PAK vs BAN: ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್‌ಗೆ ಪಾಕಿಸ್ತಾನ ವೇಗಿ ಅಲಭ್ಯ; ಕಾರಣವೇನು?
ತವರಿನಲ್ಲಿ ಪಾಕಿಸ್ತಾನ ತಂಡ ಬಾಂಗ್ಲಾದೇಶ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನು ಹೀನಾಯವಾಗಿ ಸೋತಿತ್ತು. ಇಂದಿನಿಂದ (ಆಗಸ್ಟ್ 30) ಆರಂಭವಾಗಲಿರುವ ಎರಡನೇ ಟೆಸ್ಟ್ ಪಂದ್ಯ ಪಾಕಿಸ್ತಾನಕ್ಕೆ ಮಾಡು ಇಲ್ಲವೇ ಮಡಿ ಎಂಬಂತಾಗಿದ್ದು, 12 ಆಟಗಾರರ ತಂಡವನ್ನು ಆಯ್ಕೆ ಮಾಡಿದೆ.
ಎರಡನೇ ಟೆಸ್ಟ್ ಪಂದ್ಯಕ್ಕೆ ಪಾಕಿಸ್ತಾನ ಆಯ್ಕೆ ಮಾಡಿರುವ ತನ್ನ 12 ಆಟಗಾರರ ಪೈಕಿ ಎಡಗೈ ಸ್ಟಾರ್ ವೇಗದ ಬೌಲರ್ ಶಾಹೀನ್ ಅಫ್ರಿದಿ ಅವರನ್ನು ಕೈಬಿಡಲಾಗಿದೆ. ಮೊಣಕಾಲಿನ ಶಸ್ತ್ರಚಿಕಿತ್ಸೆಯಿಂದಾಗಿ ಜುಲೈ 2022 ರಿಂದ ಶಾಹೀನ್ ಕೇವಲ ಆರು ಟೆಸ್ಟ್‌ಗಳನ್ನು ಆಡಿದ್ದಾರೆ.

ಸರಣಿಯ ಆರಂಭಿಕ ಪಂದ್ಯದಲ್ಲಿ ಹೀನಾಯ ಸೋಲಿನ ನಂತರ ಟೀಕೆಗೆ ಒಳಗಾಗಿದ್ದ ಪಾಕಿಸ್ತಾನ ತಂಡ, ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್‌ಗೆ ಶಾಹೀನ್ ಆಫ್ರಿದಿಯನ್ನು ತಂಡದಿಂದ ಕೈಬಿಟ್ಟಿದೆ. ಅವರನ್ನು ಹೊರಗಿಟ್ಟಿರುವ ಬಗ್ಗೆ ಮುಖ್ಯ ಕೋಚ್ ಜೇಸನ್ ಗಿಲ್ಲೆಸ್ಪಿ ಸ್ಪಷ್ಟಪಡಿಸಿದ್ದಾರೆ.
ಪಾಕ್ ಬದಲಾವಣೆ
ಎರಡನೇ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ ತಂಡವು ಬಾಂಗ್ಲಾ ಕಟ್ಟಿ ಹಾಕಲು ಹೊಸ ತಂತ್ರದೊಂದಿಗೆ ಕಣಕ್ಕೀಳಿಯಲಿದೆ. ಇದಕ್ಕಾಗಿ ಇಬ್ಬರು ಹೊಸ ಆಟಗಾರರಿಗೆ ಅವಕಾಶ ನೀಡಲಾಗಿದೆ.
ಕಳೆದ ಪಂದ್ಯದಲ್ಲಿ ನಾಲ್ವರು ವೇಗದ ಬೌಲರ್‌ಗಳನ್ನು ಕಣಕ್ಕಿಳಿಸಿರುವ ಪಾಕಿಸ್ತಾನ ತಂಡದ ಸಂಯೋಜನೆಯನ್ನು ಮಾಜಿ ಆಟಗಾರರೂ ತೀವ್ರವಾಗಿ ಟೀಕಿಸಿದ್ದರು. ಇಬ್ಬರು ಸ್ಪಿನ್ನರ್‌ಗಳೊಂದಿಗೆ ಆಡುವುದು ಉತ್ತಮ ಆಯ್ಕೆಯಾಗಿದೆ ಎಂದು ಪಾಕ್ ಮಾಜಿ ಆಟಗಾರರು ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಹೀಗಾಗಿ ಅಬ್ರಾರ್ ಅಹ್ಮದ್ ಮತ್ತು ಕಮ್ರಾನ್ ಗುಲಾಮ್ ಅವರನ್ನು ಎರಡನೇ ಟೆಸ್ಟ್ ಪಂದ್ಯಕ್ಕಾಗಿ ಪ್ಲೇಯಿಂಗ್-11 ರಲ್ಲಿ ಸ್ಥಾನ ನೀಡಲಾಗಿದೆ. ಅಬ್ರಾರ್ ಅಹ್ಮದ್ ಅದ್ಭುತ ಸ್ಪಿನ್ ಬೌಲರ್ ಆಗಿದ್ದು, 6 ಟೆಸ್ಟ್ ಪಂದ್ಯಗಳಲ್ಲಿ 38 ವಿಕೆಟ್ ಪಡೆದಿದ್ದಾರೆ.
ಮುಖ್ಯ ಕೋಚ್ ಹೇಳಿದ್ದೇನು?
ಶಾಹೀನ್ ಅಫ್ರಿದಿಯಯನ್ನು ತಂಡದಿಂದ ಕೈ ಬಿಟ್ಟಿರುವ ಬಗ್ಗೆ ಮುಖ್ಯ ಕೋಚ್ ಜೇಸನ್ ಗಿಲ್ಲೆಸ್ಪಿ ಮಾಹಿತಿ ನೀಡಿದ್ದಾರೆ. ಶಾಹೀನ್ ಅವರ ಪರಿಸ್ಥಿತಿಯ ಬಗ್ಗೆ ಚೆನ್ನಾಗಿ ತಿಳಿದಿದೆ. ಈ ವಿರಾಮವು ಅವರ ಕುಟುಂಬದೊಂದಿಗೆ ಸಮಯ ಕಳೆಯಲು ಸೂಕ್ತವಾಗಿದೆ. ಇತ್ತೀಚೆಗೆ ಅವರು ತಂದೆಯಾಗಿದ್ದಾರೆ.
ನಾವು ಅವರೊಂದಿಗೆ ಮಾತನಾಡಿದ್ದೇವೆ. ಈ ಪಂದ್ಯಕ್ಕೆ ನಮಗೆ ಉತ್ತಮ ತಂಡದ ಅಗತ್ಯವಿದೆ ಎಂದು ಅವರು ಅರ್ಥಮಾಡಿಕೊಂಡಿದ್ದಾರೆ ಎಂದಿದ್ದಾರೆ.
ಬಾಂಗ್ಲಾದೇಶ ವಿರುದ್ಧ ಪಾಕಿಸ್ತಾನ ತಂಡ
ಶಾನ್ ಮಸೂದ್ (ನಾಯಕ), ಸೌದ್ ಶಕೀಲ್ (ಉಪನಾಯಕ), ಅಬ್ರಾರ್ ಅಹ್ಮದ್, ಅಬ್ದುಲ್ಲಾ ಶಫೀಕ್, ಬಾಬರ್ ಅಜಮ್, ಖುರ್ರಂ ಶಹಜಾದ್, ಮೀರ್ ಹಮ್ಜಾ, ಮೊಹಮ್ಮದ್ ಅಲಿ, ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ನಸೀಮ್ ಶಾ, ಸೈಮ್ ಅಯೂಬ್ ಮತ್ತು ಸಲ್ಮಾನ್ ಅಲಿ ಅಗಾ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications