For Quick Alerts
ALLOW NOTIFICATIONS  
For Daily Alerts
 

Rohit Sharma: ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್ ಕಾಡಲಿರುವ ವೇಗದ ಬೌಲರ್ ಇವರೇ..

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯವು ಫೆಬ್ರವರಿ 23 ರಂದು ದುಬೈನಲ್ಲಿ ನಡೆಯಲಿದೆ. ಭಾರತ ತಂಡವು ಯಾವಾಗಲೂ ಐಸಿಸಿ ಟೂರ್ನಿಗಳಲ್ಲಿ ಪಾಕಿಸ್ತಾನದ ಮೇಲೆ ಪ್ರಾಬಲ್ಯ ಸಾಧಿಸಿದೆ. ವಿಶ್ವಕಪ್ (ಟಿ20) ಇತಿಹಾಸದಲ್ಲಿ ಒಮ್ಮೆ ಮಾತ್ರ ತನ್ನ ಸಾಂಪ್ರದಾಯಿಕ ಎದುರಾಳಿ ವಿರುದ್ಧ ಸೋಲನ್ನು ಎದುರಿಸಿದೆ.

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ವಿರುದ್ಧ ಪಾಕಿಸ್ತಾನ ತಂಡವು ಮೇಲುಗೈ ಸಾಧಿಸಿದೆ. ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲಿ ಇದುವರೆಗೆ ಭಾರತ ಮತ್ತು ಪಾಕಿಸ್ತಾನ ನಡುವೆ 5 ಪಂದ್ಯಗಳು ನಡೆದಿದ್ದು, ಅದರಲ್ಲಿ ಪಾಕಿಸ್ತಾನ 3 ಪಂದ್ಯಗಳನ್ನು ಗೆದ್ದಿದೆ. ಅದೇ ವೇಳೆ ಭಾರತ 2 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಈ ಬಾರಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಭಾರೀ ಕುತೂಹಲ ಮೂಡಿಸಿದೆ.

Shaheen Afridi can challenge Rohit Sharma in the Champions Trophy

ಪಾಕಿಸ್ತಾನ ತಂಡ ಚಾಂಪಿಯನ್ಸ್ ಟ್ರೋಫಿಗೆ ತನ್ನ ತಂಡವನ್ನು ಪ್ರಕಟಿಸಿದೆ. ಭಾರತ ವಿರುದ್ಧ ಪಂದ್ಯಕ್ಕೂ ಮುನ್ನ ಪಾಕಿಸ್ತಾನ ಕ್ರಿಕೆಟ್ ತಂಡದ ಬೌಲರ್‌ಗಳ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದೆ. ಶಾಹೀನ್ ಶಾ ಆಫ್ರಿದಿಗಿಂತಲೂ ಅಪಾಯಕಾರಿ ಪಾಕಿಸ್ತಾನದ ವೇಗದ ಬೌಲರ್ ಇದ್ದಾರೆ. ಸುಮಾರು 8 ತಿಂಗಳ ನಂತರ ಭಾರತ ಮತ್ತು ಪಾಕಿಸ್ತಾನ ತಂಡಗಳು ಕ್ರಿಕೆಟ್ ಮೈದಾನದಲ್ಲಿ ಮುಖಾಮುಖಿಯಾಗಲಿವೆ.ಇದಕ್ಕೂ ಮೊದಲು, ಜೂನ್ 9, 2024 ರಂದು ಭಾರತ ಮತ್ತು ಪಾಕಿಸ್ತಾನ ತಂಡಗಳು ಟಿ20 ವಿಶ್ವಕಪ್ 2024 ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಟೀಮ್ ಇಂಡಿಯಾ ಪಾಕಿಸ್ತಾನವನ್ನು 6 ರನ್‌ಗಳಿಂದ ಸೋಲಿಸಿತ್ತು. ಅಂತಿಮವಾಗಿ ಟಿ20 ವಿಶ್ವಕಪ್‌ನಲ್ಲಿ ಭಾರತ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು.

ಈ ಬಾರಿ, ಟೀಮ್ ಇಂಡಿಯಾ ವಿರುದ್ಧ 2024ರ ಟಿ20 ವಿಶ್ವಕಪ್‌ ಸೋಲಿನ ಸೇಡು ತೀರಿಸಿಕೊಳ್ಳುವ ಉತ್ಸಾಹದಲ್ಲಿ ಪಾಕಿಸ್ತಾನ ತಂಡವಿದೆ. ಫೆಬ್ರವರಿ 23 ರಂದು ನಡೆಯಲಿರುವ ಭಾರತದ ವಿರುದ್ಧ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಪಾಕಿಸ್ತಾನದ ವೇಗದ ಬೌಲರ್ ಮಿಂಚಬಹುದು. ಪಾಕಿಸ್ತಾನದ ಈ ವೇಗದ ಬೌಲರ್ ಬೇರೆ ಯಾರೂ ಅಲ್ಲ, ಹ್ಯಾರಿಸ್ ರೌಫ್. ಶಾಹೀನ್ ಅಫ್ರಿದಿಗಿಂತ ಹ್ಯಾರಿಸ್ ರೌಫ್ ಅಪಾಯಕಾರಿ ವೇಗದ ಬೌಲರ್. ಹ್ಯಾರಿಸ್ ರೌಫ್ ಆರಂಭಿಕ ಮತ್ತು ಕೊನೆಯ ಓವರ್‌ಗಳಲ್ಲಿ ಅಪಾಯಕಾರಿ ಬೌಲಿಂಗ್‌ಗೆ ಹೆಸರುವಾಸಿಯಾಗಿದ್ದಾರೆ.

ರೋಹಿತ್ ಶರ್ಮಾ ಅವರನ್ನು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಹ್ಯಾರಿಸ್ ರೌಫ್ ಎರಡು ಔಟ್ ಮಾಡಿದ್ದಾರೆ. ಆದರೆ, ವಿರಾಟ್ ಕೊಹ್ಲಿಯನ್ನು ಒಮ್ಮೆಯೂ ಔಟ್ ಮಾಡಲು ಹ್ಯಾರಿಸ್ ರೌಫ್‌ಗೆ ಸಾಧ್ಯವಾಗಿಲ್ಲ. ಇದೀಗ ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್ ಶರ್ಮಾ ಮತ್ತು ಹ್ಯಾರಿಸ್ ರೌಫ್ ಫೈಟ್ ನೋಡಲು ಕ್ರಿಕೆಟ್ ಅಭಿಮಾನಿಗಳು ಕಾಯುತ್ತಿದ್ದಾರೆ.

ಉಭಯ ತಂಡಗಳು

ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಯಶಸ್ವಿ ಜೈಸ್ವಾಲ್, ರಿಷಭ್. ಪಂತ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್.

ಪಾಕಿಸ್ತಾನ: ಮೊಹಮ್ಮದ್ ರಿಜ್ವಾನ್ (ನಾಯಕ), ಬಾಬರ್ ಅಜಮ್, ಫಖರ್ ಜಮಾನ್, ಕಮ್ರಾನ್ ಗುಲಾಮ್, ಸೌದ್ ಶಕೀಲ್, ಖುಶ್ದಿಲ್ ಶಾ, ಸಲ್ಮಾನ್ ಅಲಿ ಆಘಾ (ಉಪನಾಯಕ), ತಯ್ಯಬ್ ತಾಹಿರ್, ಫಹೀಮ್ ಅಶ್ರಫ್, ಉಸ್ಮಾನ್ ಖಾನ್, ಅಬ್ರಾರ್ ಅಹ್ಮದ್, ಹ್ಯಾರಿಸ್ ರೌಫ್, ಮೊಹಮ್ಮದ್ ಹಸನ್, ನಸೀಮ್ ಶಾ, ಶಾಹೀನ್ ಶಾ ಅಫ್ರಿದಿ.

Story first published: Sunday, February 2, 2025, 23:40 [IST]
Other articles published on Feb 2, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+