Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್‌ಗೆ ಕೆ.ಎಲ್ ರಾಹುಲ್‌ರನ್ನ ಆಯ್ಕೆ ಮಾಡಿ: ದೊಡ್ಡ ಗಣೇಶ್

Select KL Rahul On The Ground For The Australia Test: Dodda Ganesh

ಮುಂಬರುವ ಭಾರತ-ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್‌ ಸರಣಿಗೆ ಇದೇ ವಾರದಲ್ಲಿ ಟೀಮ್ ಇಂಡಿಯಾ ಆಟಗಾರರ ಆಯ್ಕೆ ನಡೆಯಲಿದೆ ಎನ್ನಲಾಗಿದೆ. ಇದರ ನಡುವೆ ಐಪಿಎಲ್‌ನಲ್ಲಿ ಭರ್ಜರಿ ಫಾರ್ಮ್‌ನಲ್ಲಿರುವ ಆರೆಂಜ್ ಕ್ಯಾಪ್ ಹೊಂದಿರುವ ಕೆ.ಎಲ್ ರಾಹುಲ್‌ರನ್ನು ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಗೆ ಆಯ್ಕೆ ಮಾಡಿ ಎಂದು ಕರ್ನಾಟಕ ಮೂಲದ ಟೀಮ್ ಇಂಡಿಯಾ ಮಾಜಿ ಆಟಗಾರ ದೊಡ್ಡ ಗಣೇಶ್ ಮನವಿ ಮಾಡಿದ್ದಾರೆ.

''ಭಾರತೀಯ ಆಯ್ಕೆದಾರರು @ klrahul11 ರನ್ನು ಪರಿಗಣಿಸುತ್ತಾರೆ ಎಂದು ಭಾವಿಸುತ್ತೇವೆ. ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿಗಾಗಿ ಮತ್ತು ಆರಂಭಿಕನಿಂದ ಮಧ್ಯಮ ಕ್ರಮಾಂಕದಲ್ಲಿ ಆಡುತ್ತಿರುವ ಸ್ಥಾನಕ್ಕೆ ಅಂತಹ ರೆಡ್ ಹಾಟ್ ಫಾರ್ಮ್‌ನಲ್ಲಿರುವ ಬ್ಯಾಟ್ಸ್‌ಮನ್‌ನನ್ನು ನೀವು ಬಿಡಬಾರದು. ಏನಪ್ಪಾ ಸುನಿಲ್ ಜೋಶಿ'' ಎಂದು ದೊಡ್ಡ ಗಣೇಶ್ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಮಾಜಿ ಆಟಗಾರ ಹಾಗೂ ಹಿರಿಯ ಆಟಗಾರರ ಆಯ್ಕೆ ಸಮಿತಿ ಅಧ್ಯಕ್ಷ ಸುನಿಲ್ ಜೋಶಿ ನೇತೃತ್ವದ ರಾಷ್ಟ್ರೀಯ ಆಯ್ಕೆ ಮಂಡಳಿಯು ಈ ವಾರ ಸಭೆ ಸೇರಲಿದ್ದು ನಿರೀಕ್ಷಿತ ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ತಂಡವನ್ನು ಆಯ್ಕೆ ಮಾಡಲು ಸಜ್ಜಾಗಿದೆ.

ನಾಲ್ಕು ಟೆಸ್ಟ್ ಸರಣಿಯ ಮೊದಲು ನಿಗದಿತ ಓವರ್‌ಗಳ ಕ್ರಿಕೆಟ್‌ನೊಂದಿಗೆ ಪ್ರವಾಸ ಪ್ರಾರಂಭವಾಗಲಿದೆ, ಈ ಹಂತವು ಮುಗಿದ ಬಳಿಕ ಅಡಿಲೇಡ್‌ನಲ್ಲಿ ಡಿಸೆಂಬರ್ 17-21 ರಂದು ಮೊದಲ ಟೆಸ್ಟ್ ನಡೆಯಲಿದೆ.

Story first published: Wednesday, October 21, 2020, 12:38 [IST]
Other articles published on Oct 21, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+