಲು ಕಾಣಿಕೆ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 62 ರನ್ ಜೊತೆಯಾಟದ ಕಾಣಿಕೆ ನೀಡಿದರು. ರುತುರಾಜ್ 15 ರನ್ ಬಾರಿಸಿ ಔಟ್ ಆದರು.

ಈ ಲೀಗ್‌ನಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದ ಸಂಜು ಸ್ಯಾಮ್ಸನ್ ಭರ್ಜರಿ ಲಯಕ್ಕೆ ಮರಳಿದರು. ಇವರು ಟಿ20 ವಿಶ್ವಕಪ್‌ನಲ್ಲಿ ಆಡಿದ ಧಾಟಿಯಲ್ಲಿ ಬ್ಯಾಟ್ ಮಾಡಿದರು. ಸಿಕ್ಕ ಅವಕಾಶವನ್ನು ಎರಡೂ ಕೈಗಳಲ್ಲಿ ಬಳಸಿಕೊಂಡು ಬ್ಯಾಟ್ ಮಾಡಿದ ಸಂಜು ಆರ್ಭಟಿಸಿದರು. ಎರಡನೇ ವಿಕೆಟ್‌ಗೆ ಸಂಜು ಹಾಗೂ ಭರವಸೆಯ ಆಟಗಾರ ಆಯುಷ್ ಮಾತ್ರೆ ಜೋಡಿ ಅಬ್ಬರಿಸಿತು. ಈ ಜೋಡಿ 67 ಎಸೆತಗಳಲ್ಲಿ 113 ರನ್ ಸಿಡಿಸಿತು. ಈ ಹಂತದಲ್ಲಿ ಆಯುಷ್ ಮಾತ್ರೆ ರಿಟೈರ್ಡ್ ಹರ್ಟ್ ಆದರು. ಆಯುಷ್ 36 ಎಸೆತಗಳಲ್ಲಿ 3 ಬೌಂಡರಿ, 4 ಸಿಕ್ಸರ್ ಸಹಾಯದಿಂದ 59 ರನ್ ಬಾರಿಸಿದರು.
ಸಂಜು ಸ್ಯಾಮ್ಸನ್ ಶತಕ
ಸಂಜು ಸ್ಯಾಮ್ಸನ್ ಈ ಆವೃತ್ತಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಸಂಕಷ್ಟದಲ್ಲಿದ್ದ ತಂಡಕ್ಕೆ ಆಧಾರವಾದ ಸಂಜು ಅಬ್ಬರಿಸಿದರು. ಸಂಜು 56 ಎಸೆತಗಳಲ್ಲಿ 15 ಬೌಂಡರಿ, 4 ಸಿಕ್ಸರ್ ಸಹಾಯದಿಂದ ಅಜೇಯ 116 ರನ್ ಬಾರಿಸಿದರು. ಈ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಶತಕ ಬಾರಿಸುತ್ತಿದ್ದಂತೆ ಐಪಿಎಲ್‌ನಲ್ಲಿ ಮೂರು ತಂಡಗಳ ಪರ ಶತಕ ಬಾರಿಸಿದ ಮೊದಲ ಆಟಗಾರ ಎಂಬ ಖ್ಯಾತಿ ತಮ್ಮದಾಗಿಸಿಕೊಂಡರು. ಇದಕ್ಕೂ ಮೊದಲು ಇವರು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡದ ಪರವೂ ಶತಕ ಬಾರಿಸಿ ಮಿಂಚಿದ್ದರು.
ಅಂತಿಮವಾಗಿ ಸಿಎಸ್‌ಕೆ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 212 ರನ್ ಕಲೆ ಹಾಕಿತು. ಡೆಲ್ಲಿ ಕ್ಯಾಪಿಟಲ್ಸ್ ಪರ ಅಕ್ಷರ್ ಪಟೇಲ್ 1 ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications