ಟಿ20 ವಿಶ್ವಕಪ್‌ನಲ್ಲಿ ಭಾರತಕ್ಕೆ ತಲೆನೋವಾಗಿದ್ದ ಅಫ್ರಿದಿ ಏಷ್ಯಾಕಪ್ ಪಂದ್ಯದಿಂದ ಔಟ್? ಬಾಬರ್ ಹೇಳಿದ್ದೇನು?

ಬಹು ನಿರೀಕ್ಷಿತ ಏಷ್ಯಾಕಪ್ ಟೂರ್ನಿ ಇದೇ ತಿಂಗಳ 27ರಂದು ಆರಂಭವಾಗಲಿದ್ದು, ಸೆಪ್ಟೆಂಬರ್ 11ರಂದು ಮುಕ್ತಾಯವಾಗಲಿದೆ. ಇನ್ನು ಈ ಬಾರಿಯ ಏಷ್ಯಾಕಪ್ ಟೂರ್ನಿ ಯುಎಇ ನೆಲದಲ್ಲಿ ನಡೆಯಲಿದ್ದು, ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಗೆಲ್ಲುವ ತಂಡಗಳೆನಿಸಿಕೊಂಡಿವೆ. ಇನ್ನು ಕಳೆದ ಬಾರಿಯ ಏಷ್ಯಾಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಭಾರತ ತಂಡ ಈ ಬಾರಿಯೂ ಸಹ ಟ್ರೋಫಿಯನ್ನು ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮುವತ್ತ ಕಣ್ಣಿಟ್ಟಿದ್ದರೆ, ಅತ್ತ ಕಳೆದ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾವನ್ನು ಸೋಲಿಸಿದ್ದ ಪಾಕಿಸ್ತಾನ ತಂಡ ಈ ಏಷ್ಯಾಕಪ್ ಟೂರ್ನಿಯಲ್ಲಿಯೂ ಭಾರತವನ್ನು ಮಣಿಸಿ ಚಾಂಪಿಯನ್ ಆಗುವತ್ತ ಚಿತ್ತ ನೆಟ್ಟಿದೆ.
ಇನ್ನು ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಬೋರ್ಡ್‌ಗಳೆರಡು ಈಗಾಗಲೇ ಈ ಬಾರಿಯ ಏಷ್ಯಾಕಪ್ ಟೂರ್ನಿಗೆ ತಮ್ಮ ತಂಡಗಳನ್ನು ಪ್ರಕಟಿಸಿದ್ದು, ಪ್ರಕಟವಾಗಿರುವ ಎರಡೂ ತಂಡಗಳ ನಡುವೆ ಕ್ರಿಕೆಟ್ ಪ್ರೇಮಿಗಳು ಹೋಲಿಕೆ ಆರಂಭಿಸಿದ್ದು ಯಾವ ತಂಡ ಬಲಿಷ್ಠವಾಗಿದೆ ಎಂಬುದನ್ನು ಊಹಿಸತೊಡಗಿದ್ದಾರೆ. ಈ ಬಾರಿಯ ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯ ಆಗಸ್ಟ್ 28ರಂದು ನಡೆಯಲಿದ್ದು, ಈ ಪಂದ್ಯಕ್ಕೆ ಪಾಕಿಸ್ತಾನದ ಮಾರಕ ವೇಗಿ ಶಾಹಿನ್ ಅಫ್ರಿದಿ ಅಲಭ್ಯರಾಗುವ ಸಾಧ್ಯತೆಗಳಿವೆ ಎಂಬ ಸುದ್ದಿ ಸದ್ಯ ಹರಿದಾಡುತ್ತಿದೆ.
ಹೌದು, ಶಾಹಿನ್ ಅಫ್ರಿದಿ ಕಳೆದ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಭಾರತ ಮತ್ತು ಪಾಕ್ ನಡುವಿನ ಪಂದ್ಯದಲ್ಲಿ ಟೀಮ್ ಇಂಡಿಯಾದ ಕೆಎಲ್ ರಾಹುಲ್, ರೋಹಿತ್ ಶರ್ಮಾ ಹಾಗೂ ನಾಯಕ ವಿರಾಟ್ ಕೊಹ್ಲಿ ಈ ಮೂವರ ವಿಕೆಟ್‌ನ್ನು ಪಡೆದು ತಂಡದ ಅಗ್ರ ಕ್ರಮಾಂಕವನ್ನು ಕೆಡವಿ ತಲೆನೋವಾಗಿ ಪರಿಣಮಿಸಿದ್ದು ಟೀಮ್ ಇಂಡಿಯಾದ ಸೋಲಿಗೆ ಕಾರಣವಾದ ಅಂಶಗಳಲ್ಲಿ ಒಂದು ಎನ್ನಬಹುದು. ಈ ರೀತಿಯ ಬಲಿಷ್ಠ ಆಟಗಾರ ಸದ್ಯ ಗಾಯದ ಸಮಸ್ಯೆಗೊಳಗಾಗಿದ್ದು ಟೀಮ್ ಇಂಡಿಯಾ ವಿರುದ್ಧದ ಏಷ್ಯಾಕಪ್ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂಬ ಸುದ್ದಿ ಹರಿದಾಡತೊಡಗಿದೆ. ಅದರಲ್ಲಿಯೂ ಬಾಬರ್ ಅಜಮ್ ನೀಡಿದ ಹೇಳಿಕೆ ಸದ್ಯ ಈ ಸುದ್ದಿಗಳಿಗೆ ಪುಷ್ಟಿ ಸಿಕ್ಕಂತಾಗಿದೆ.

ಬಾಬರ್ ಹೇಳಿದ್ದಿಷ್ಟು
ಶಾಹಿನ್ ಅಫ್ರಿದಿ ಗಾಯದ ಸಮಸ್ಯೆಯ ಕುರಿತು ನೆದರ್ಲೆಂಡ್ಸ್ ವಿರುದ್ಧದ ಏಕದಿನ ಸರಣಿಗೂ ಮುನ್ನ ನಡೆದ ಸಂದರ್ಶನದಲ್ಲಿ ಮಾತನಾಡಿರುವ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಶಾಹಿನ್ ಆಫ್ರಿದಿ ಚಿಕಿತ್ಸೆಗಾಗಿ ವೈದ್ಯರನ್ನು ಕರೆತರುವುದಕ್ಕೆ ಮುಂದಾಗಿರುವುದಾಗಿ ತಿಳಿಸಿದ್ದಾರೆ. ಇನ್ನೂ ಮುಂದುವರೆದು ಮಾತನಾಡಿದ ಬಾಬರ್ ಅಜಮ್ ಬಾಬರ್ ಅಜಮ್‌ಗೆ ವಿಶ್ರಾಂತಿಯ ಅಗತ್ಯವಿದ್ದು, ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಇನ್ನೂ ಸಮಯ ಬೇಕಿದೆ, ಆತನ ಫಿಟ್‌ನೆಸ್ ಮತ್ತು ಆರೋಗ್ಯ ಇನ್ನೂ ದೀರ್ಘಕಾಲ ತಂಡಕ್ಕೆ ಬೇಕಾಗಿದ್ದು ನೆದರ್ಲೆಂಡ್ಸ್ ವಿರುದ್ಧದ ಕನಿಷ್ಟ ಎರಡು ಏಕದಿನ ಸರಣಿಯಲ್ಲಾದರೂ ವಿಶ್ರಾಂತಿ ನೀಡಲಿದ್ದೇವೆ ಹಾಗೂ ಈ ಮೂಲಕ ಅವರು ಏಷ್ಯಾಕಪ್‌ಗೂ ಮುನ್ನ ಸಂಪೂರ್ಣವಾಗಿ ಚೇತರಿಸಿಕೊಳ್ಳಬಹುದಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಹೀಗೆ ಬಾಬರ್ ಅಜಮ್ ನೀಡಿರುವ ಹೇಳಿಕೆಯಿಂದ ಶಾಹಿನ್ ಅಫ್ರಿದಿ ಸಂಪೂರ್ಣ ಫಿಟ್ ಆಗಿಲ್ಲ ಎಂಬುದು ತಿಳಿದುಬಂದಿದ್ದು ಗಾಯದ ತೀವ್ರತೆ ಏಷ್ಯಾಕಪ್‌ವರೆಗೂ ಮುಂದುವರೆದು ಚೇತರಿಸಿಕೊಳ್ಳದಿದ್ದರೆ ಅಫ್ರಿದಿ ಟೀಂ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವುದು ಅನುಮಾನ ಎನ್ನಲಾಗುತ್ತಿದೆ.

ಏಷ್ಯಾಕಪ್‌ಗೆ ಪ್ರಕಟವಾಗಿರುವ ಪಾಕ್ ತಂಡ
ಬಾಬರ್ ಅಜಮ್ ( ನಾಯಕ ) ಶಾದಾಬ್ ಖಾನ್, ಆಸಿಫ್ ಅಲಿ, ಫಖರ್ ಜಮಾನ್, ಹೈದರ್ ಅಲಿ, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್ ( ವಿಕೆಟ್ ಕೀಪರ್ ), ಮೊಹಮ್ಮದ್ ವಾಸಿಂ ಜೂನಿಯರ್, ನಸೀಮ್ ಶಾ, ಶಾಹೀನ್ ಶಾ ಅಫ್ರಿದಿ, ಶಹನವಾಜ್ ದಹಾನಿ, ಉಸ್ಮಾನ್ ದಹಾನಿ.

ಏಷ್ಯಾಕಪ್‌ಗೆ ಪ್ರಕಟವಾದ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ ( ವಿಕೆಟ್ ಕೀಪರ್ ), ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಶ್ದೀಪ್ ಸಿಂಗ್, ಅವೇಶ್ ಖಾನ್.
ಹೆಚ್ಚುವರಿ ಆಟಗಾರರು: ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ದೀಪಕ್ ಚಹಾರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications