ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಸರ್ಫರಾಜ್ ಖಾನ್‌ಗೆ ಅವಕಾಶ ಇಲ್ಲ: ಬಿಸಿಸಿಐ ನೀಡಿದ ಭರವಸೆ ಏನು?

Sarfaraz Khan Out Of Australia Series: BCCI Selectors Promise Him Will Give Place In Future Series

ರಣಜಿ ಟ್ರೋಫಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯಲು ಕಾಯುತ್ತಿರುವ ಸರ್ಫರಾಜ್‌ ಖಾನ್‌ಗೆ ಬಿಸಿಸಿಐ ಶಾಕ್ ನೀಡಿದೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡದಲ್ಲಿ ಸರ್ಫರಾಜ್‌ ಖಾನ್‌ಗೆ ಅವಕಾಶ ಇಲ್ಲ ಎಂದು ಹೇಳಿದೆ.

ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಈಗಾಗಲೇ ತಂಡವನ್ನು ಘೋಷಿಸಲಾಗಿದ್ದು, ಸರ್ಫರಾಜ್‌ ಖಾನ್‌ಗೆ ಅವಕಾಶ ಸಿಕ್ಕಿರಲಿಲ್ಲ. ಆದರೆ, ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ಅವರನ್ನು ಆಯ್ಕೆ ಮಾಡುವ ಬಗ್ಗೆ ಭರವಸೆ ಇತ್ತು, ಈಗ ಅದಕ್ಕೂ ಸ್ಪಷ್ಟನೆ ಸಿಕ್ಕಿದ್ದು ಸರ್ಫರಾಜ್‌ ಖಾನ್‌ ಭಾರತ ತಂಡದಲ್ಲಿ ಆಡಲು ಇನ್ನೂ ಕಾಯಬೇಕಿದೆ.

ಇದು ವಾಶಿಂಗ್ಟನ್ vs ನ್ಯೂಜಿಲೆಂಡ್ ಪಂದ್ಯ ಎಂಬಂತಿತ್ತು: ಸುಂದರ್ ಆಟಕ್ಕೆ ಹಾರ್ದಿಕ್ ಮೆಚ್ಚುಗೆಇದು ವಾಶಿಂಗ್ಟನ್ vs ನ್ಯೂಜಿಲೆಂಡ್ ಪಂದ್ಯ ಎಂಬಂತಿತ್ತು: ಸುಂದರ್ ಆಟಕ್ಕೆ ಹಾರ್ದಿಕ್ ಮೆಚ್ಚುಗೆ

ಬಿಸಿಸಿಐ ಆಯ್ಕೆದಾರರು ಸರ್ಫರಾಜ್‌ ಖಾನ್‌ಗೆ ಭರವಸೆ ನೀಡಿದ್ದು, ಮುಂದಿನ ಟೆಸ್ಟ್ ಸರಣಿಗಾಗಿ ಅವರನ್ನು ಆಯ್ಕೆಗೆ ಪರಿಗಣಿಸಲಾಗುವುದು ಎಂದು ಹೇಳಿದ್ದಾರೆ. ವಿಶ್ವಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ನಂತರ ಭಾರತ ಆಡುವ ಟೆಸ್ಟ್ ಸರಣಿಗೆ ಸರ್ಫರಾಜ್ ಖಾನ್‌ಗೆ ಅವಕಾಶ ಸಿಗುವ ಸಾಧ್ಯತೆ ಇದೆ. ರಣಜಿ ಟ್ರೋಫಿಯಲ್ಲಿ ಮುಂಬೈ ಪರ ಆಡುವ ಸರ್ಫರಾಜ್ ಖಾನ್ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರು.

Sarfaraz Khan Out Of Australia Series: BCCI Selectors Promise Him Will Give Place In Future Series

ಭವಿಷ್ಯದಲ್ಲಿ ತಂಡಕ್ಕೆ ಸೇರ್ಪಡೆ

ಫಸ್ಟ್ ಕ್ಲಾಸ್‌ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಸರ್ಫರಾಜ್ ಖಾನ್ ಪದೇ ಪದೇ ಆಯ್ಕೆದಾರರಿಂದ ಕಡೆಗಣಿಸಲ್ಪಟ್ಟಿದ್ದರು. ರಿಷಬ್ ಪಂತ್ ಮತ್ತು ಶ್ರೇಯಸ್ ಅಯ್ಯರ್ ಗಾಯಗೊಂಡಿ ಟೆಸ್ಟ್ ಸರಣಿಯಿಂದ ಹೊರಬಿದ್ದ ನಂತರ ಸರ್ಫರಾಜ್‌ ಖಾನ್‌ಗೆ ಅವಕಾಶ ನೀಡುವ ಸಾಧ್ಯತೆ ಇತ್ತಾದರೂ, ಅವರಿಗೆ ಅವಕಾಶ ಇಲ್ಲ ಎಂದು ಹೇಳಿದೆ.

ಆಯ್ಕೆಗಾರ ಶ್ರೀಧರನ್ ಶರತ್ ಈ ಮಾತನಾಡಿದ್ದು, ಸರ್ಫರಾಜ್ ಖಾನ್‌ರನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎನ್ನುವುದನ್ನು ಖಚಿತಪಡಿಸಿದ್ದಾರೆ. "ಅವರು ನಮ್ಮ ಗಮನದಲ್ಲಿದ್ದಾರೆ. ಶೀಘ್ರದಲ್ಲೇ ಅವರು ಭಾರತ ತಂಡಕ್ಕೆ ಆಯ್ಕೆಯಾಗುವ ಅರ್ಹತೆ ಪಡೆಯುತ್ತಾರೆ. ಆಯ್ಕೆ ಮಾಡುವಾಗ ನಾವು ತಂಡದ ಸಂಯೋಜನೆ ಮತ್ತು ಸಮತೋಲನವನ್ನು ನಾವು ಪರಿಗಣಿಸಬೇಕಿದೆ" ಎಂದು ಹೇಳಿದರು.

Sarfaraz Khan Out Of Australia Series: BCCI Selectors Promise Him Will Give Place In Future Series

ರಣಜಿ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ

ಕಳೆದ ಎರಡು ಆವೃತ್ತಿಯಂತೆ ಈ ಬಾರಿಯ ರಣಜಿ ಟ್ರೋಫಿಯಲ್ಲಿ ಕೂಡ ಸರ್ಫರಾಜ್ ಖಾನ್ ಅತ್ಯುತ್ತಮ ಫಾರ್ಮ್ ಮುಂದುವರೆಸಿದ್ದಾರೆ. ಈ ಬಾರಿ ರಣಜಿ ಪಂದ್ಯಾವಳಿಯಲ್ಲಿ ಮುಂಬೈ ಪರವಾಗಿ ಮೂರು ಶತಕಗಳನ್ನು ಸಿಡಿಸಿದ್ದಾರೆ. ದೆಹಲಿ ವಿರುದ್ಧದ ಪಂದ್ಯದಲ್ಲಿ 125 ರನ್ ಗಳಿಸಿ ಗಮನ ಸೆಳೆದಿದ್ದರು.

ಮುಂಬೈ ಮತ್ತು ಮಹಾರಾಷ್ಟ್ರ ನಡುವಿನ ಪಂದ್ಯದಲ್ಲಿ ಅನಾರೋಗ್ಯದ ಕಾರಣದಿಂದ ಸರ್ಫರಾಜ್ ಖಾನ್ ಆಡಲಿಲ್ಲ. ಈ ಪಂದ್ಯದಲ್ಲಿ ಸೋಲನುಭವಿಸಿದ ಮುಂಬೈ ರಣಜಿ ಟ್ರೋಫಿ ಅಭಿಯಾನವನ್ನು ಅಂತ್ಯಗೊಳಿಸಿದೆ.

Story first published: Saturday, January 28, 2023, 11:01 [IST]
Other articles published on Jan 28, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X