For Quick Alerts
ALLOW NOTIFICATIONS  
For Daily Alerts
 

ಟಿ20 ವಿಶ್ವಕಪ್‌ಗೂ ಮುನ್ನ ಚಿಂತೆ ಹೆಚ್ಚಿಸಿದ ಸಂಜು ಸ್ಯಾಮ್ಸನ್‌ ಫಾರ್ಮ್‌

ಫೆಬ್ರವರಿ 7 ರಿಂದ ಭಾರತ ಹಾಗೂ ಶ್ರೀಲಂಕಾ ಜಂಟಿಯಾಗಿ ಟಿ20 ವಿಶ್ವಕಪ್ ಆಯೋಜಿಸುತ್ತಿವೆ. ಈ ಮೆಗಾ ಟೂರ್ನಿಗಾಗಿ ಸಕಲ ಸಿದ್ಧತೆಗಳು ನಡೆದಿವೆ. ಈ ಟೂರ್ನಿಯಲ್ಲಿ ಒಟ್ಟು 20 ತಂಡಗಳು ಭಾಗವಹಿಸುತ್ತಿವೆ. ಈ ತಂಡಗಳನ್ನು 5 ಗುಂಪುಗಳಲ್ಲಿ ವಿಂಗಡಿಸಲಾಗಿದೆ. ಈ ಮೆಗಾ ಸರಣಿಗೆ ಎಲ್ಲ ತಂಡಗಳು ಸಿದ್ಧತೆ ನಡೆಸಿವೆ. ಟೀಮ್ ಇಂಡಿಯಾ ಕಪ್ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದಾಗಿದೆ. ತವರಿನಲ್ಲಿ ಭಾರತ, ನ್ಯೂಜಿಲೆಂಡ್‌ ವಿರುದ್ಧದ ಟಿ20 ಸರಣಿಯನ್ನು ಗೆದ್ದು ವಿಶ್ವಕಪ್‌ಗೆ ಆತ್ಮವಿಶ್ವಾಸದಿಂದ ಕಾಲು ಇಡಲಿದೆ.

ಟೀಮ್ ಇಂಡಿಯಾದಲ್ಲಿ ಸ್ಟಾರ್ ಆಟಗಾರರ ದಂಡೇ ಇದೆ. ಎಲ್ಲ ಆಟಗಾರರು ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಆದರೆ ಈ ಸರಣಿಯಲ್ಲಿ ಆರಂಭಿಕರಾಗಿ ಕಾಣಿಸಿಕೊಂಡು ರನ್‌ ಕಲೆ ಹಾಕುವಲ್ಲಿ ವಿಫಲರಾಗುತ್ತಿರುವ ಸಂಜು ಸ್ಯಾಮ್ಸನ್‌ ಅವರ ರನ್‌ ಕಲೆ ಹಾಕುವಲ್ಲಿ ಎಡವುತ್ತಿದ್ದಾರೆ. ಕಿವೀಸ್‌ ವಿರುದ್ಧದ ಟಿ20 ಸರಣಿಯಲ್ಲಿ ಸಂಜು ಸ್ಯಾಮ್ಸನ್‌ ನಿರಾಸೆಯನ್ನು ಅನುಭಿಸಿದ್ದಾರೆ.

Sanju Samson

ಸಂಜು ಸ್ಯಾಮ್ಸನ್‌ ಅವರಿಗೆ ಕಳೆದ ಕೆಲವು ಪಂದ್ಯಗಳಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಸೂಚಿಸಲಾಗಿತ್ತು. ಅಲ್ಲದೆ ಕೆಲವು ಪಂದ್ಯಗಳಿಂದ ಅವರು ಬೆಂಚ್ ಸಹ ಕಾಯ್ದರು. ಆದರೆ ಟಿ20 ವಿಶ್ವಕಪ್‌ಗೆ ತಂಡವನ್ನು ಪ್ರಕಟಿಸಿದಾಗ ಸಂಜು ಸ್ಯಾಮ್ಸನ್‌ ಅವರ ಆಟದ ವೈಖರಿಗೆ ಮನ್ನಣೆ ನೀಡಲಾಯಿತು. ಅಲ್ಲದೆ ಮತ್ತೆ ಅವರಿಗೆ ಆರಂಭಿಕರಾಗಿ ಆಡುವ ಅವಕಾಶವನ್ನು ಸಹ ನೀಡಲಾಯಿತು. ತಮಗೆ ಸಿಕ್ಕ ಅವಕಾಶವನ್ನು ಸದುಪಯೋಗಿ ಪಡಿಸಿಕೊಳ್ಳುವಲ್ಲಿ ವಿಫಲರಾಗಿರುವ ಸಂಜು ಆಡಿದ ಮೂರು ಪಂದ್ಯಗಳಲ್ಲಿ ದೊಡ್ಡ ಇನಿಂಗ್ಸ್ ಕಟ್ಟಲಿಲ್ಲ. ಇವರ ಕಳಪೆ ಫಾರ್ಮ್ ಮ್ಯಾನೇಜ್ಮೆಂಟ್‌ ಚಿಂತೆಯನ್ನು ಹೆಚ್ಚಿಸಿದೆ.

ಸಂಜು ಸ್ಯಾಮ್ಸನ್‌ ಮೊದಲ ಪಂದ್ಯದಲ್ಲಿ 10 ರನ್‌ ಬಾರಿಸಿದ್ದು ಬಿಟ್ಟರೆ, ಎರಡನೇ ಪಂದ್ಯದಲ್ಲಿ 6, ಮೂರನೇ ಪಂದ್ಯದಲ್ಲಿ ಮೊದಲ ಎಸೆತದಲ್ಲಿ ಬೋಲ್ಡ್ ಆದರು. ಹೀಗಾಗಿ ಇವರ ಮೇಲೆ ಒತ್ತಡ ಹೆಚ್ಚುತ್ತಿದೆ. ಸಂಜು ಸ್ಯಾಮ್ಸನ್‌ ಇದೆ ರೀತಿಯ ಆಟವನ್ನು ಮುಂದುವರೆಸಿದರೆ, ಇವರ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ನ್ಯೂಜಿಲೆಂಡ್‌ ವಿರುದ್ಧದ ಇನ್ನು 2 ಪಂದ್ಯಗಳಲ್ಲಿ ಇವರಿಗೆ ಅವಕಾಶ ಸಿಗುತ್ತದಾ ಎಂಬ ಪ್ರಶ್ನೆಗಳು ಮೂಡಿವೆ.

ಇಶಾನ್‌ ಅಬ್ಬರ, ಸಂಜುಗೆ ಚಿಂತೆ

ಸಂಜು ಸ್ಯಾಮ್ಸನ್‌ ಅವರು ಸತತ ವೈಫಲ್ಯವನ್ನು ಅನುಭವಿಸುತ್ತಿದ್ದು ಚಿಂತೆ ಹೆಚ್ಚಿಸಿದೆ. ಆದರೆ ಎರಡನೇ ವಿಕೆಟ್‌ ಕೀಪರ್‌ ರೂಪದಲ್ಲಿ ತಂಡದಲ್ಲಿ ಸ್ಥಾನ ಪಡೆದಿರುವ ಇಶಾನ್‌ ಕಿಶನ್‌ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಂಡು ಅಬ್ಬರಿಸುತ್ತಿದ್ದಾರೆ. ಇವರು ಮೂರನೇ ಕ್ರಮಾಂಕದಲ್ಲಿ ಅಮೋಘ ಬ್ಯಾಟಿಂಗ್ ನಡೆಸಿದ್ದಾರೆ. ಇವರು ತಮ್ಮ ಸ್ಫೋಟಕ ಬ್ಯಾಟಿಂಗ್‌ನಿಂದ ಎರಡನೇ ಪಂದ್ಯದಲ್ಲಿ ಮಿಂಚಿದ್ದರು. ದೇಶೀಯ ಟೂರ್ನಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರಿಂದ ಇವರಿಗೆ ಮತ್ತೆ ತಂಡದಲ್ಲಿ ಸ್ಥಾನ ಲಭಿಸಿತು. ಇವರು ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಂಡಿದ್ದು ತಮ್ಮ ಸ್ಥಿರ ಪ್ರದರ್ಶನ ಮುಂದುವರೆಸಿದ್ದಾರೆ. ಇವರ ಸ್ಥಿರ ಪ್ರದರ್ಶನ ನೀಡುತ್ತಿರುವುದು ಸಂಜು ಸ್ಯಾಮ್ಸನ್‌ ಅವರಿಗೆ ಚಿಂತೆಯನ್ನು ಹೆಚ್ಚಿಸಿದೆ. ಸಂಜು ಸ್ಯಾಮ್ಸನ್‌ ಮುಂದಿನ ಪಂದ್ಯಗಳಲ್ಲಿ ಅಬ್ಬರಿಸಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವ ಅನಿವಾರ್ಯತೆ ಇದೆ.

Story first published: Monday, January 26, 2026, 12:19 [IST]
Other articles published on Jan 26, 2026
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+