ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Sanju Samson: ಭಾರತ ತಂಡದಿಂದ ನಿರಂತರ ನಿರ್ಲಕ್ಷ್ಯ; ಐರ್ಲೆಂಡ್ ಪರ ಆಡಲಿದ್ದಾರಾ ಸಂಜು ಸ್ಯಾಮ್ಸನ್?

Sanju Samson Will Play For Ireland After Constant Neglected By Team India?

ಕಳೆದ ಕೆಲವು ತಿಂಗಳುಗಳಲ್ಲಿ ಉತ್ತಮ ಪ್ರದರ್ಶನಗಳ ಹೊರತಾಗಿಯೂ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಅವರು ಭಾರತೀಯ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆಯಲು ಸಾಧ್ಯವಾಗುತ್ತಿಲ್ಲ. ನಿರಂತರವಾಗಿ ನಿರ್ಲಕ್ಷ್ಯಕ್ಕೆ ಒಳಗಾಗುಗುತ್ತಿದ್ದಾರೆ.

ಇತ್ತೀಚೆಗೆ ಬಾಂಗ್ಲಾದೇಶ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಇಶಾನ್ ಕಿಶನ್ ಅದ್ಭುತ ದ್ವಿಶತಕ ಬಾರಿಸಿರುವುದು, ಸಂಜು ಸ್ಯಾಮ್ಸನ್ ಅವರ ಆಯ್ಕೆಯನ್ನು ಮತ್ತಷ್ಟು ದೂರಕ್ಕೆ ತಳ್ಳಿದೆ.

ಭಾರತ ಎ ತಂಡದ ನಾಯಕನಾಗಿಯೂ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿರುವ ಸಂಜು ಸ್ಯಾಮ್ಸನ್, ಭಾರತ ಹಿರಿಯರ ತಂಡದಲ್ಲಿ ರಿಷಭ್ ಪಂತ್ ಕಳಪೆ ಪ್ರದರ್ಶನ ನೀಡಿದ ಹೊರತಾಗಿಯೂ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಿಲ್ಲ. ಸ್ಯಾಮ್ಸನ್‌ರನ್ನು ಯಾಕೆ ಭಾರತ ತಂಡದಲ್ಲಿ ಸೇರಿಸಿಕೊಳ್ಳುತ್ತಿಲ್ಲ ಎಂಬುದು ದೊಡ್ಡ ಪ್ರಶ್ನೆಯಾಗಿದೆ.

IND-W vs AUS-W: ಸ್ಮೃತಿ ಮಂಧಾನ ಸ್ಫೋಟಕ ಬ್ಯಾಟಿಂಗ್; ಸೂಪರ್ ಓವರ್‌ನಲ್ಲಿ ಗೆದ್ದು ಬೀಗಿದ ಭಾರತIND-W vs AUS-W: ಸ್ಮೃತಿ ಮಂಧಾನ ಸ್ಫೋಟಕ ಬ್ಯಾಟಿಂಗ್; ಸೂಪರ್ ಓವರ್‌ನಲ್ಲಿ ಗೆದ್ದು ಬೀಗಿದ ಭಾರತ

ಸಂಜು ಸ್ಯಾಮ್ಸನ್ ಅವರನ್ನು ತಂಡದ ಆಯ್ಕೆಯಲ್ಲಿ ಪರಿಗಣಿಸದಿರುವುದರಿಂದ ಮತ್ತು ಭಾರತೀಯ ತಂಡದ ಮ್ಯಾನೇಜ್‌ಮೆಂಟ್ ಅವರಿಗೆ ಅವಕಾಶ ನೀಡದಿದ್ದಕ್ಕಾಗಿ ಅಭಿಮಾನಿಗಳಿಂದ ಟೀಕೆಗೆ ಗುರುಯಾಗಿದೆ. ಇದೇ ವೇಳೆ ಐರ್ಲೆಂಡ್ ಕ್ರಿಕೆಟ್ ಮಂಡಳಿಯು ಇತ್ತೀಚೆಗೆ ತನ್ನ ತಂಡವನ್ನು ಸೇರಲು ಸಂಜು ಸ್ಯಾಮ್ಸನ್‌ಗೆ ಆಫರ್ ನೀಡಿದೆ ಎಂದು ವರದಿಯಾಗಿದೆ.

Sanju Samson Will Play For Ireland After Constant Neglected By Team India?

ವರದಿಗಳ ಪ್ರಕಾರ, ಐರ್ಲೆಂಡ್ ಕ್ರಿಕೆಟ್ ಬೋರ್ಡ್ ಸಂಜು ಸ್ಯಾಮ್ಸನ್ ತನ್ನ ಕ್ರಿಕೆಟ್ ವೃತ್ತಿಜೀವನವನ್ನು ಮುಂದುವರಿಸಲು ತನ್ನ ದೇಶಕ್ಕೆ ಬಂದರೆ, ಅವನು ಪ್ರತಿ ಪಂದ್ಯದಲ್ಲೂ ಆಡುತ್ತಾನೆ ಎಂದು ಭರವಸೆ ನೀಡಿದೆ.

ಆದರೆ ಸಂಜು ಸ್ಯಾಮ್ಸನ್ ಅವರು ಐರ್ಲೆಂಡ್ ಕ್ರಿಕೆಟ್ ಮಂಡಳಿಯ ಈ ಪ್ರಸ್ತಾಪವನ್ನು ನಿರಾಕರಿಸಿದ್ದಾರೆ ಮತ್ತು ತಾನು ಭಾರತ ತಂಡವನ್ನು ಪ್ರತಿನಿಧಿಸಲು ಬಯಸುತ್ತಿರುವ ಕಾರಣ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೇರೆ ರಾಷ್ಟ್ರಕ್ಕಾಗಿ ಆಡುವುದನ್ನು ಪರಿಗಣಿಸುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ.

ಒಂದು ವೇಳೆ 28 ವರ್ಷದ ಕೇರಳ ಮೂಲದ ಆಟಗಾರ ಈ ಪ್ರಸ್ತಾಪವನ್ನು ಒಪ್ಪಿಕೊಂಡಿದ್ದರೆ, ಬಿಸಿಸಿಐ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್‌ನೊಂದಿಗಿನ ಎಲ್ಲಾ ಸಂಬಂಧಗಳನ್ನು ಕಡಿತಗೊಳಿಸಬೇಕಾಗಿತ್ತು.

2022ರ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತದ ತಂಡದಿಂದ ಸಂಜು ಸ್ಯಾಮ್ಸನ್ ನಿರ್ಲಕ್ಷಿಸಲ್ಪಟ್ಟರು. ಅದಕ್ಕೂ ಮುನ್ನ 2022ರ ಏಷ್ಯಾ ಕಪ್‌ ಪಂದ್ಯಾವಳಿಯಿಂದ ಸಹ ಹೊರಗಿಡಲಾಯಿತು. ಇತ್ತೀಚೆಗೆ ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ರಿಷಭ್ ಪಂತ್ ಹೊರಗುಳಿದಿದ್ದರೂ, ಸಂಜು ಸ್ಯಾಮ್ಸನ್‌ಗೆ ಭಾರತ ತಂಡದಲ್ಲಿ ಅವಕಾಶ ನೀಡಲಿಲ್ಲ. ನ್ಯೂಜಿಲೆಂಡ್ ಪ್ರವಾಸದಲ್ಲಿ ಏಕದಿನ ಸರಣಿಗೆ ಅವರು ತಂಡದ ಸದಸ್ಯರಾಗಿದ್ದರೂ, ಒಂದೇ ಒಂದು ಪಂದ್ಯವನ್ನು ಆಡಲು ಅವಕಾಶ ಸಿಗಲಿಲ್ಲ.

ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಸಂಜು ಸ್ಯಾಮ್ಸನ್ ಉತ್ತಮ ಬ್ಯಾಟಿಂಗ್ ಪ್ರದರ್ಶನ ತೋರಿದರು. ಭಾರತ ತಂಡ ಸೋತ ಮೊದಲ ಏಕದಿನ ಪಂದ್ಯದಲ್ಲಿ ಅಜೇಯ 86 ರನ್‌ಗಳ ಕೆಚ್ಚೆದೆಯ ಹೋರಾಟ ಪ್ರದರ್ಶಿಸಿದರು.

ಸಂಜು ಸ್ಯಾಮ್ಸನ್ ಭಾರತ ತಂಡವನ್ನು ಗೆಲುವಿನ ಹತ್ತಿರಕ್ಕೆ ಬರಲು ಸಹಾಯ ಮಾಡಿದರು. ಆದರೆ, ಅವರಿಗೆ ಉಳಿದ ಬ್ಯಾಟರ್‌ಗಳು ಸಾಥ್ ನೀಡಲಿಲ್ಲ. ದಕ್ಷಿಣ ಆಫ್ರಿಕಾ ವಿರುದ್ಧದ ಉಳಿದ ಎರಡು ಏಕದಿನ ಪಂದ್ಯಗಳಲ್ಲಿ ಅವರು ಕ್ರಮವಾಗಿ 30 ಮತ್ತು 2 ರನ್ ಗಳಿಸಿದರು ಮತ್ತು ಅಂತಿಮವಾಗಿ ಭಾರತ 2-1 ಅಂತರದಲ್ಲಿ ಸರಣಿ ಗೆದ್ದಿತ್ತು.

Story first published: Monday, December 12, 2022, 8:51 [IST]
Other articles published on Dec 12, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X