For Quick Alerts
ALLOW NOTIFICATIONS  
For Daily Alerts
 

Sanju Samson: ಸಂಜುಗೆ ಬಿಸಿಸಿಐ ಬಂಪರ್ ಗಿಫ್ಟ್‌ ಸಾಧ್ಯತೆ

ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್‌) ನಡೆಯುತ್ತಿದೆ. ಈ ಲೀಗ್‌ನಲ್ಲಿ ಭಾರತದ ಸ್ಟಾರ್ ಆಟಗಾರರು ಕಣಕ್ಕೆ ಇಳಿದಿದ್ದಾರೆ. ಈ ವೇಳೆ ಭಾರತ ತಂಡದ ಸ್ಟಾರ್ ಆಟಗಾರ ಸಂಜು ಸ್ಯಾಮ್ಸನ್‌ ಅವರ ಮೇಲೆ ಎಲ್ಲರ ಕಣ್ಣುಗಳು ನೆಟ್ಟಿವೆ. ಇದೇ ಮೊದಲ ಬಾರಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಕಣಕ್ಕೆ ಇಳಿದಿದ್ದಾರೆ. ಈ ಲೀಗ್‌ನಲ್ಲಿ ಚೆನ್ನೈ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾದರೂ ಸಹ, ಸಂಜು ಅಮೋಘ ಬ್ಯಾಟಿಂಗ್ ನಡೆಸಿದ್ದಾರೆ. ಇವರು 19ನೇ ಆವೃತ್ತಿಯ ಐಪಿಎಲ್‌ನಲ್ಲಿ ಎರಡು ಶತಕಗಳನ್ನು ಬಾರಿಸಿದ್ದಾರೆ.

ಸದ್ಯ ಭಾರತ ತಂಡದ ಪರ ಸಂಜು ಸ್ಯಾಮ್ಸನ್‌ ಟಿ20 ವಿಶ್ವಕಪ್‌ ತಂಡದ ಭಾಗವಾಗಿದ್ದಾರೆ. ಇವರಿಗೆ ಇನ್ನು ಬಿಸಿಸಿಐ ದೊಡ್ಡ ಗಿಫ್ಟ್‌ ನೀಡುವ ಸಾಧ್ಯತೆ ಇದೆ. ಮುಂದಿನ ವರ್ಷ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ. ಏಕದಿನ ಫಾರ್ಮೆಟ್‌ನಲ್ಲಿ ಸಂಜು ಸ್ಯಾಮ್ಸನ್‌ ಮರಳಿ ಪ್ರವೇಶ ಪಡೆಯಬಹುದು.

Sanju Samson

ಜೂನ್‌ನಲ್ಲಿ ಟೀಮ್ ಇಂಡಿಯಾ ಮೂರು ಏಕದಿನ ಪಂದ್ಯಗಳನ್ನು ಆಡಲಿದೆ. ಈ ಸರಣಿಗೆ ಭಾರತ ತಂಡವನ್ನು ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆಯಿದೆ. ಜೂನ್‌ನಲ್ಲಿ ಅಫ್ಘಾನಿಸ್ತಾನ ತಂಡವು ಒಂದು ಟೆಸ್ಟ್ ಮತ್ತು ಮೂರು ಏಕದಿನ ಪಂದ್ಯ ನಡೆಯಲಿದೆ. ಏಕದಿನ ಪಂದ್ಯಗಳು ನಿರ್ಣಾಯಕವಾಗುತ್ತವೆ. ಈ ಅಫ್ಘಾನಿಸ್ತಾನ ಸರಣಿಯೊಂದಿಗೆ ಭಾರತ ಮುಂದಿನ ವರ್ಷದ ವಿಶ್ವಕಪ್ ತಯಾರಿ ನಡೆಸಲಿದೆ. ಸಂಜು 2023 ರಲ್ಲಿ ತಮ್ಮ ಕೊನೆಯ ಏಕದಿನ ಪಂದ್ಯವನ್ನು ಆಡಿದರು, ಸುಮಾರು ಮೂರು ವರ್ಷಗಳ ಬಳಿಕ ಇವರಿಗೆ ತಂಡದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ.

ರಿಷಭ್‌ ಪಂತ್‌ಗೆ ಗೇಟ್‌ ಪಾಸ್‌?

ರಿಷಭ್‌ ಪಂತ್ ಸದ್ಯ ಏಕದಿನ ಫಾರ್ಮೆಟ್‌ನ ಬ್ಯಾಕ್‌ಅಪ್‌ ವಿಕೆಟ್‌ ಕೀಪರ್ ಆಗಿ ಸ್ಥಾನ ಪಡೆಯುತ್ತಿದ್ದರು. ಆದರೆ ರಿಷಭ್‌ ಪಂತ್ ಅವರ ಕಳಪೆ ಫಾರ್ಮ್‌ ಇವರನ್ನು ತಂಡದಿಂದ ಹೊರಗಿಡುವ ಸಾಧ್ಯತೆ ಇದೆ. ರಿಷಭ್ ಪಂತ್ ಐಪಿಎಲ್‌ನಲ್ಲೂ ರನ್‌ ಕಲೆ ಹಾಕುವಲ್ಲಿ ವಿಫಲರಾಗಿದ್ದಾರೆ. ಇದಕ್ಕೆ ಅವರು ಬೆಲೆ ತೆರುವ ಸಾಧ್ಯತೆ ಇದೆ. ಇವರ ಬದಲಿಗೆ ಸಂಜು ಸ್ಯಾಮ್ಸನ್‌ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ.

ಸಂಜು ಸ್ಯಾಮ್ಸನ್‌ ಸಾಧನೆ

ಭಾರತದಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿರುವಲ್ಲಿ ಸ್ಟಾರ್ ಆಟಗಾರ ಸಂಜು ಸ್ಯಾಮ್ಸನ್‌ ಅವರ ಕಾಣಿಕೆ ಅಪಾರ. ಆರಂಭದಲ್ಲಿ ಇವರಿಗೆ ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ ಲಭಿಸಿರಲಿಲ್ಲ. ಸೂಪರ್ 8 ಹಂತದಲ್ಲಿ ಸಂಜು ಸ್ಯಾಮ್ಸನ್‌ ಮತ್ತೆ ಆಡುವ ಅವಕಾಶವನ್ನು ಪಡೆದರು. ಇವರು ಕೋಲ್ಕತ್ತಾದಲ್ಲಿ ನಡೆದ ಮಹತ್ವದ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ನಡೆಸಿ ತಂಡದ ಜಯದಲ್ಲಿ ಮಿಂಚಿದ್ದರು. ಇನ್ನು ಮುಂಬೈನಲ್ಲಿ ನಡೆದಿದ್ದ ಸೆಮಿಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧದ ಅಬ್ಬರಿಸಿದ್ದ ಸಂಜು, ಅಹಮದಾಬಾದ್‌ನಲ್ಲಿ ನಡೆದ ಫೈನಲ್‌ ಪಂದ್ಯದಲ್ಲೂ ನ್ಯೂಜಿಲೆಂಡ್ ವಿರುದ್ಧ ಆರ್ಭಟ ನಡೆಸಿದ್ದರು. ಇವರ ಸ್ಥಿರ ಬ್ಯಾಟಿಂಗ್‌ ಪರಿಣಾಮ ಇವರಿಗೆ ಟಿ20 ವಿಶ್ವಕಪ್‌ನ ಸರಣಿ ಶ್ರೇಷ್ಠ ಆಟಗಾರ ಎಂಬ ಖ್ಯಾತಿ ತಮ್ಮದಾಗಿಸಿಕೊಂಡಿದ್ದಾರೆ.

Story first published: Thursday, April 30, 2026, 22:06 [IST]
Other articles published on Apr 30, 2026
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+