ಮುಂಬೈ, ಅ.19: ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ಕ್ರಿಕೆಟ್ ತಂಡವನ್ನು ಸಂದೀಪ್ ಪಾಟೀಲ್ ನೇತೃತ್ವದ ಆಯ್ಕೆ ಸಮಿತಿ ಸೋಮವಾರ ಪ್ರಕಟಿಸಿದೆ.
ರವೀಂದ್ರ ಜಡೇಜಾ ಟೆಸ್ಟ್ ತಂಡಕ್ಕೆ ಮರಳಿದ್ದರೆ, ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಅದರೆ, ಉತ್ತಮ ಲಯದಲ್ಲಿರುವ ಯುವರಾಜ್ ಸಿಂಗ್ ಆಯ್ಕೆ ಮಾಡಬೇಕಿತ್ತು ಎಂದು ಮಾಜಿ ಕ್ರಿಕೆಟರ್ ಸುನಿಲ್ ಗವಾಸ್ಕರ್ ಅಭಿಪ್ರಾಯಪಟ್ಟಿದ್ದಾರೆ. [ಟೆಸ್ಟ್ ತಂಡ ಪ್ರಕಟ: ಜಡೇಜ ಇನ್, ಹರ್ಭಜನ್ ಸಿಂಗ್ ಔಟ್]
ನಾಲ್ಕು ಟೆಸ್ಟ್ ಪಂದ್ಯಗಳ ಟೆಸ್ಟ್ ಸರಣಿಯ ಮೊದಲೆರಡು ಟೆಸ್ಟ್ ಗಳಿಗೆ 16 ಸದಸ್ಯರ ತಂಡವನ್ನು ಪ್ರಕಟಿಸಲಾಗಿದೆ.ಮೊಹಾಲಿ ಮತ್ತು ಬೆಂಗಳೂರಿನಲ್ಲಿ ನಡೆಯಲಿರುವ ಮೊದಲ ಎರಡು ಟೆಸ್ಟ್ ಪಂದ್ಯಗಳು ನಡೆಯಲಿದೆ.
ಮೊದಲ ಟೆಸ್ಟ್ : ನವೆಂಬರ್ 5-9 ಮೊಹಾಲಿಯಲ್ಲಿ (ಗುರುವಾರದಿಂದ ಸೋಮವಾರ)
ಎರಡನೇ ಟೆಸ್ಟ್: ನವೆಂಬರ್ 14-18 ಬೆಂಗಳೂರು (ಶನಿವಾರದಿಂದ ಬುಧವಾರ)

ರಣಜಿಯಲ್ಲಿ ಯುವರಾಜ್ ಸಿಂಗ್ ಅವರು ಉತ್ತಮ ಆಟ ಪ್ರದರ್ಶಿಸುತ್ತಿದ್ದಾರೆ. ಇತ್ತೀಚೆಗೆ ಗುಜರಾತ್ ವಿರುದ್ಧದ ರಣಜಿ ಪಂದ್ಯದಲ್ಲಿ ಪಂಜಾಬ್ ಪರ ಆಡಿ 187ರನ್ ಗಳಿಸಿದ್ದಾರೆ. ಹರ್ಭಜನ್ ಸಿಂಗ್ ಕೂಡಾ ಉತ್ತಮವಾಗಿ ಬೌಲಿಂಗ್ ಮಾಡುತ್ತಿದ್ದಾರೆ. ಉತ್ತಮ ಲಯದಲ್ಲಿರುವಾಗ ಇಂಥ 'ಕ್ಲಾಸ್' ಅಟಗಾರರಿಗೆ ಅವಕಾಶ ನೀಡಬೇಕಿತ್ತು ಎಂದು ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್ ಅವರು ಎನ್ ಡಿಟಿವಿಗೆ ತಿಳಿಸಿದ್ದಾರೆ. [ಗಾಂಧಿ-ಮಂಡೇಲಾ ಕ್ರಿಕೆಟ್ ಸರಣಿ ಫುಲ್ ಗೈಡ್]
ಅದರೆ, ಯುವರಾಜ್ ಸಿಂಗ್ ಅವರನ್ನು ಆಯ್ಕೆ ಮಾಡದಿರುವುದು ಅಚ್ಚರಿ ವಿಷಯವೇನಲ್ಲ. ಹರ್ಭಜನ್ ಸಿಂಗ್ ಅವರನ್ನು ತಂಡಕ್ಕೆ ಮರು ಆಯ್ಕೆ ಮಾಡಿದ ಸಂದರ್ಭದಲ್ಲೇ ಯುವರಾಜ್ ಗೂ ಒಂದು ಅವಕಾಶ ನೀಡುತ್ತಾರೆ ಎಂಬ ನಿರೀಕ್ಷೆ ಇತ್ತು. ಆಲ್ ರೌಂಡರ್ ಆಗಿರುವ ರವೀಂದ್ರ ಜಡೇಜ ಅವರು ಕೂಡಾ ಉತ್ತಮ ಲಯದಲ್ಲಿರುವುದರಿಂದ ಅವರನ್ನು ಆಯ್ಕೆ ಮಾಡಲಾಗಿದೆ ಎಂದರೆ, ಯುವರಾಜ್ ಸಿಂಗ್ ಅವರನ್ನು ಆಯ್ಕೆ ಮಾಡಬಹುದಿತ್ತು ಒಂದು ಕೊನೆ ಚಾನ್ಸ್ ನೀಡಬಹುದಿತ್ತು ಎಂದು ಗವಾಸ್ಕರ್ ಹೇಳಿದ್ದಾರೆ.
ತಂಡ ಇಂತಿದೆ: ವಿರಾಟ್ ಕೊಹ್ಲಿ (ನಾಯಕ), ಮುರಳಿ ವಿಜಯ್, ಕೆಎಲ್ ರಾಹುಲ್, ಅಜಿಂಕ್ಯ ರಹಾನೆ, ರೋಹಿತ್ ಶರ್ಮ, ಚೇತೇಶ್ವರ್ ಪೂಜಾರ, ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ರವೀಂದ್ರ ಜಡೇಜ, ಆರ್ ಅಶ್ವಿನ್, ಅಮಿತ್ ಮಿಶ್ರಾ, ವರುಣ್ ಅರೋನ್, ಸ್ಟುವರ್ಟ್ ಬಿನ್ನಿ, ಭುವನೇಶ್ವರ್ ಕುಮಾರ್, ಇಶಾಂತ್ ಶರ್ಮ, ಉಮೇಶ್ ಯಾದವ್.
ಶ್ರೀಲಂಕಾದಲ್ಲಿ ಐತಿಹಾಸಿಕ ಗೆಲುವಿನ ನಂತರ ವಿರಾಟ್ ಕೊಹ್ಲಿ ಅವರಿಗೆ ತವರು ನೆಲದಲ್ಲಿ ಇದು ಮೊದಲ ಬಾರಿಗೆ ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಕಳೆದ ಡಿಸೆಂಬರ್ ನಲ್ಲಿ ಎಂಎಸ್ ಧೋನಿ ಅವರು ಟೆಸ್ಟ್ ನಾಯಕತ್ವಕ್ಕೆ ಗುಡ್ ಬೈ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.