Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ICC Women's T20I rankings: ಮತ್ತೆ ಅಗ್ರಸ್ಥಾನಕ್ಕೇರಿದ ಶೆಫಾಲಿ ವರ್ಮಾ

Shafali Verma climbs top spot in ICC Womens T20I rankings

ನವದೆಹಲಿ: ದಕ್ಷಿಣ ಆಫ್ರಿಕಾ ವನಿತೆಯರ ವಿರುದ್ಧದ ಅಂತಿಮ ಟಿ20ಐ ಪಂದ್ಯದಲ್ಲಿ 30 ಎಸೆತಗಳಲ್ಲಿ 60 ರನ್ ಚಚ್ಚಿದ್ದ ಭಾರತದ ಯುವ ಆಟಗಾರ್ತಿ ಶೆಫಾಲಿ ವರ್ಮಾ ಮಹಿಳಾ ಟಿ20ಐ ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ರ್‍ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೇರಿದ್ದಾರೆ.

ಈ ಮೊದಲು ಶೆಫಾಲಿ ವರ್ಮಾ ಟಿ20ಐ ರ್‍ಯಾಂಕಿಂಗ್‌ನಲ್ಲಿ ನಂ.1 ಸ್ಥಾನಕ್ಕೆ ಏರಿದ್ದವರು ಕೆಳಗಿಳಿದಿದ್ದರು. ಮತ್ತೆ ಕಳೆದ ವಾರ ವರ್ಮಾ ನಂ.1 ಸ್ಥಾನ ತನ್ನದಾಗಿಸಿಕೊಂಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್‌ ಪಂದ್ಯದ ಪ್ರದರ್ಶನಕ್ಕಾಗಿ ಶೆಫಾಲಿ 26 ಪಾಯಿಂಟ್ಸ್‌ ಕಲೆ ಹಾಕಿದ್ದರು. ತಂಡಗಳ ಟಿ20ಐ ರ್‍ಯಾಂಕಿಂಗ್‌ನಲ್ಲಿ ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದ್ದು, ಭಾರತ 4ನೇ ಸ್ಥಾನದಲ್ಲಿದೆ.

ಸದ್ಯ ಟಿ20ಐ ಬ್ಯಾಟಿಂಗ್‌ ರ್‍ಯಾಂಕಿಂಗ್‌ನಲ್ಲಿ ಅಗ್ರ ಸ್ಥಾನದಲ್ಲಿರುವ ಶೆಫಾಲಿ 776 ರೇಟಿಂಗ್ ಪಾಯಿಂಟ್ಸ್ ಕಲೆ ಹಾಕಿದ್ದಾರೆ. ದ್ವಿತೀಯ ಸ್ಥಾನದಲ್ಲಿರುವ ಆಸ್ಟ್ರೇಲಿಯಾದ ಬೆತ್ ಮೂನಿ 741 ಪಾಯಿಂಟ್ಸ್‌ ಗಳಿಸಿದ್ದಾರೆ. 3ನೇ ಸ್ಥಾನದಲ್ಲಿ ನ್ಯೂಜಿಲೆಂಡ್‌ನ ಸೋಫಿ ಡಿವೈನ್, 4ನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ಮೆಗ್ ಲ್ಯಾನಿಂಗ್, 5ನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ಅಲಿಸಾ ಹೀಲಿ ಇದ್ದಾರೆ.

ಬ್ಯಾಟಿಂಗ್‌ ರ್‍ಯಾಂಕಿಂಗ್‌ನಲ್ಲಿ ಭಾರತದ ಪ್ರತಿಭಾನ್ವಿತ ಆಟಗಾರ್ತಿ ಸ್ಮೃತಿ ಮಂಧಾನ 6ನೇ ಶ್ರೇಯಾಂಕದಲ್ಲಿದ್ದಾರೆ. 9ನೇ ಸ್ಥಾನದಲ್ಲಿ ಜೆಮಿಮಾ ರೋಡ್ರಿಗಸ್ ಇದ್ದಾರೆ. ಟಿ20ಐ ಬೌಲಿಂಗ್‌ ರ್‍ಯಾಂಕಿಂಗ್‌ನಲ್ಲಿ ಇಂಗ್ಲೆಂಡ್‌ನ ಸೋಫಿ ಎಕ್ಲೆಸ್ಟೋನ್, ದಕ್ಷಿಣ ಆಫ್ರಿಕಾದ ಶಬ್ನಿಮ್ ಇಸ್ಮಾಯಿಲ್ ಅಗ್ರ ಸ್ಥಾನದಲ್ಲಿದ್ದಾರೆ. ಆಲ್ ರೌಂಡರ್‌ಗಳಲ್ಲಿ ನ್ಯೂಜಿಲೆಂಡ್‌ನ ಸೋಫಿ ಡಿವೈನ್ ಮೊದಲ ಸ್ಥಾನದಲ್ಲಿದ್ದಾರೆ.

Story first published: Tuesday, March 30, 2021, 17:40 [IST]
Other articles published on Mar 30, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+