Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021: ನಾಯಕನಾಗಿ ವಿಶೇಷ ಪಟ್ಟಿಯಲ್ಲಿ ಭುವನೇಶ್ವರ್ ಹಿಂದಿಕ್ಕಿದ ಸಂಜು

Sanju Samson surpasses Bhuvneshwar Kumar in unique list as captain

ಐಪಿಎಲ್ 2021ನೇ ಆವೃತ್ತಿಯಲ್ಲಿ ಸಂಜು ಸ್ಯಾಮ್ಸನ್ ರಾಜಸ್ತಾನ್ ರಾಯಲ್ಸ್ ತಂಡವನ್ನು ಮೊಟ್ಟ ಮೊದಲ ಬಾರಿಗೆ ಮುನ್ನಡೆಸುತ್ತಿದ್ದಾರೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದ ಮೂಲಕ ಸಂಜು ತಮ್ಮ ಹೊಸ ಜವಾಬ್ಧಾರಿಯನ್ನು ವಹಿಸಿಕೊಂಡಿದ್ದಾರೆ. ಈ ಮೂಲಕ ಸಂಜು ಸ್ಯಾಮ್ಸನ್ ವಿಶೇಷ ಪಟ್ಟಿಯೊಂದರಲ್ಲಿ ಭುವನೇಶ್ವರ್ ಕುಮಾರ್ ಅವರನ್ನು ಹಿಂದಿಕ್ಕಿದ್ದಾರೆ.

ಐಪಿಎಲ್‌ನಲ್ಲಿ ಹೆಚ್ಚು ಪಂದ್ಯಗಳನ್ನು ಆಡಿದ ಬಳಿಕ ತಂಡದ ನಾಯಕತ್ವ ವಹಿಸಿಕೊಂಡ ಪಟ್ಟಿಯಲ್ಲಿ ಸಂಜು ತಮ್ಮ ಹೆಸರನ್ನು ಸೇರ್ಪಡೆಗೊಳಿಸಿದ್ದಾರೆ. ಈ ಪಟ್ಟಿಯಲ್ಲಿ ಟೀಮ್ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ಅವರನ್ನು ಹಿಂದಕ್ಕೆ ತಳ್ಳಿರುವ ಸಂಜು ಮೂರನೇ ಸ್ಥಾನದಲ್ಲಿದ್ದಾರೆ.

ಐಪಿಎಲ್ 2021: ಸುದ್ದಿ, ವಿಶ್ಲೇಷಣೆ, ಅಂಕಿ ಅಂಶಗಳುಳ್ಳ ವಿಶೇಷ ಪುಟದ ಲಿಂಕ್

ಐಪಿಎಲ್‌ನಲ್ಲಿ ಹೆಚ್ಚು ಪಂದ್ಯಗಳನ್ನು ಆಡಿದ ಬಳಿಕ ನಾಯಕನಾದವರ ಪಟ್ಟಿಯಲ್ಲಿ ಕಿರಾನ್ ಪೊಲಾರ್ಡ್ ಮೊದಲ ಸ್ಥಾನದಲ್ಲಿದ್ದಾರೆ. ಪೊಲಾರ್ಡ್ 137 ಪಂದ್ಯಗಳನ್ನು ಆಡಿದ ಬಳಿಕ ನಾಯಕನಾಗಿದ್ದಾರೆ. ಎರಡನೇ ಸ್ಥಾನದಲ್ಲಿ ಆರ್ ಅಶ್ವಿನ್ ಇದ್ದು ಅವರು 111 ಪಂದ್ಯಗಳನ್ನು ಆಡಿದ ನಂತರ ನಾಯಕನಾಗಿದ್ದಾರೆ.

ಸಂಜು ಸ್ಯಾಮ್ಸನ್ ಈ ಪಟ್ಟಿಯಲ್ಲಿ ಈಗ ಮೂರನೇ ಸ್ಥಾನದಲ್ಲಿದ್ದಾರೆ. ಸಂಜು ಸ್ಯಾಮ್ಸನ್ ನಾಯಕನಾಗುವ ಮುನ್ನ 107 ಪಂದ್ಯಗಳಲ್ಲಿ ಆಡಿದ ಅನುಭವ ಹೊಂದಿದ್ದಾರೆ. ಈ ಹಿಂದೆ ಮೂರನೇ ಸ್ಥಾನದಲ್ಲಿದ್ದ ಭುವನೇಶ್ವರ್ ಕುಮಾರ್ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದು ಅವರು 103 ಪಂದ್ಯಗಳಲ್ಲಿ ಆಡಿದ ಬಳಿಕ ನಾಯಕತ್ವ ವಹಿಸಿಕೊಂಡಿದ್ದಾರೆ.

ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಟಾಸ್ ಗೆದ್ದಿದ್ದು ಮೊದಲಿಗೆ ಪಂಜಾಬ್ ಕಿಂಗ್ಸ್ ತಂಡವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದ್ದಾರೆ.

Story first published: Monday, April 12, 2021, 21:27 [IST]
Other articles published on Apr 12, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+