ಸದ್ಯ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಮುಕ್ತಾಯದ ಐದು ದಿನಗಳ ಬಳಿಕ, ಯುಎಸ್ಎ ಮತ್ತು ವೆಸ್ಟ್ ಇಂಡೀಸ್‌ನಲ್ಲಿ 2024ರ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿ ಆರಂಭವಾಗಲಿದೆ.
ಇದೇ ವೇಳೆ ಟಿ20 ವಿಶ್ವಕಪ್‌ಗೆ ತಂಡವನ್ನು ಸಲ್ಲಿಸುವ ಗಡುವು ದಿನಾಂಕವಾದ ಮೇ 1ರಂದು ಮುಂಬೈನಲ್ಲಿ ಭಾರತ ತಂಡವನ್ನು ಘೋಷಿಸುವ ಸಾಧ್ಯತೆ ಇದೆ. ಭಾರತ ತಂಡದ 15 ಸದಸ್ಯರ ಆಯ್ಕೆ ಕುರಿತು ಹಲವು ಚರ್ಚೆಗಳು ನಡೆಯುತ್ತಿವೆ. ಐಪಿಎಲ್ 2024ರ ಪ್ರದರ್ಶನ ಆಧಾರದ ಮೇಲೆ ಹಲವು ಆಟಗಾರರು ಗಮನ ಸೆಳೆಯುತ್ತಿದ್ದಾರೆ.

ಅಲ್ಲದೆ, ಎಡಗೈ ಸ್ಫೋಟಕ ಬ್ಯಾಟರ್ ಶಿವಂ ದುಬೆ ಕಳೆದ ಕೆಲವು ವರ್ಷಗಳಲ್ಲಿ ಟಿ20 ಸ್ವರೂಪದಲ್ಲಿ ತಮ್ಮ ಅದ್ಭುತ ಪ್ರದರ್ಶನದಿಂದಾಗಿ, ಟಿ20 ವಿಶ್ವಕಪ್ ಭಾರತ ತಂಡಕ್ಕೆ ಕರೆ ಪಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ 43ನೇ ಪಂದ್ಯದ ನಂತರ 2024ರ ಐಸಿಸಿ ಟಿ20 ವಿಶ್ವಕಪ್ ತಂಡದ ಬಗ್ಗೆ ಚರ್ಚಿಸಲು ಬಿಸಿಸಿಐ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ರೋಹಿತ್ ಶರ್ಮಾ ಅವರನ್ನು ಭೇಟಿ ಮಾಡಿದ್ದಾರೆ.

"ರಿಷಭ್ ಪಂತ್ ಮತ್ತು ಕೆಎಲ್ ರಾಹುಲ್ ಅವರು 2024ರ ಐಸಿಸಿ ಟಿ20 ವಿಶ್ವಕಪ್ ಭಾರತ ತಂಡಕ್ಕೆ ವಿಕೆಟ್ ಕೀಪರ್‌ಗಳಾಗಿ ಆಯ್ಕೆಯಾಗುವ ಸಾಧ್ಯತೆಯಿದೆ. ಶಿವಂ ದುಬೆ ಕೂಡ ತಂಡಕ್ಕೆ ಆಯ್ಕೆಯಾಗುವ ಸಾಧ್ಯತೆ ಇದೆ," ಎಂದು ಬಿಸಿಸಿಐ ಆಯ್ಕೆ ಸಮಿತಿಯ ಮೂಲವೊಂದು ಎಎನ್‌ಐಗೆ ತಿಳಿಸಿದೆ.
ಡೆಲ್ಲಿ ಕ್ಯಾಪಿಟಲ್ಸ್ ನಾಯಕ ರಿಷಭ್ ಪಂತ್ ಐಪಿಎಲ್ 2024ರಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಆಡಿದ 10 ಪಂದ್ಯಗಳಲ್ಲಿ 46.38ರ ಸರಾಸರಿ ಮತ್ತು 160.60ರ ಸ್ಟ್ರೈಕ್ ರೇಟ್‌ನಲ್ಲಿ 371 ರನ್ ಗಳಿಸಿದ್ದಾರೆ.
ಸದ್ಯ ನಡೆಯುತ್ತಿರುವ ಶ್ರೀಮಂತ ಕ್ರಿಕೆಟ್ ಲೀಗ್‌ನ 17ನೇ ಆವೃತ್ತಿಯ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಎಡಗೈ ಬ್ಯಾಟರ್ ರಿಷಭ್ ಪಂತ್ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಇನ್ನು ಲಕ್ನೋ ಸೂಪರ್ ಜೈಂಟ್ಸ್ ನಾಯಕ ಕೆಎಲ್ ರಾಹುಲ್ ಕೂಡ ಐಪಿಎಲ್ 2024ರಲ್ಲಿ ಮೂರನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿದ್ದಾರೆ. ಅನುಭವಿ ವಿಕೆಟ್‌ಕೀಪರ್-ಬ್ಯಾಟರ್ ಆಡಿದ 9 ಪಂದ್ಯಗಳಲ್ಲಿ 42ರ ಸರಾಸರಿ ಮತ್ತು 144.27ರ ಸ್ಟ್ರೈಕ್ ರೇಟ್‌ನಲ್ಲಿ 378 ರನ್ ಗಳಿಸಿದ್ದಾರೆ.
ಮತ್ತೊಂದೆಡೆ, ಶಿವಂ ದುಬೆ ಅವರು ಈ ಋತುವಿನಲ್ಲಿ ಅದ್ಭುತ ಮತ್ತು ಸ್ಫೋಟಕ ಬ್ಯಾಟಿಂಗ್ ಫಾರ್ಮ್‌ನಲ್ಲಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್‌ನ ಪ್ರಶಸ್ತಿ ರಕ್ಷಣೆಯಲ್ಲಿ ಪ್ರಮುಖ ಆಟಗಾರರಾಗಿದ್ದಾರೆ. ಇದರಿಂದಾಗಿ ಮುಂಬರುವ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಸ್ಥಾನಕ್ಕಾಗಿ ಟವೆಲ್ ಎಸೆದಿದ್ದಾರೆ.
ಐಪಿಎಲ್ 2024ರಲ್ಲಿ ಆಡಿದ ಎಂಟು ಪಂದ್ಯಗಳಲ್ಲಿ ಶಿವಂ ದುಬೆ 51.83ರ ಸರಾಸರಿ ಮತ್ತು 169.94ರ ಸ್ಟ್ರೈಕ್ ರೇಟ್‌ನಲ್ಲಿ ಮೂರು ಅರ್ಧ ಶತಕಗಳೊಂದಿಗೆ 311 ರನ್ ಗಳಿಸಿದ್ದಾರೆ. ಅವರ ಉತ್ತಮ ಸ್ಕೋರ್ ಅಜೇಯ 66 ರನ್ ಆಗಿದೆ.
ಶಿವಂ ದುಬೆ ತಮ್ಮ ಪ್ರತಿಸ್ಪರ್ಧಿ ರುತುರಾಜ್ ಗಾಯಕ್ವಾಡ್ (8 ಪಂದ್ಯಗಳಲ್ಲಿ 58.17ರ ಸರಾಸರಿಯಲ್ಲಿ 349 ರನ್, ಎರಡು ಅರ್ಧಶತಕಗಳು ಮತ್ತು ಒಂದು ಶತಕ) ನಂತರ ಈ ಋತುವಿನಲ್ಲಿ ಸಿಎಸ್‌ಕೆ ಫ್ರಾಂಚೈಸಿಗೆ ಅಗ್ರ ರನ್ ಸ್ಕೋರರ್ ಆಗಿದ್ದಾರೆ.
2024ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಪಂದ್ಯಾವಳಿಯು ಯುಎಸ್‌ಎ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ಜೂನ್ 1ರಂದು ಪ್ರಾರಂಭವಾಗಲಿದೆ.
ಜೂನ್ 9ರಂದು ಪಾಕಿಸ್ತಾನದ ವಿರುದ್ಧದ ಹೈ-ವೋಲ್ಟೇಜ್ ಪಂದ್ಯದತ್ತ ಗಮನ ಹರಿಸುವ ಮೊದಲು, ಭಾರತ ತಂಡವು ಜೂನ್ 5ರಂದು ಐರ್ಲೆಂಡ್ ವಿರುದ್ಧ ಸೆಣಸಲಿದೆ. ಇವೆರಡೂ ಪಂದ್ಯಗಳು ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿವೆ.