ಇಂಗ್ಲೆಂಡ್ ಪ್ರವಾಸಕ್ಕೆ ತಂಡವನ್ನು ಪ್ರಕಟಿಸಿದಾಗ ಹಲವು ಯುವ ಆಟಗಾರರಿಗೆ ಅವಕಾಶವನ್ನು ನೀಡಲಾಯಿತು. ಆದರೆ ಈ ಪಟ್ಟಿಯಲ್ಲಿ ಒಬ್ಬ ಪ್ಲೇಯರ್ ಹೆಸರು ಮಾತ್ರ ಮಿಸ್ ಆಗಿತ್ತು. ಈ ಪ್ಲೇಯರ್ ಈಗಾಗಲೇ ಭಾರತ ಪರ ಟೆಸ್ಟ್ ಪಂದ್ಯಗಳನ್ನು ಆಡಿ ಸೈ ಎನಿಸಿಕೊಂಡಿದ್ದರು. ಈ ಪ್ಲೇಯರ್ ಕೈ ಬಿಟ್ಟಿದ್ದಕ್ಕೆ ಹಲವು ಚರ್ಚೆಗಳು ಆರಂಭವಾಗಿದ್ದವು. ಇವರ ಫಿಟ್ನೆಸ್ ಬಗ್ಗೆ ಪ್ರಶ್ನೆಗಳನ್ನು ಮಾಡಲಾಗಿತ್ತು. ಆದರೆ ಈ ಪ್ಲೇಯರ್ ಈಗ ದೇಶೀಯ ಟೂರ್ನಿಯಲ್ಲಿ ಧಮಾಕೆದಾರ್ ಪ್ರದರ್ಶನ ನೀಡಿ ತಮ್ಮನ್ನು ಕೈ ಬಿಟ್ಟಿದ್ದು ತಪ್ಪು ಎಂಬಂತೆ ಬ್ಯಾಟ್ ಮಾಡಿದ್ದಾರೆ. ಅಲ್ಲದೆ ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಲ್ಲಿ ತಮ್ಮನ್ನು ಪರಿಗಣಿಸಿ ಎಂಬಂತೆ ಬ್ಯಾಟ್ ಮಾಡಿದ್ದಾರೆ.
ಸದ್ಯ ದೇಶೀಯ ಟೂರ್ನಿ ಬುಚಿಬಾಬು ಟ್ರೋಫಿ ನಡೆದಿದೆ. ಈ ಟೂರ್ನಿಯಲ್ಲಿ ಹಲವು ಸ್ಟಾರ್ ಆಟಗಾರರು ಆಡುತ್ತಿದ್ದಾರೆ. ಸರ್ಫರಾಜ್ ಖಾನ್ ಮುಂಬೈ ಪರ ಮೈದಾನಕ್ಕೆ ಇಳಿದಿದ್ದಾರೆ. ಇವರು ಈ ಈ ಟೂರ್ನಿಯಲ್ಲಿ ತಮಿಳು ನಾಡು ವಿರುದ್ಧ ಬ್ಯಾಟಿಂಗ್ ಮಾಡುವಾಗ ಅಮೋಘ ಶತಕ ಸಿಡಿಸಿದ್ದಾರೆ. ತಂಡ ಸಂಕಷ್ಟದಲ್ಲಿದ್ದಾಗ ಇವರು ಬ್ಯಾಟ್ ಮಾಡಲು ಮೈದಾನಕ್ಕೆ ಬಂದರು. ಇವರು ಪರಿಸ್ಥಿತಿಗೆ ಅನುಗುಣವಾಗಿ ಬ್ಯಾಟ್ ಮಾಡಿ ಎಲ್ಲರ ಚಿತ್ತ ಕದ್ದಿದ್ದಾರೆ. ಇವರು ಈ ಪಂದ್ಯದಲ್ಲಿ 92 ಎಸೆತಗಳಲ್ಲಿ ಶತಕ ಬಾರಿಸಿ ಅಬ್ಬರಿಸಿದ್ದಾರೆ.

ಸರ್ಫರಾಜ್ ಬ್ಯಾಟಿಂಗ್ ಬಂದಾಗ ಮುಂಬೈ ತಂಡ 98 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಆಗ ಸರ್ಫರಾಜ್ ಖಾನ್ ಬ್ಯಾಟ್ ಮಾಡಲು ಬಂದರು. ಇವರು ತಮ್ಮ ನೈಜ್ಯ ಶೈಲಿಯಲ್ಲಿ ಬ್ಯಾಟ್ ಮಾಡಿದರು. ಕಳೆದ ಕೆಲವು ದಿನಗಳಲ್ಲಿ ಅವರು ತಮ್ಮ ಫಿಟ್ನೆಸ್ ಬಗ್ಗೆ ಕೆಲಸ ಮಾಡಿದ್ದು ಇವರ ಬ್ಯಾಟಿಂಗ್‌ನಲ್ಲಿ ಕಾಣಿಸಿಕೊಂಡಿತು. ಈಗ ಇವರು ತೂಕ ಇಳಿಸಿಕೊಂಡು ಫಿಟ್ ಆಗಿದ್ದಾರೆ. ಸುಮಾರು ಎರಡು ತಿಂಗಳ ಅವಧಿಯಲ್ಲಿ ಸರ್ಫರಾಜ್ ಸುಮಾರು 17 ಕೆಜಿ ತೂಕ ಇಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಸರ್ಫರಾಜ್ ಖಾನ್ ಅವರಿಗೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆ ಮಾಡಿರಲಿಲ್ಲ. ಇವರು ಬುಚಿ ಬಾಬು ಟೂರ್ನಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ತಮ್ಮನ್ನು ಆಯ್ಕೆ ಮಾಡುವಂತೆ ಬಿಸಿಸಿಐ ಅಯ್ಕೆ ಸಮಿತಿಗೆ ಒತ್ತಾಯ ಮಾಡಿದಂತೆ ಇದೆ. ಸರ್ಫರಾಜ್ ತಮ್ಮ ಫಿಟ್ನೆಸ್ ಬಗ್ಗೆ ಕೆಲಸ ಮಾಡಿದ್ದು ಈಗ ಇವರು ತಮ್ಮ ತೂಕವನ್ನು ಇಳಿಸಿಕೊಂಡಿದ್ದು, ಟೀಕಾಕಾರರಿಗೆ ಉತ್ತರಿಸಿದರು.

ಟೀಮ್ ಇಂಡಿಯಾ ಸದ್ಯ ಏಷ್ಯಾ ಕಪ್ ಟಿ20 ಟೂರ್ನಿಗೆ ತಯಾರಿ ನಡೆಸುತ್ತಿದೆ. ಈ ಟೂರ್ನಿಗಾಗಿ ಮಂಗಳವಾರ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ. ಈ ಸರಣಿ ಮುಗಿದ ಬಳಿಕ ಭಾರತ ತವರಿನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಸರಣಿಯನ್ನು ಆಡಲಿದೆ. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಭಾಗವಾಗಿರುವ ಈ ಸರಣಿಯಲ್ಲಿ ಉಭಯ ತಂಡಗಳು ಎರಡು ಪಂದ್ಯಗಳನ್ನು ಆಡಲಿವೆ. ಈ ಪಂದ್ಯದ ಮೇಲೆ ಸರ್ಫರಾಜ್ ಖಾನ್ ಚಿತ್ತ ನೆಟ್ಟಿದ್ದಾರೆ.