Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs BAN T20: ಭಾರತಕ್ಕೆ ಆರಂಭವಾಗಿದೆ ಒಂದು ಟೆನ್ಷನ್‌: ಅಭಿಷೇಕ್‌ ಜೊತೆ ಇನಿಂಗ್ಸ್‌ ಆರಂಭಿಸುವವರು ಯಾರು?

ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವಣ ಟೆಸ್ಟ್‌ ಪಂದ್ಯಗಳು ಮುಗಿದಿವೆ. ಟೆಸ್ಟ್ ಸರಣಿಯಲ್ಲಿ ಕ್ಲೀನ್ ಸ್ವೀಪ್ ಸಾಧನೆ ಮಾಡಿರುವ ಟೀಮ್ ಇಂಡಿಯಾ ಮತ್ತೊಂದು ಸರಣಿ ಗೆಲುವಿನ ಕನಸು ಕಾಣುತ್ತಿದೆ. ಅಕ್ಟೋಬರ್ 6 ರಂದು ಟೀಮ್ ಇಂಡಿಯಾ ಹಾಗೂ ಬಾಂಗ್ಲಾದೇಶ ನಡುವಣ ಮೊದಲ ಟಿ20 ಪಂದ್ಯ ನಡೆಯಲಿದೆ. ಈ ವೇಳೆ ಟೀಮ್ ಇಂಡಿಯಾಕ್ಕೆ ಒಂದು ಟೆನ್ಷನ್‌ ಆರಂಭವಾಗಿದೆ.

ವೆಸ್ಟ್‌ ಇಂಡೀಸ್‌ ಹಾಗೂ ಅಮೆರಿಕದಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ ಬಳಿಕ ಟೀಮ್ ಇಂಡಿಯಾದ ಅನುಭವಿ ಆಟಗಾರರು ಚುಟುಕು ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಬಾಂಗ್ಲಾ ವಿರುದ್ಧದ ಟಿ20 ಪಂದ್ಯದಲ್ಲಿ ಯಾರು ಇನಿಂಗ್ಸ್‌ ಆರಂಭಿಸುತ್ತಾರೆ ಎಂಬ ಪ್ರಶ್ನೆ ಉದ್ಭವಿಸಿದೆ. ಈಗಾಗಲೇ ಭಾರತದ ಪರ ಟಿ20 ಕ್ರಿಕೆಟ್‌ನಲ್ಲಿ ಇನಿಂಗ್ಸ್‌ ಆರಂಭಿಸಿರುವ ಅನುಭವ ಹೊಂದಿರುವ ಅಭಿಷೇಕ್‌ ಶರ್ಮಾ ಒಂದು ತುದಿಯಲ್ಲಿ ಕಾಣಿಸಿಕೊಳ್ಳುವುದು ಪಕ್ಕಾ. ಇವರೊಂದಿಗೆ ಯಾರು ಇನಿಂಗ್ಸ್ ಆರಂಭಿಸುತ್ತಾರೆ ಎಂಬುದೇ ದೊಡ್ಡ ಪ್ರಶ್ನೆ ಆಗಿದೆ.

Sanju Samson Likely to Open with Abhishek Sharma in India s T20 Clash Against Bangladesh

ಅನುಭವಿಗಳಿಗೆ ರೆಸ್ಟ್‌

ಟೀಮ್ ಇಂಡಿಯಾದಲ್ಲಿ ಭರವಸೆಯ ಬ್ಯಾಟರ್‌ಗಳ ದಂಡೇ ಇದೆ. ಆದರೆ ಇನಿಂಗ್ಸ್ ಆರಂಭಿಸುವುದು ಯಾರು ಎಂಬ ಪ್ರಶ್ನೆ ಇನ್ನು ಕಗ್ಗಂಟಾಗಿಯೇ ಉಳಿದಿದೆ. ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಅಭಿಷೇಕ್ ಶರ್ಮಾ ಜೊತೆ ಸಂಜು ಸ್ಯಾಮ್ಸನ್ ಇನಿಂಗ್ಸ್ ಆರಂಭಿಸುವ ಸಾಧ್ಯತೆ ಇದೆ. ಭರವಸೆಯ ಆಟಗಾರ ರುತರಾಜ್ ಗಾಯಕ್ವಾಡ್ ಅನುಪಸ್ಥಿತಿ ತಂಡಕ್ಕೆ ಕಾಡಲಿದೆ.

ಅಕ್ಟೋಬರ್ 16 ರಿಂದ ಭಾರತದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಗಳು ಆರಂಭವಾಗಲಿವೆ. ಹೀಗಾಗಿ ಯುವ ಆಟಗಾರರಾದ ಶುಭಮನ್‌ ಗಿಲ್ ಹಾಗೂ ಯಶಸ್ವಿ ಜೈಸ್ವಾಲ್‌ ಅವರನ್ನು ತಂಡಕ್ಕೆ ಆಯ್ಕೆ ಮಾಡಿಲ್ಲ. ಹೀಗಾಗಿ ಸಂಜು ಸ್ಯಾಮ್ಸನ್‌ ಓಪನಿಂಗ್‌ಗೆ ಅತ್ಯಂತ ಸೂಕ್ತ ಆಯ್ಕೆ ಆಗವಬಹುದು.

ಆರಂಭಿಕರಾಗಿ ಹೇಗಿದೆ ಸಂಜು ಅಂಕಿ ಅಂಶ?

ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆದಿರುವ ಸ್ಟಾರ್ ಆಟಗಾರ ಸಂಜು ಸ್ಯಾಮ್ಸನ್‌ ತಂಡಕ್ಕೆ ಅಗತ್ಯ ಇರುವು ಯಾವುದೇ ಕ್ರಮಾಂಕದಲ್ಲಾದ್ರೂ ಬ್ಯಾಟ್ ಮಾಡುವ ಕ್ಷಮತೆ ಹೊಂದಿದ್ದಾರೆ. ಸಂಜು ಕಳೆದ ಆವೃತ್ತಿಯ ಐಪಿಎಲ್‌ನಲ್ಲಿ ಬ್ಯಾಟಿಂಗ್ ಬಡ್ತಿ ಪಡೆದು ಸ್ಥಿರ ಪ್ರದರ್ಶನ ನೀಡಿದ್ದರು. ಹೀಗಾಗಿ ಬಾಂಗ್ಲಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ ಅವರು ಇನಿಂಗ್ಸ್ ಆರಂಭಿಸಬಹುದು. ಬೇರೆ ಕ್ರಮಾಂಕಗಳನ್ನು ಹೋಲಿಸಿದರೆ ಸಂಜು ಆರಂಭಿಕರಾಗಿ ಉತ್ತಮ ಅಂಕಿ ಅಂಶಗಳನ್ನು ಹೊಂದಿದ್ದಾರೆ. ಇವರು ಭಾರತದ ಪರ ಐದು ಬಾರಿ ಇನಿಂಗ್ಸ್ ಆರಂಭಿಸುವ ಅವಕಾಶವನ್ನು ಪಡೆದಿದ್ದಾರೆ. ಈ ವೇಳೆ ಸಂಜು 61.54 ಸ್ಟ್ರೈಕ್ ರೇಟ್‌ನಲ್ಲಿ ರನ್‌ ಕಲೆ ಹಾಕಿದ್ದಾರೆ.

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಮಯಾಂಕ್ ಯಾದವ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಹರ್ಷದೀಪ್ ಸಿಂಗ್, ರಾಣಾ,

Story first published: Saturday, October 5, 2024, 19:33 [IST]
Other articles published on Oct 5, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+