IND vs SA T20: ಸಂಜು ಸ್ಯಾಮ್ಸನ್ ಅಬ್ಬರದ ಶತಕ: ಹಲವು ದಾಖಲೆಗಳು ಉಡೀಸ್
ಟೀಮ್ ಇಂಡಿಯಾದ ಭರವಸೆಯ ಬ್ಯಾಟರ್ ಸಂಜು ಸ್ಯಾಮ್ಸನ್ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಕ್ರಿಕೆಟ್‌ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಈ ಮೂಲಕ ಭಾರತದ ಪರ ಟಿ20 ಕ್ರಿಕೆಟ್‌ನಲ್ಲಿ ಎರಡನೇ ಶತಕ ಬಾರಿಸಿದರು. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಬ್ಯಾಕ್ ಟು ಬ್ಯಾಕ್ ಎರಡನೇ ಶತಕ ಬಾರಿಸಿದ ವಿಶ್ವದ ನಾಲ್ಕನೇ ಆಟಗಾರ ಎಂಬ ಖ್ಯಾತಿ ಸಂಜು ಸ್ಯಾಮ್ಸನ್ ಪಾಲಾಗಿದೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ 7 ರನ್‌ಗಳಿಗೆ ಆಟ ಮುಗಿಸಿದರು. ಆದರೆ ಇನ್ನೊಬ್ಬ ಬ್ಯಾಟರ್ ಸಂಜು ಸ್ಯಾಮ್ಸನ್ ಅಮೋಘ ಬ್ಯಾಟಿಂಗ್ ಮುಂದುವರೆಸಿದರು. ಇವರು 47 ಎಸೆತಗಳಲ್ಲಿ ಟಿ20 ಕ್ರಿಕೆಟ್‌ನ ಎರಡನೇ ಶತಕ ಬಾರಿಸಿ ಅಬ್ಬರಿಸಿದರು.

ಭಾರತದ ಮೊದಲ ಬ್ಯಾಟರ್
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬ್ಯಾಕ್ ಟು ಬ್ಯಾಕ್ ಎರಡು ಶತಕ ಬಾರಿಸಿದ ವಿಶ್ವದ ನಾಲ್ಕನೇ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಇದಕ್ಕೂ ಮೊದಲು ಫ್ರಾನ್ಸ್‌ನ ಗುಸ್ತಾವ್ ಮೆಕಿಯಾನ್, ದಕ್ಷಿಣ ಆಫ್ರಿಕಾದ ರಿಲೀ ರೊಸ್ಸೌ ಮತ್ತು ಇಂಗ್ಲೆಂಡ್ ತಂಡದ ಫಿಲ್ ಸಾಲ್ಟ್ ಮಾತ್ರ ಈ ಸಾಧನೆ ಮಾಡಿದ್ದರು. ಭಾರತದ ಪರ ಈ ಸಾಧನೆಯನ್ನು ಯಾರು ಮಾಡಿರಲಿಲ್ಲ. ಈಗ ಈ ಸಾಧನೆಯನ್ನು ಟೀಮ್ ಇಂಡಿಯಾದ ಭರವಸೆಯ ಬ್ಯಾಟರ್ ಸಂಜು ಸ್ಯಾಮ್ಸನ್ ಮಾಡಿದ್ದಾರೆ.
ಸಂಜು ಶತಕ
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಸಂಜು ಸ್ಯಾಮ್ಸನ್ 47 ಎಸೆತಗಳಲ್ಲಿ ಶತಕ ಸಿಡಿಸಿದ್ದಾರೆ. ಶತಕ ಬಾರಿಸಿದ ಬಳಿಕ ತಮ್ಮ ಇನಿಂಗ್ಸ್‌ನ್ನು ಹಿಗ್ಗಿಸಲು ಸಾಧ್ಯವೇ ಆಗಲಿಲ್ಲ. ಇವರು 50 ಎಸೆತಗಳಲ್ಲಿ 7 ಬೌಂಡರಿ ಮತ್ತು 10 ಸಿಕ್ಸರ್‌ಗಳನ್ನು ಒಳಗೊಂಡಂತೆ 107 ರನ್ ಬಾರಿಸಿ ಆರ್ಭಟಿಸಿದರು.
ಹೈದರಾಬಾದ್ ವಿರುದ್ಧ ಬಾಂಗ್ಲಾದೇಶ ವಿರುದ್ಧ ಮೂರನೇ ಟಿ20 ಕ್ರಿಕೆಟ್‌ನಲ್ಲಿ ಅಬ್ಬರದ ಶತಕವನ್ನು ಬಾರಿಸಿದ್ದರು. ಬಾಂಗ್ಲಾ ವಿರುದ್ಧ ಸಂಜು 111 ರನ್ ಬಾರಿಸಿದ್ದರು. ಈ ಮೂಲಕ ಸಂಜು ಹೈದರಾಬಾದ್‌ನಲ್ಲಿ ಕಂಡುಕೊಂಡಿದ್ದ ಫಾರ್ಮ್‌ನ್ನು ಮುಂದುವರೆಸಿದ್ದಾರೆ.
ಧೋನಿ ದಾಖಲೆ ಮೀರಿದ ಸಂಜು
ಹೈದರಾಬಾದ್ ವಿರುದ್ಧ ಬಾಂಗ್ಲಾದೇಶ ವಿರುದ್ಧ ಮೂರನೇ ಟಿ20 ಕ್ರಿಕೆಟ್‌ನಲ್ಲಿ ಅಬ್ಬರದ ಶತಕವನ್ನು ಬಾರಿಸಿದ್ದರು. ಬಾಂಗ್ಲಾ ವಿರುದ್ಧ ಸಂಜು 111 ರನ್ ಬಾರಿಸಿದ್ದರು. ಈ ಮೂಲಕ ಸಂಜು ಹೈದರಾಬಾದ್‌ನಲ್ಲಿ ಕಂಡುಕೊಂಡಿದ್ದ ಫಾರ್ಮ್‌ನ್ನು ಮುಂದುವರೆಸಿದ್ದಾರೆ. ಸಂಜು ಸ್ಯಾಮ್ಸನ್ ಮೂರು ಬಾರಿ ವಿಕೆಟ್ ಕೀಪರ್ ಆಗಿ 50ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಇದರೊಂದಿಗೆ ಅವರು ಎಂಎಸ್ ಧೋನಿ ಅವರ ದಾಖಲೆಯನ್ನು ಮೀರಿ ನಿಂತಿದ್ದಾರೆ. ಧೋನಿ ವಿಕೆಟ್ ಕೀಪರ್ ಆಗಿ ಟಿ20 ಕ್ರಿಕೆಟ್‌ನಲ್ಲಿ ಎರಡು ಬಾರಿ 50ಕ್ಕೂ ಹೆಚ್ಚು ರನ್ ಬಾರಿಸಿದ್ದರು. ಸಂಜು 50ಕ್ಕೂ ಹೆಚ್ಚು ಟಿ20 ರನ್ ಬಾರಿಸಿದ ವಿಕೆಟ್ ಕೀಪರ್ ಬ್ಯಾಟರ್ ಪಟ್ಟಿಯಲ್ಲಿ ಇಶಾನ್ ಕಿಶನ್ ಅವರೊಂದಿಗೆ ಜಂಟಿಯಾಗಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ದಕ್ಷಿಣ ಆಫ್ರಿಕಾದಲ್ಲಿ ಟಿ20ಯಲ್ಲಿ 50 ರನ್ ಗಳಿಸಿದ ಭಾರತದ ಎರಡನೇ ವಿಕೆಟ್ ಕೀಪರ್ ಎಂಬ ಖ್ಯಾತಿಯನ್ನು ಸಂಜು ಸ್ಯಾಮ್ಸನ್ ತಮ್ಮದಾಗಿಸಿಕೊಂಡಿದ್ದಾರೆ. ಈ ಮೊದಲು ಮಹೇಂದ್ರ ಸಿಂಗ್ ಧೋನಿ ಈ ಸಾಧನೆ ಮಾಡಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications