ಫಿಟ್ನೆಸ್ ಪರೀಕ್ಷೆಯಲ್ಲಿ ಸಂಜು ಸ್ಯಾಮ್ಸನ್ ತೇರ್ಗಡೆ: ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿಗೆ ಬುಮ್ರಾ ವಾಪಸ್?

ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಮೊಣಕಾಲು ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಫಿಟ್‌ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ತಂಡಕ್ಕೆ ವಾಪಸಾಗಲು ಸಿದ್ಧರಾಗಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಸಂಜು ಸ್ಯಾಮ್ಸನ್ ಲಭ್ಯವಾಗಿದ್ದು, ಅವರನ್ನು ಆಯ್ಕೆದಾರರು ಪರಿಗಣಿಸುತ್ತಾರ ಇಲ್ಲವಾ ಎಂದು ಕಾದು ನೋಡವಬೇಕಾಗಿದೆ. ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ತಂಡಕ್ಕೆ ಆಯ್ಕೆಯಾಗಿದ್ದ ಸಂಜು ಸ್ಯಾಮ್ಸನ್ ಮೊದಲನೇ ಪಂದ್ಯದಲ್ಲೇ ಮೊಣಕಾಲು ಗಾಯಕ್ಕೆ ತುತ್ತಾಗುವ ಮೂಲಕ ಸರಣಿಯಿಂದ ಹೊರಬಿದ್ದಿದ್ದರು.
ಭಾರತದ ವಿಕೆಟ್ ಕೀಪರ್ ರಿಷಬ್ ಪಂತ್ ಈ ವರ್ಷ ಕ್ರಿಕೆಟ್ ಆಡುವುದು ಅನುಮಾನವಾಗಿದೆ. ಇಶಾನ್ ಕಿಶನ್ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿಲ್ಲ, ವಿಕೆಟ್ ಕೀಪರ್ ಬ್ಯಾಟರ್ ಆಗಿ ಕೆಎಲ್ ರಾಹುಲ್ ಜೊತೆ ಸಂಜು ಸ್ಯಾಮ್ಸನ್ ಸ್ಥಾನ ಪಡೆಯುತ್ತಾರ ಎಂದು ನೋಡಬೇಕಾಗಿದೆ.
"ಸಂಜು ಸ್ಯಾಮ್ಸನ್ ಗಾಯದ ಮೌಲ್ಯಮಾಪನಕ್ಕಾಗಿ ಎನ್‌ಸಿಎಗೆ ಮರಳಿದ್ದಾರೆ. ಅವರು 100 ಪ್ರತಿಶತ ಫಿಟ್ ಆಗಿದ್ದು, ಆಯ್ಕೆಗೆ ಲಭ್ಯವಿದ್ದಾರೆ. ಜಸ್ಪ್ರೀತ್ ಬುಮ್ರಾ ಸಂಪೂರ್ಣವಾಗಿ ಫಿಟ್ ಆಗಲು ಇನ್ನೂ ಒಂದು ತಿಂಗಳು ಸಮಯ ಬೇಕಾಗುತ್ತದೆ. ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಏಕದಿನ ಸರಣಿ ವೇಳೆಗೆ ಅವರು ಫಿಟ್ ಆಗುತ್ತಾರೆ ಎಂದು ನಿರೀಕ್ಷೆ ಮಾಡಲಾಗಿದೆ." ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಇನ್‌ಸೈಡ್‌ಸ್ಪೋರ್ಟ್ ವರದಿ ಮಾಡಿದೆ.

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಆಯ್ಕೆ?
ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ಮೊದಲನೇ ಪಂದ್ಯದಲ್ಲಿ ಕ್ಯಾಚ್ ಹಿಡಿಯುವ ಸಂದರ್ಭದಲ್ಲಿ ಸಂಜು ಸ್ಯಾಮ್ಸನ್ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದರು. ನಂತರ ಅವರನ್ನು ತಂಡದಿಂದ ಬಿಡುಗಡೆ ಮಾಡಲಾಗಿತ್ತು. ಟಿ20 ಮತ್ತು ಏಕದಿನ ಸರಣಿಯನ್ನು ಕಳೆದುಕೊಂಡ ಸಂಜು ಸ್ಯಾಮ್ಸನ್ ಕೊಚ್ಚಿಯಲ್ಲಿ ವೈಯಕ್ತಿಕ ಫಿಸಿಯೋ ಮಾರ್ಗದರ್ಶನದಲ್ಲಿ ತಮ್ಮ ಫಿಟ್‌ನೆಸ್ ಮೇಲೆ ಕೆಲಸ ಮಾಡಿದ್ದರು.
ಫಿಟ್ ಆದ ಬಳಿಕ ಎನ್‌ಸಿಎಗೆ ವರದಿ ಮಾಡಿದ ಅವರು ಫಿಟ್‌ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಆಯ್ಕೆದಾರರಿಂದ ಪದೇ ಪದೇ ಕಡೆಗಣನೆಗೆ ಒಳಗಾಗುತ್ತಿರುವ ಸಂಜು ಸ್ಯಾಮ್ಸನ್ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಒಂದು ವೇಳೆ ಅವರು ಸ್ಥಾನ ಪಡೆಯದಿದ್ದರೆ. ಐಪಿಎಲ್‌ಗಾಗಿ ಸಿದ್ಧತೆ ಆರಂಭಿಸಲಿದ್ದಾರೆ.

ಬುಮ್ರಾ ಕೂಡ ಏಕದಿನ ಸರಣಿಗೆ ವಾಪಸ್?
2022ರಲ್ಲಿ ಇಂಗ್ಲೆಂಡ್ ಪ್ರವಾಸದ ವೇಳೆ ಜಸ್ಪ್ರೀತ್ ಬುಮ್ರಾ ಬೆನ್ನು ನೋವಿನ ಗಾಯಕ್ಕೆ ತುತ್ತಾಗಿದ್ದರು. ಅದಾದ ನಂಯರ ಅವರು ವೆಸ್ಟ್ ಇಂಡೀಸ್ ಪ್ರವಾಸ ಮತ್ತು 2022ರ ಏಷ್ಯಾಕಪ್‌ನಿಂದ ದೂರವುಳಿದಿದ್ದರು. ಟಿ20 ವಿಶ್ವಕಪ್‌ಗೆ ಮುನ್ನ ಅವರು ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಆಡಿದರು. ಕೇವಲ 6 ಓವರ್ ಬೌಲಿಂಗ್ ಮಾಡಿದ ಬಳಿಕ ಅವರು ಮತ್ತೆ ಬೆನ್ನು ನೋವಿನ ಸಮಸ್ಯೆ ಕಾಣಿಸಿಕೊಂಡ ಕಾರಣ, ಟಿ20 ವಿಶ್ವಕಪ್‌ನಿಂದ ಕೂಡ ಹೊರಗುಳಿದರು.
ಸದ್ಯ ಇನ್ನೂ 100 ಪ್ರತಿಶತ ಫಿಟ್ ಆಗದ ಕಾರಣ ಎನ್‌ಸಿಎನಲ್ಲಿ ಫಿಟ್‌ನೆಸ್ ಮೇಲೆ ಕೆಲಸ ಮಾಡುತ್ತಿದ್ದಾರೆ. ಅವರು ಇನ್ನೊಂದು ತಿಂಗಳಿನಲ್ಲಿ ಸಂಪೂರ್ಣವಾಗಿ ಫಿಟ್ ಆಗುವ ಸಾಧ್ಯತೆ ಇದೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯನ್ನು ಕಳೆದುಕೊಂಡಿರುವ ಅವರು, ಏಕದಿನ ಸರಣಿಗೆ ತಂಡಕ್ಕೆ ಮರಳಲು ಅಭ್ಯಾಸ ಮಾಡುತ್ತಿದ್ದಾರೆ.

ಟೆಸ್ಟ್ ಆಡುವ ಮುನ್ನ ಜಡೇಜಾಗೆ ಫಿಟ್ನೆಸ್ ಟೆಸ್ಟ್!
2022ರ ಏಷ್ಯಾಕಪ್ ಟೂರ್ನಿಯ ವೇಳೆ ಗಾಯಗೊಂಡಿದ್ದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ತಂಡಕ್ಕೆ ಮರಳಲು ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ ರಣಜಿ ಟ್ರೋಫಿಯಲ್ಲಿ ಸೌರಾಷ್ಟ್ರ ಪರವಾಗಿ ಆಡಿರುವ ಅವರ, ತಮಿಳುನಾಡು ವಿರುದ್ಧದ ಪಂದ್ಯದಲ್ಲಿ 8 ವಿಕೆಟ್ ಪಡೆದು ಗಮನ ಸೆಳೆದಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಹೆಸರಿಸಲಾದ ಭಾರತ ತಂಡದಲ್ಲಿ ಜಡೇಜಾ ಸ್ಥಾನ ಪಡೆದಿದ್ದಾರೆ. ಆದರೆ, ಅವರು ತಂಡಕ್ಕೆ ಮರಳಬೇಕೆಂದರೆ ತಮ್ಮ ಫಿಟ್‌ನೆಸ್ ಸಾಬೀತುಪಡಿಸಬೇಕಿದೆ. ಈಗಾಗಲೇ ಎನ್‌ಸಿಗೆ ವರದಿ ಮಾಡಿರುವ ಅವರು, ಫೆಬ್ರವರಿ 1ರಂದು ಫಿಟ್‌ನೆಸ್ ಪರೀಕ್ಷೆ ತೆಗೆದುಕೊಳ್ಳಲಿದ್ದು, ಅಲ್ಲಿ ತೇರ್ಗಡೆಯಾದರೆ ತಂಡವನ್ನು ಸೇರಿಕೊಳ್ಳಲು ನಾಗ್ಪುರಕ್ಕೆ ಪ್ರಯಾಣಿಸಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications