For Quick Alerts
ALLOW NOTIFICATIONS  
For Daily Alerts
 

ಬಾಂಗ್ಲಾ ವಿರುದ್ಧದ ಟೆಸ್ಟ್‌ ತಂಡದಲ್ಲಿ ಸ್ಥಾನ ಪಡೆಯುವ ಭರವಸೆ ಇಲ್ಲ: ಸರ್ಫರಾಜ್ ಖಾನ್

ಭಾರತ ಆಟಗಾರರು ಈಗ ದೇಶೀಯ ಟೂರ್ನಿಯತ್ತ ಮುಖ ಮಾಡಿದ್ದಾರೆ. ಮುಂದಿನ ತಿಂಗಳು ಆರಂಭವಾಗಲಿರುವ ಬಾಂಗ್ಲಾದೇಶದ ವಿರುದ್ಧದ ಟೆಸ್ಟ್ ಸರಣಿಗೆ ಆಟಗಾರರು ತಯಾರಿ ನಡೆಸಿದ್ದಾರೆ. ಮ್ಯಾಚ್ ಪ್ರ್ಯಾಕ್ಟಿಸ್‌ ಇರಲಿ ಎಂಬ ಉದ್ದೇಶದಿಂದ ಆಯ್ಕೆದಾರರು ಆಟಗಾರರಿಗೆ ದುಲೀಪ್‌ ಟ್ರೋಫಿಯಲ್ಲಿ ಆಡಲು ಸೂಚಿಸಿದರು. ಆದರೆ ವಿರಾಟ್‌ ಕೊಹ್ಲಿ, ರೋಹಿತ್‌ ಶರ್ಮಾ ಇನ್ನು ಆಡುವ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.

ದುಲೀಪ್‌ ಟ್ರೋಫಿ ಹಾಗೂ ಬುಚ್ಚಿ ಬಾಬು ದೇಶೀಯ ಟೂರ್ನಿಯಲ್ಲಿ ಭಾರತದ ಸ್ಟಾರ್‌ ಆಟಗಾರರು ಭಾಗವಹಿಸಲಿದ್ದಾರೆ. ಈ ಮೂಲಕ ಬಾಂಗ್ಲಾ ವಿರುದ್ಧದ ಟೆಸ್ಟ್‌ ಸರಣಿಗೆ ತಮ್ಮನ್ನು ಪರಿಗಣಿಸುವಂತೆ ಆಯ್ಕೆದಾರರ ಮನ ವಲಿಸಲಿದ್ದಾರೆ. ಈ ವೇಳೆ ಟೀಮ್ ಇಂಡಿಯಾ ಯುವ ಆಟಗಾರ ಒಬ್ಬ ತಮ್ಮನ್ನು ತಂಡದಲ್ಲಿ ಆಯ್ಕೆ ಮಾಡುವ ಬಗ್ಗೆ ಯಾವುದೇ ಭರವಸೆ ಇಲ್ಲ ಎಂದು ತಿಳಿಸಿದ್ದಾರೆ.

Sarfaraz Khan Uncertain About Test Spot for Bangladesh Series Despite Strong Domestic Form

ಭರವಸೆ ಇಲ್ಲ

ಇಂಗ್ಲೆಂಡ್‌ ವಿರುದ್ಧ ತವರಿನಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಆಡುವ ಅವಕಾಶವನ್ನು ಮುಂಬೈ ತಂಡದ ಸ್ಟಾರ್ ಬ್ಯಾಟರ್‌ ಸರ್ಫರಾಜ್ ಖಾನ್‌ ಪಡೆದರು. ಇವರು ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಂಡು ಸ್ಥಿರ ಪ್ರದರ್ಶನ ನೀಡಿದರು. ಆದರೆ ಆ ಸಮಯದಲ್ಲಿ ಹಲವು ಆಟಗಾರರು ಗಾಯಕ್ಕೆ ತುತ್ತಾಗಿದ್ದರು. ಹೀಗಾಗಿ ಯುವ ಆಟಗಾರನಿಗೆ ಆಡುವ ಅವಕಾಶ ಲಭಿಸಿತ್ತು. ಇನ್ನೇನು ಕೆಲವೇ ದಿನಗಳಲ್ಲಿ ಬಾಂಗ್ಲಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ. ಈ ತಂಡದಲ್ಲಿ ಸ್ಥಾನ ಪಡೆಯಲು ಆಟಗಾರರು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಆದರೆ ಈ ಸರಣಿಯಲ್ಲಿ ತಮಗೆ ಸ್ಥಾನ ಸಿಗುವ ಭರವಸೆ ಇಲ್ಲ ಎಂದು ಸರ್ಫರಾಜ್ ತಿಳಿಸಿದ್ದಾರೆ.

ಪದಾರ್ಪಣೆ ಸರಣಿಯಲ್ಲಿ ಅಬ್ಬರ

ಇಂಗ್ಲೆಂಡ್‌ ವಿರುದ್ಧ ಟೆಸ್ಟ್‌ ಸರಣಿಯಲ್ಲಿ ಆಡುವ ಅವಕಾಶದಲ್ಲಿ ಸರ್ಫರಾಜ್ ಸ್ಥಿರ ಪ್ರದರ್ಶನ ನೀಡಿದ್ದರು. ಇವರು ತಮ್ಮ ಚೊಚ್ಚಲ ಪಂದ್ಯದಲ್ಲೇ ಅಮೋಘ ಬ್ಯಾಟಿಂಗ್ ಸ್ಕಿಲ್ಸ್‌ ಪ್ರದರ್ಶಿಸಿ ತಂಡಕ್ಕೆ ನೆರವಾಗಿದ್ದರು. ಆದರೆ ಬಾಂಗ್ಲಾದೇಶ ಟೆಸ್ಟ್‌ ಸರಣಿಯ ತಂಡದಲ್ಲಿ ಸ್ಥಾನ ಸಿಗುವ ಯಾವುದೇ ನಿರೀಕ್ಷೆಗಳು ಇಲ್ಲ ಎಂದು ಸರ್ಫರಾಜ್‌ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಅವಕಾಶ ಸಿಕ್ಕರೆ ನಾನು ನನ್ನ ಕ್ಷಮತೆ ತೋರಿಸುವೆ. ನಾನು ಎಲ್ಲದಕ್ಕೂ ಸಿದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.

Sarfaraz Khan Uncertain About Test Spot for Bangladesh Series Despite Strong Domestic Form

ಇಂಗ್ಲೆಂಡ್‌ ವಿರುದ್ಧ ನಡೆದಿದ್ದ ಟೆಸ್ಟ್‌ ಸರಣಿಯ ವೇಳೆ ಅನುಭವಿ ಆಟಗಾರರು ಗಾಯಕ್ಕೆ ತುತ್ತಾಗಿದ್ದರಿಂದ ಯುವ ಆಟಗಾರರಿಗೆ ತಂಡದಲ್ಲಿ ಆಡುವ ಅವಕಾಶ ಲಭಿಸಿತು. ಈ ಅವಕಾಶಕ್ಕಾಗಿ ಕಾಯುತ್ತಿದ್ದ ಸರ್ಫರಾಜ್‌ ಮೊದಲ ಇನಿಂಗ್ಸ್‌ನಲ್ಲಿ ತಾವು ಎಂತಹ ಬ್ಯಾಟ್ಸ್‌ಮನ್‌ ಎಂಬುದನ್ನು ಸಾಬೀತು ಪಡಿಸಿದರು. ಆಡಿರುವ ಪಂದ್ಯಗಳಲ್ಲಿ 3 ಅರ್ಧ ಶತಕಗಳೊಂದಿಗೆ 200 ರನ್ ಗಳಿಸಿದರು.

ಇನ್ನು ಸಾಲು ಸಾಲು ಟೆಸ್ಟ್‌ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಆಡಲಿದೆ. ಈ ವೇಳೆ ಸರ್ಫರಾಜ್‌ಗೆ ಅವಕಾಶ ಸಿಗುವ ಸಾಧ್ಯತೆ ಇದೆ.

Story first published: Friday, August 16, 2024, 12:52 [IST]
Other articles published on Aug 16, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+