Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಶಾಹಿದ್ ಅಫ್ರಿದಿ ದಾಖಲೆ ಸರಿಗಟ್ಟಿದ ಶದಬ್ ಖಾನ್: ಪಾಕ್ ಪರ ವಿಶೇಷ ದಾಖಲೆಗೆ ಒಂದೇ ವಿಕೆಟ್

Shadab Khan equals Shahid Afridis record of leading wicket-taker for Pakistan in T20Is

ಪಾಕಿಸ್ತಾನ ತಂಡದ ಸ್ಪಿನ್ ಆಲ್‌ರೌಂಡರ್ ಶದಬ್ ಖಾನ್ ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಪಾಕಿಸ್ತಾನ ತಂಡದ ಪರವಾಗಿ ಅತೀ ಹೆಚ್ಚು ವಿಕೆಟ್ ಪಡೆದ ದಾಖಲೆಯನ್ನು ಶದಬ್ ಖಾನ್ ಭಾನುವಾರ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಸರಿಗಟ್ಟಿದ್ದಾರೆ.

ಪಾಕಿಸ್ತಾನದ ದಿಗ್ಗಜ ಆಟಗಾರ ಶಾಹಿದ್ ಅಫ್ರಿದಿ 98 ಪಂದ್ಯಗಳಲ್ಲಿ 6.61 ಎಕಾನಮಿ ದರದಲ್ಲಿ 97 ವಿಕೆಟ್ ಪಡೆದುಕೊಂಡಿದ್ದ ಶಾಹಿದ್ ಅಫ್ರಿದಿ ದಾಖಲೆಯನ್ನು ಶದಬ್ ಸರಿಗಟ್ಟಿದಾರೆ. ಶದಬ್ ಪ್ರಸ್ತುತ 82 ಪಂದ್ಯಗಳಿಂದ 7.04 ರ ಎಕಾನಮಿಯಲ್ಲಿ 97 ವಿಕೆಟ್‌ಗಳನ್ನು ಪಡೆದುಕೊಂಡಿದ್ದಾರೆ. ಇನ್ನು ಒಂದು ವಿಕೆಟ್ ಪಡೆದರೆ ಪಾಕ್ ಪರ ಚುಟುಕು ಮಾದರಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಳ್ಳಲಿದ್ದಾರೆ ಶದಬ್ ಖಾನ್.

ಭಾನುವಾರ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಶದಬ್ ಖಾನ್ 4 ಓವರ್‌ಗಳಲ್ಲಿ 30 ರನ್ ನೀಡಿ 2 ವಿಕೆಟ್ ಪಡೆಯುವ ಮೂಲಕ ಈ ಸಾಧನೆಯನ್ನು ಮಾಡಿದ್ದಾರೆ. ಈ ಸಾಧನೆಯೊಂದಿಗೆ ಬಾಂಗ್ಲಾದೇಶ ದವಿರುದ್ಧ ಪಾಕಿಸ್ತಾನ ನಿರ್ಣಾಯಕ ಐದು ವಿಕೆಟ್‌ಗಳ ಅಂತರದ ಜಯವನ್ನು ಸಾಧಿಸಲು ಮಹತ್ತರ ಪಾತ್ರವಹಿಸಿದರು. ಶದಬ್ ಖಾನ್ ಅವರ ಈ ಅದ್ಭುತ ಪ್ರದರ್ಶನದ ಹಿನ್ನೆಲೆಯಲ್ಲಿ ಪಾಕಿಸ್ತಾನ ತಂಡ ಮೆಗಾ ಈವೆಂಟ್‌ನಲ್ಲಿ ಸೆಮಿ ಫೈನಲ್‌ಗೆ ಪ್ರವೇಶ ಪಡೆಯುವಲ್ಲಿ ಯಶಸ್ವಿಯಾಗಿದೆ.

ಪಾಕಿಸ್ತಾನ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಬಾಂಗ್ಲಾದೇಶ, ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 127 ರನ್ ಗಳಿಸಿ, ಎದುರಾಳಿ ಪಾಕಿಸ್ತಾನಕ್ಕೆ 128 ರನ್‌ಗಳ ಸಾಧಾರಣ ಮೊತ್ತದ ಗುರಿ ನೀಡಿತ್ತು. ಬಾಂಗ್ಲಾದೇಶ ನೀಡಿದ 128 ರನ್‌ಗಳ ಸಾಧಾರಣ ಮೊತ್ತದ ಗುರಿ ಬೆನ್ನತ್ತಿದ ಪಾಕಿಸ್ತಾನ 18.1 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 128 ರನ್ ಗಳಿಸಿ ಗೆಲುವಿನ ನಗೆ ಬೀರಿತು.

128 ರನ್‌ಗಳ ಗುರಿ ಬೆನ್ನತ್ತಿದ ಪಾಕಿಸ್ತಾನಕ್ಕೆ ಮೊಹಮ್ಮದ್ ರಿಜ್ವಾನ್ (32) ಮತ್ತು ಬಾಬರ್ ಅಜಂ(25) ಉತ್ತಮ ಅಡಿಪಾಯ ಒದಗಿಸಿದರು. ಇವರಿಬ್ಬರು ಮೊದಲ ವಿಕೆಟ್‌ಗೆ ಜೊತೆಯಾಟಕ್ಕೆ 10.3 ಓವರ್‌ಗಳಲ್ಲಿ 57 ರನ್ ಗಳಿಸಿದರು. ನಾಯಕ ಬಾಬರ್ ಅಜಂ ಔಟಾದ ನಂತರ ಕ್ರೀಸ್‌ಗೆ ಬಂದ ನವಾಜ್ ಕೇವಲ 4 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಅನಂತರ ಮೊಹಮ್ಮದ್ ಹ್ಯಾರಿಸ್ ಕೇವಲ 12 ಎಸೆತಗಳಲ್ಲಿ 31 ರನ್ ಗಳಿಸುವ ಮೂಲಕ ಪಾಕಿಸ್ತಾನವನ್ನು 5 ವಿಕೆಟ್‌ಗಳಿಂದ ಬಾಂಗ್ಲಾದೇಶವನ್ನು ಸೋಲಿಸಲು ಮತ್ತು ನಾಲ್ಕನೇ ತಂಡವಾಗಿ ಸೆಮಿಫೈನಲ್‌ನಲ್ಲಿ ಸ್ಥಾನ ಗಳಿಸಲು ನೆರವಾದರು.

Story first published: Sunday, November 6, 2022, 21:52 [IST]
Other articles published on Nov 6, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+