ಟೀಮ್ ಇಂಡಿಯಾದಿಂದ ದೂರ ಉಳಿಯುತ್ತಿದ್ದ ಸ್ಟಾರ್ ವಿಕೆಟ್‌ಕೀಪರ್-ಬ್ಯಾಟರ್ ಸಂಜು ಸ್ಯಾಮ್ಸನ್ ತಂಡದಲ್ಲಿ ಸ್ಥಾನ ಭದ್ರಪಡಿಸಿಕೊಳ್ಳಲು ಮುಂದಾಗಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಮೂರನೇ ಮೂರನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಸಂಜು ಸ್ಯಾಮ್ಸನ್ ತಮ್ಮ ಚೊಚ್ಚಲ ಟಿ20 ಶತಕವನ್ನು ಬಾರಿಸಿ ಮಿಂಚಿದ್ದಾರೆ. ಈ ಮೂಲಕ ಬಿಸಿಸಿಐ ಆಯ್ಕೆ ಸಮಿತಿ ಆತ್ಮವಿಶ್ವಾಸ ಗಳಿಸಿದ್ದಾರೆ.
ಭಾರತ ಏಕದಿನ ತಂಡದಲ್ಲಿ ಸ್ಥಾನ ಸಿಗದಿದ್ದರೆ ಟಿ20 ಸರಣಿಗೆ ಆಯ್ಕೆಯಾಗುತ್ತಿದ್ದ ಸಂಜು, ಕೆಲವೊಮ್ಮೆ ಟಿ20 ತಂಡದಿಂದ ದೂರ ಉಳಿಯುತ್ತಿದ್ದರು. ಆಗ ಏಕದಿನ ಭಾರತ ತಂಡದಲ್ಲಿ ಆಡುವ ಅವಕಾಶವನ್ನು ಪಡೆಯುತ್ತಿದ್ದರು. ಇಂತಹ ಸಂದರ್ಭಗಳಲ್ಲಿ ಅವರಿಗೆ ತನ್ನ ಸಾಮರ್ಥ್ಯವನ್ನು ಸಾಬೀತು ಪಡಿಸಿಕೊಳ್ಳಲು ಸರಿಯಾಗಿ ಅವಕಾಶ ಸಿಕ್ಕಿರಲಿಲ್ಲ. ಜೊತೆಗೆ ಭಾರತ ತಂಡಕ್ಕೆ ಆಯ್ಕೆ ಸಂದರ್ಭಗಳಲ್ಲಿ ಅವರು ಬಹುತೇಕ ಸರಣಿಗಳಲ್ಲಿ ಬೆಂಚ್ ಕಾಯ್ದಿದ್ದರು.

ಇದೀಗ ಬಾಂಗ್ಲಾದೇಶ ವಿರುದ್ಧದ ಮೂರನೇ ಮೂರನೇ ಟಿ20 ಪಂದ್ಯದಲ್ಲಿ ಶತಕ ಹೊಡೆಯುವ ಮೂಲಕ ಸಂಜು ತನ್ನ ಪರಕ್ರಮ ಮೆರೆದಿದ್ದಾರೆ. ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್‌ನಲ್ಲಿ ಅತಿವೇಗದ ಶತಕ ಹೊಡೆ ಎರಡನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ರೋಹಿತ್ ಶರ್ಮಾ 35 ಎಸೆತಗಳಲ್ಲಿ ಶತಕ ಬಾರಿಸಿ ಟಿ20 ಕ್ರಿಕೆಟ್‌ನಲ್ಲಿ ದಾಖಲೆ ಸೃಷ್ಟಿಸಿದ್ದಾರೆ. ಸಂಜು 40 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ. ಈಗ ಏಕದಿನ ಮತ್ತು ಟಿ20 ಕ್ರಿಕೆಟ್‌ನಲ್ಲಿ ಭಾರತದ ಪರ ಶತಕ ಹೊಡೆದು ಮಿಂಚಿರುವ ಸಂಜು ಟೆಸ್ಟ್ ಕ್ರಿಕೆಟ್‌ನತ್ತ ಮುಖ ಮಾಡಿದ್ದಾರೆ.
ಬಾಂಗ್ಲಾದೇಶ ವಿರುದ್ಧ ಟಿ20 ಸರಣಿ ಬಳಿಕ ಸ್ಯಾಮ್ಸನ್ ಭಾರತಕ್ಕಾಗಿ ಟೆಸ್ಟ್ ಕ್ರಿಕೆಟ್ ಆಡುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ 2024-25ರ ರಣಜಿ ಟ್ರೋಫಿ ಟೂರ್ನಿಯಲ್ಲಿ ಅಕ್ಟೋಬರ್ 18 ರಿಂದ ಆರಂಭವಾಗಲಿರುವ ಕರ್ನಾಟಕದ ವಿರುದ್ಧ ಕೇರಳ ತಂಡದ ಎರಡನೇ ಪಂದ್ಯದಲ್ಲಿ ಸ್ಯಾಮ್ಸನ್ ಆಡಲಿದ್ದಾರೆ. ರಣಜಿ ಟ್ರೋಫಿಯಲ್ಲಿ ಅವರು ಅದ್ಭುತ ಪ್ರದರ್ಶನ ನೀಡಿದರೆ, ಮುಂಬರುವ ಆಸ್ಟ್ರೇಲಿಯಾ ಪ್ರವಾಸಕ್ಕೆ ತಂಡದೊಂದಿಗೆ ಪ್ರಯಾಣಿಸುವ ಅವಕಾಶ ಸಿಗಬಹುದು.
'ರೆಡ್ ಬಾಲ್ ಕ್ರಿಕೆಟ್‌ನಲ್ಲಿ ಯಶಸ್ವಿಯಾಗಲು ಕೌಶಲ್ಯವನ್ನು ಹೊಂದಿದ್ದೇನೆ ಅಂದುಕೊಂಡಿದ್ದೇನೆ. ನಾನು ಕೇವಲ ವೈಟ್-ಬಾಲ್ ಕ್ರಿಕೆಟ್‌ಗೆ ಸೀಮಿತವಾಗಿರಲು ಬಯಸುವುದಿಲ್ಲ. ಭಾರತಕ್ಕಾಗಿ ಟೆಸ್ಟ್ ಪಂದ್ಯಗಳನ್ನು ಆಡಲು ಬಯಸುತ್ತೇನೆ. ನನ್ನನ್ನು ರೆಡ್ ಬಾಲ್ ಕ್ರಿಕೆಟ್‌ಗೆ ಪರಿಗಣಿಸುವ ಬಗ್ಗೆ ತಿಳಿದಿದೆ. ಅದಕ್ಕಾಗಿ ಹೆಚ್ಚಿನ ರಣಜಿ ಟ್ರೋಫಿ ಪಂದ್ಯಗಳನ್ನು ಆಡುವಂತೆ ನನಗೆ ಹೇಳಿದ್ದಾರೆ ಎಂದು ಸ್ಯಾಮ್ಸನ್ ಮಂಗಳವಾರ ಕೇರಳ ಮಾಧ್ಯಮದೊಂದಿನ ಸಂದರ್ಶನದಲ್ಲಿ ಹೇಳಿದ್ದಾರೆ.
'ಈ ಬಾರಿ ನನ್ನ ತಯಾರಿ ಚೆನ್ನಾಗಿದೆ. ಶ್ರೀಲಂಕಾ ವಿರುದ್ಧದ ಸರಣಿಯ ನಂತರ ನಾನು ರಾಜಸ್ಥಾನ ರಾಯಲ್ಸ್ (ಆರ್‌ಆರ್) ಅಕಾಡೆಮಿಯಲ್ಲಿ ಹೆಡ್‌ಕೋಚ್ ರಾಹುಲ್ ದ್ರಾವಿಡ್ ಸರ್ ಅವರೊಂದಿಗೆ ತರಬೇತಿ ಪಡೆದಿದ್ದೇನೆ. ದುಲೀಪ್ ಟ್ರೋಫಿಯಲ್ಲಿ ದೇಶದ ಕೆಲವು ಅತ್ಯುತ್ತಮ ಬೌಲರ್‌ಗಳ ವಿರುದ್ಧ ಶತಕ ಗಳಿಸಿರುವುದು ನನಗೆ ಆತ್ಮವಿಶ್ವಾಸವನ್ನು ತುಂಬಿದೆ' ಎಂದು ಸ್ಯಾಮ್ಸನ್ ತಿಳಿಸಿದ್ದಾರೆ.