Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಸಂಜು ಸ್ಯಾಮ್ಸನ್‌ಗೆ ಮಾರ್ಚ್‌ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ

ಟಿ20 ವಿಶ್ವಕಪ್‌ನಲ್ಲಿ ಭಾರತ ಅಮೋಘ ಪ್ರದರ್ಶನ ನೀಡಿ ತವರಿನಲ್ಲಿ ಪ್ರಶಸ್ತಿಯನ್ನು ಡಿಫೆಂಡ್‌ ಮಾಡಿಕೊಳ್ಳುವಲ್ಲಿ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್‌ ಅವರ ಕೊಡುಗೆ ಅಪಾರ. ಇವರು ಸೂಪರ್ 8 ಹಂತದಲ್ಲಿ ಪ್ಲೇಯಿಂಗ್ ಇಲೆವೆನ್‌ನಲ್ಲಿ ಆಡುವ ಅವಕಾಶವನ್ನು ಪಡೆದರು. ಸಿಕ್ಕ ಅವಕಾಶವನ್ನು ಬಳಸಿಕೊಂಡು ಅಬ್ಬರಿಸಿದ ಸಂಜು, ಅವರ ಸಾಧನೆಗೆ ಐಸಿಸಿ ಗರಿ ಸಂದಿದೆ.

ಮಾರ್ಚ್ ತಿಂಗಳಿನಲ್ಲಿ ಸಂಜು ಸ್ಯಾಮ್ಸನ್ ಅವರನ್ನು ಐಸಿಸಿ ತಿಂಗಳ ಆಟಗಾರ ಎಂದು ಹೆಸರಿಸಿದೆ. ಸಂಜು ಸ್ಯಾಮ್ಸನ್‌ ಮಾರ್ಚ್‌ನಲ್ಲಿ ವೆಸ್ಟ್‌ ಇಂಡೀಸ್‌, ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್‌, ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಅರ್ಧಶತಕ ಬಾರಿಸಿ ತಂಡದ ಜಯದಲ್ಲಿ ಮಿಂಚಿದ್ದರು. ಇದರಿಂದ ಸಂಜು ಇತಿಹಾಸ ಸೃಷ್ಟಿಸಿ ಹೊಸ ಅಧ್ಯಾಯ ಬರೆದಿದ್ದಾರೆ. ಇವರ ಅಮೋಘ ಬ್ಯಾಟಿಂಗ್‌ ನೆರವಿನಿಂದ ಇವರನ್ನು ಐಸಿಸಿ ಟಿ20 ವಿಶ್ವಕಪ್‌ ಸರಣಿ ಶ್ರೇಷ್ಠ ಆಟಗಾರ ಎಂಬ ಗರಿ ಸಹ ಸಂದಿತ್ತು. ಈಗ ಸಂಜು ಅವರಿಗೆ ತಿಂಗಳ ಆಟಗಾರ ಪ್ರಶಸ್ತಿ ಲಭಿಸಿದೆ.

Sanju Samson

ಸಂಜು ಸ್ಯಾಮ್ಸನ್‌ ಟಿ20 ವಿಶ್ವಕಪ್‌ಗೂ ಮುನ್ನ ಟಿ20 ಸರಣಿಯಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರು. ಹೀಗಾಗಿ ಇವರು ಟಿ20 ವಿಶ್ವಕಪ್‌ನಲ್ಲಿ ಸ್ಥಾನ ಪಡೆದರೂ ಸಹ ಆರಂಭಿಕ ಪಂದ್ಯಗಳಲ್ಲಿ ತಂಡದಲ್ಲಿ ಸ್ಥಾನ ಪಡೆದಿರಲಿಲ್ಲ. ಆದರೆ ರಿಂಕು ಸಿಂಗ್‌ ಅನಿವಾರ್ಯ ಕಾರಣಗಳಿಂದ ತಂಡದಿಂದ ಹೊರ ನಡೆದಾಗ ನೇರವಾಗಿ ಸಂಜು ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದರು. ಸೂಪರ್ 8 ಹಂತದ ಮೊದಲ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಸ್ಥಿರ ಪ್ರದರ್ಶನ ನೀಡಲಿಲ್ಲ. ಆದರೆ ಸೂಪರ್ 8 ಹಂತದ ಮಹತ್ವದ ಪಂದ್ಯ ವೆಸ್ಟ್‌ ಇಂಡೀಸ್‌ ವಿರುದ್ಧದ ಪಂದ್ಯದಲ್ಲಿ ಸಂಜು 97 ರನ್‌ ಬಾರಿಸಿ ಅಬ್ಬರಿಸಿದ್ದರು.

ಇನ್ನು ಇಂಗ್ಲೆಂಡ್‌ ವಿರುದ್ಧದ ಸೆಮಿಫೈನಲ್‌ ಪಂದ್ಯದಲ್ಲಿ ಒತ್ತಡವನ್ನು ಮೆಟ್ಟಿನಿಂತು ಬ್ಯಾಟ್ ಮಾಡಿದ ಸಂಜು 89 ರನ್‌ ಬಾರಿಸಿ ಮಿಂಚಿದರು. ಇವರ ಅಮೋಘ ಬ್ಯಾಟಿಂಗ್ ನೆರವಿನಿಂದ ಟೀಮ್ ಇಂಡಿಯಾ ಸವಾಲಿನ ಮೊತ್ತ ಕಲೆ ಹಾಕಿತು. ಆದರೆ ಸೆಮಿಫೈನಲ್‌ನಲ್ಲಿ ಭಾರತ ರೋಚಕ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿತು. ಅಹಮದಾಬಾದ್‌ನಲ್ಲಿ ನಡೆದ ಫೈನಲ್‌ ಪಂದ್ಯದಲ್ಲೂ ಸಂಜು ಕ್ಲಾಸಿಕ್ ಬ್ಯಾಟ್ ನಡೆಸಿ 89 ರನ್‌ ಸಿಡಿಸಿದರು. ಇವರ ಅಮೋಘ ಬ್ಯಾಟಿಂಗ್ ಪರಿಣಾಮ ಭಾರತ ತವರಿನಲ್ಲಿ ಪ್ರಶಸ್ತಿ ಗೆಲ್ಲುವಲ್ಲಿ ಕಾರಣವಾಯಿತು. ಅಲ್ಲದೆ ತವರಿನಲ್ಲಿ ಪ್ರಶಸ್ತಿ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.

Sanju Samson

ಮಾರ್ಚ್‌ನಲ್ಲಿ ಸಂಜು ಸಾಧನೆ

ಮಾರ್ಚ್ ತಿಂಗಳಲ್ಲಿ ಸಂಜು ಸ್ಯಾಮ್ಸನ್ ಮೂರು ಟಿ20 ಪಂದ್ಯಗಳನ್ನು ಆಡಿದ್ದು, 137.50ರ ಸರಾಸರಿ ಮತ್ತು 199.27 ರ ಸ್ಟ್ರೈಕ್ ರೇಟ್‌ನಲ್ಲಿ 275 ರನ್ ಗಳಿಸಿದರು. ಅಲ್ಲದೆ ಸಂಜು ಸ್ಯಾಮ್ಸನ್ ಸತತ ಎರಡು ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಗೆದ್ದಿದ್ದರು. ಈ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಸಂಜು ಸ್ಯಾಮ್ಸನ್ ಇತಿಹಾಸ ನಿರ್ಮಿಸಿದ್ದಾರೆ. ಈ ಪ್ರತಿಷ್ಠಿತ ಐಸಿಸಿ ಪ್ರಶಸ್ತಿಯನ್ನು ಪಡೆದ ಕೇರಳದ ಮೊದಲ ಮತ್ತು ಏಕೈಕ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Story first published: Tuesday, April 14, 2026, 20:45 [IST]
Other articles published on Apr 14, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+