IND vs BAN T20: ರಾಹುಲ್ ದ್ರಾವಿಡ್ ಗರಡಿಯಲ್ಲಿ ಬೆವರಿಳಿಸುತ್ತಿರುವ ಸಂಜು
ಬಾಂಗ್ಲಾದೇಶ ವಿರುದ್ಧದ ಟೆಸ್ಟ್‌ಗಳ ಸರಣಿಯನ್ನು 2-0 ಅಂತರದಿಂದ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಈಗ ಬಾಂಗ್ಲಾದೇಶ ವಿರುದ್ಧದ ಮೂರ ಪಂದ್ಯಗಳ ಟಿ20 ಸರಣಿ ಗೆಲುವಿನ ಮೇಲೆ ಕಣ್ಣಿಟ್ಟಿದೆ. ಈ ಸರಣಿಯಿಂದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ ಮತ್ತು ಜಸ್ಪ್ರೀತ್ ಬುಮ್ರಾ ಅವರಂತಹ ಅನುಭವಿಗಳು ಹೊರಗುಳಿದ್ದಾರೆ.
ರೋಹಿತ್, ಕೊಹ್ಲಿ ಮತ್ತು ಜಡೇಜಾ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಿಂದ ನಿವೃತ್ತಿಯಾಗಿದ್ದಾರೆ. ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಇವರಲ್ಲದೆ ಶುಭಮನ್ ಗಿಲ್ ಮತ್ತು ಯಶಸ್ವಿ ಜೈಸ್ವಾಲ್ ಕೂಡ ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಯನ್ನು ಆಡುತ್ತಿಲ್ಲ.

ಯಶಸ್ವಿ ಮತ್ತು ಗಿಲ್ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾ ಆರಂಭಿಕ ಬದಲಾವಣೆಗಳನ್ನು ಮಾಡಬೇಕಾಗಿದೆ. ಟಿ20 ಸರಣಿಗೆ ಆಯ್ಕೆಯಾಗಿರುವ ತಂಡದಲ್ಲಿ ಅಭಿಷೇಕ್ ಶರ್ಮಾ ಮಾತ್ರ ಓಪನರ್ ಆಗಿದ್ದಾರೆ. ಇನ್ನು ನಾಯಕ ಸೂರ್ಯಕುಮಾರ್ ಯಾದವ್ ಅಭಿಷೇಕ್ ಜೊತೆ ಓಪನಿಂಗ್ ಮಾಡಲು ಯಾರನ್ನು ಕಳುಹಿಸಬೇಕು ಎಂಬುದನ್ನು ನಿರ್ಧರಿಸಬೇಕಿದೆ. ಆದರೆ, ಅಭಿಷೇಕ್ ಅವರೊಂದಿಗೆ ತಂಡದಲ್ಲಿ ಸ್ಥಾನ ಪಡೆದಿರುವ ಸ್ಟಾರ್ ವಿಕೆಟ್‌ಕೀಪರ್-ಬ್ಯಾಟರ್ ಸಂಜು ಸ್ಯಾಮ್ಸನ್ ಇನ್ನಿಂಗ್ಸ್ ತೆರೆಯಲಿರುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
ದ್ರಾವಿಡ್ ಗರಡಿಯಲ್ಲಿ ಸಂಜು
ಸಂಜು ಅವರಿಗೂ ಓಪನಿಂಗ್ ಮಾಡಿರುವ ಸಾಕಷ್ಟು ಅನುಭವವಿದೆ. ಹೀಗಾಗಿ ಬಾಂಗ್ಲಾದೇಶ ವಿರುದ್ಧ ಟಿ20 ಸರಣಿಯಲ್ಲಿ ಭಾರತದ ಪರ ಇನ್ನಿಂಗ್ಸ್ ಆರಂಭಿಸಲು ಸಂಜು ಸ್ಯಾಮ್ಸನ್ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ವಿಶೇಷವೆಂದರೆ ಟೀಮ್ ಇಂಡಿಯಾ ಮಾಜಿ ಟಿ20 ವಿಶ್ವಕಪ್ ಚಾಂಪಿಯನ್ ಕೋಚ್ ರಾಹುಲ್ ದ್ರಾವಿಡ್ ಮಾರ್ಗದರ್ಶನದಲ್ಲಿ ಟಿ20 ಸರಣಿಗೆ ಸಿದ್ಧರಾಗುತ್ತಿದ್ದಾರೆ.
ಈ ವರ್ಷದ ಆರಂಭದಲ್ಲಿ ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಸಂಜು ಕಳಪೆ ಪ್ರದರ್ಶನ ನೀಡಿದ್ದಾರೆ. ಅದಕ್ಕಾಗಿ ಬಾಂಗ್ಲಾದೇಶ ವಿರುದ್ಧ ಸರಣಿಯಲ್ಲಿ ಅಬ್ಬರಿಸಲು ಅವರು ತಯಾರಿಯಲ್ಲಿ ನಿರತರಾಗಿದ್ದಾರೆ. ಮಹಾರಾಷ್ಟ್ರದ ತಾಲೆಗಾಂವ್‌ನಲ್ಲಿರುವ ರಾಜಸ್ಥಾನ ರಾಯಲ್ಸ್ ಫ್ರಾಂಚೈಸ್‌ಯಲ್ಲಿ ರಾಹುಲ್ ದ್ರಾವಿಡ್ ಅವರ ಮಾರ್ಗದರ್ಶನದಲ್ಲಿ ಕಠಿಣ ತರಬೇತಿ ಪಡೆಯುತ್ತಿದ್ದಾರೆ.
ಬಹುದಿನಗಳ ಬಳಿಕ ದ್ರಾವಿಡ್ ಮತ್ತು ಸ್ಯಾಮ್ಸನ್ ಮತ್ತೆ ಒಟ್ಟಿಗೆ ಕಾಣಿಸಿಕೊಂಡಿದ್ದು, ಇಬ್ಬರೂ ರಾಜಸ್ಥಾನ ರಾಯಲ್ಸ್ ಫ್ರಾಂಚೈಸಿಯಲ್ಲಿ ಭೇಟಿಯಾಗಿರುವ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ವಿಡಿಯೋದಲ್ಲಿ ರಾಜಸ್ಥಾನ ತಂಡದ ನಾಯಕ ಸಂಜು ಬ್ಯಾಟಿಂಗ್ ಮಾಡುತ್ತಿದ್ದು, ಕೋಚ್ ದ್ರಾವಿಡ್ ಅವರನ್ನು ಗಮನಿಸುತ್ತಿದ್ದಾರೆ. ಇತ್ತೀಚೆಗೆ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕೊಂಡಿದ್ದಾರೆ.
ಬಾಂಗ್ಲಾದೇಶ ಟಿ20 ಸರಣಿಗೆ ಭಾರತ ತಂಡ
ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಮಯಾಂಕ್ ಯಾದವ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications