ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಆತನಂಥಾ ಆಟಗಾರ ಪಾಕ್ ತಂಡದಲ್ಲಿಲ್ಲ: ಭಾರತದ ಒಬ್ಬ ಕ್ರಿಕೆಟಿಗ 2 ತಂಡಗಳ ದೊಡ್ಡ ವ್ಯತ್ಯಾಸ ಎಂದ ಶಾಹಿದ್ ಅಫ್ರಿದಿ

Shahid Afridi pointed weekkness of pakistan said they dont have a finisher like Hardik Pandya

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಬಳಿಕ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಸಜ್ಜಾಗುತ್ತಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾ ಪರವಾಗಿ ಬ್ಯಾಟರ್‌ಗಳು ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದಾರೆ. ಈ ಮೂಲಕ ಮುಂದಿನ ವಿಶ್ವಕಪ್‌ಗೆ ಭರ್ಜರಿ ಸಿದ್ಧತೆ ಮಾಡಿಕೊಂಡಿದೆ ಟೀಮ್ ಇಂಡಿಯಾ. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಮೂಲಕ ಚುಟುಕು ವಿಶ್ವಕಪ್‌ಗೆ ಅಂತಿಮ ಹಂತದ ಸಿದ್ಧತೆ ಮಾಡಿಕೊಳ್ಳಲಿದೆ. ಈ ಸಂದರ್ಭದಲ್ಲಿ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿ ಭಾರತದ ಓರ್ವ ಪ್ರಮುಖ ಆಟಗಾರನ ಬಗ್ಗೆ ಭಾರೀ ಪ್ರಶಂಸೆಯ ಮಾತುಗಳನ್ನಾಡಿದ್ದು ಆತಂಥಾ ಆಟಗಾರ ಪಾಕ್ ತಂಡದಲ್ಲಿ ಇಲ್ಲದಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಾಗಲಿದೆ ಎಂದಿದ್ದಾರೆ.

ಈ ಬಾರಿಯ ವಿಶ್ವಕಪ್‌ನಲ್ಲಿ ಟ್ರೋಫಿ ಗೆಲ್ಲುವ ಸಾಧ್ಯತೆಯಿರುವ ನೆಚ್ಚಿನ ತಂಡಗಳಲ್ಲಿ ಭಾರತ ಕೂಡ ಒಂದಾಗಿದೆ. ಪಾಕಿಸ್ತಾನ ಕೂಡ ಟೂರ್ನಿಯಲ್ಲಿ ಕಠಿಣ ಪೈಪೋಟಿ ನೀಡುವ ತಂಡ ಎನಿಸಿಕೊಂಡಿದೆ. ಹಾಗಿದ್ದರೂ ಪಾಕಿಸ್ತಾನ ತಂಡದ ಹಿನ್ನಡೆಗೆ ಕಾರಣವಾಗಬಲ್ಲ ಒಬ್ಬ ಭಾರತದ ಆಟಗಾರನನ್ನು ಶಾಹಿದ್ ಅಫ್ರಿದಿ ಹೆಸರಿಸಿದ್ದಾರೆ. ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ದೊಡ್ಡ ವ್ಯತ್ಯಾಸ ಆ ಒಬ್ಬ ಆಟಗಾರ ಎಂದಿದ್ದಾರೆ ಶಾಹಿದ್ ಅಫ್ರಿದಿ.

ಟಿ20 ವಿಶ್ವಕಪ್‌ಗಾಗಿ ಆಸ್ಟ್ರೇಲಿಯಾದ ಆಡುವ ತಂಡದಲ್ಲಿ ಈತ ಸ್ಥಾನ ಪಡೆಯಲಿ: ಆಡಮ್ ಗಿಲ್‌ಕ್ರಿಸ್ಟ್ಟಿ20 ವಿಶ್ವಕಪ್‌ಗಾಗಿ ಆಸ್ಟ್ರೇಲಿಯಾದ ಆಡುವ ತಂಡದಲ್ಲಿ ಈತ ಸ್ಥಾನ ಪಡೆಯಲಿ: ಆಡಮ್ ಗಿಲ್‌ಕ್ರಿಸ್ಟ್

ಹಾಗಾದರೆ ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ಉಲ್ಲೇಖಿಸಿರುವ ಪ್ರಮುಖ ಆಟಗಾರ ಯಾರು? ಮುಂದೆ ಓದಿ..

ಪಾಕ್ ತಂಡದ ದೌರ್ಬಲ್ಯ ಹೇಳಿದ ಅಫ್ರಿದಿ

ಪಾಕ್ ತಂಡದ ದೌರ್ಬಲ್ಯ ಹೇಳಿದ ಅಫ್ರಿದಿ

ಈ ಬಾರಿಯ ಏಷ್ಯಾಕಪ್‌ಗೆ ಪಾಕಿಸ್ತಾನ ತಂಡವನ್ನು ಕೂಡ ಈಗಾಗಲೇ ಘೋಷಣೆ ಮಾಡಲಾಗಿದ್ದು ಬಾಬರ್ ಅಜಂ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ವಿಶ್ವಕಪ್ ಹಿನ್ನೆಲೆಯಲ್ಲಿ ಪಾಕಿಸ್ತಾನದ ಮಾಜಿ ನಾಯಕ ಶಾಹಿದ್ ಅಫ್ರಿದಿ ಸಮಾ ಟಿವಿಯಲ್ಲಿ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಪಾಕಿಸ್ತಾನ ತಂಡದ ಪ್ರಮುಖ ದೌರ್ಬಲ್ಯವನ್ನು ಶಾಹಿದ್ ಅಫ್ರಿದಿ ಉಲ್ಲೇಖಿಸಿದ್ದು ತಂಡದಲ್ಲಿ ಫಿನಿಷರ್‌ಗಳ ಕೊರತೆಯಿದೆ ಎಂದಿದ್ದಾರೆ. ಆಸಿಫ್ ಅಲಿ ಹಾಗೂ ಕುಶ್ದಿಲ್ ಫಿನಿಷರ್‌ಗಳಾಗಿದ್ದರು ಕೂಡ ಪಾಕಿಸ್ತಾನ ತಂಡಕ್ಕೆ ಇವರಿಬ್ಬರಿಂದ ನಿರೀಕ್ಷಿತ ಪ್ರದರ್ಶನ ಬರುತ್ತಿಲ್ಲ ಎಂದಿದ್ದಾರೆ.

ಹಾರ್ದಿಕ್ ಪಾಂಡ್ಯ ತರದ ಫಿನಿಷರ್ ಬೇಕು ಎಂದ ಅಫ್ರಿದಿ

ಹಾರ್ದಿಕ್ ಪಾಂಡ್ಯ ತರದ ಫಿನಿಷರ್ ಬೇಕು ಎಂದ ಅಫ್ರಿದಿ

ಈ ಸಂದರ್ಭದಲ್ಲಿ ಪಾಕಿಸ್ತಾನ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಪಾಕಿಸ್ತಾನ ತಂಡದಲ್ಲಿ ಭಾರತದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ತರದ ಫಿನಿಷರ್ ಇಲ್ಲ ಎಂದಿದ್ದಾರೆ. "ಹಾರ್ದಿಕ್ ಪಾಂಡ್ಯ ತರದ ಫಿನಿಷರ್‌ಗಳು ನಮ್ಮಲ್ಲಿ ಇಲ್ಲ. ಆಸಿಫ್ ಅಲಿ ಹಾಗೂ ಕುಶ್ದಿಲ್ ಶಾ ರೀತಿಯ ಆಟಗಾರರು ಫಿನಿಷಿಂಗ್ ಜವಾಬ್ಧಾರಿ ನಿರ್ವಹಿಸಬಹುದು ಎಂದು ನಾವು ಭಾವಿಸಿದ್ದೆವು. ಆದರೆ ಅವರಿಂದ ಅದು ಸಾಧ್ಯವಾಗುತ್ತಿಲ್ಲ. ಸವಾಜ್ ಅಥವಾ ಶದಬ್ ಕೂಡ ಸ್ಥಿರವಾಗಿ ಆಡುತ್ತಿಲ್ಲ" ಎಂದಿದ್ದಾರೆ ಶಾಹಿದ್ ಅಫ್ರಿದಿ.

ತವರಿನಲ್ಲಿ ಇಂಗ್ಲೆಂಡ್ ವಿರುದ್ಧ ಸರಣಿಯಾಡುತ್ತಿದೆ ಪಾಕ್

ತವರಿನಲ್ಲಿ ಇಂಗ್ಲೆಂಡ್ ವಿರುದ್ಧ ಸರಣಿಯಾಡುತ್ತಿದೆ ಪಾಕ್

ವಿಶ್ವಕಪ್ ಟೂರ್ನಿಗೂ ಮುನ್ನ ಪಾಕಿಸ್ತಾನ ತಂಡ ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ಸೀಮಿತ ಓವರ್‌ಗಳ ಸರಣಿಯಲ್ಲಿ ಭಾಗಿಯಾಗಿದೆ. ಮೊದಲಿಗೆ 7 ಪಂದ್ಯಗಳ ಸುದೀರ್ಘ ಟಿ20 ಸರಣಿಯಲ್ಲಿ ಪಾಕಿಸ್ತಾನ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿದ್ದು ಮೊದಲ ನಾಲ್ಕು ಪಂದ್ಯಗಳಲ್ಲಿ 2-2 ಅಂತರದಿಂದ ಎರಡು ತಂಡಗಳು ಸಮಬಲ ಸಾಧಿಸಿದೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ 6 ವಿಕೆಟ್‌ಗಳ ಗೆಲುವು ಸಾಧಿಸಿದ್ದರೆ ಎರಡನೇ ಸ್ಥಾನದಲ್ಲಿ ಪಾಕಿಸ್ತಾನ 10 ವಿಕೆಟ್‌ಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ 63 ರನ್‌ಗಳಿಂದ ಗೆಲುವು ಸಾಧಿಸಿದ್ದು ನಾಲ್ಕನೇ ಪಂದ್ಯದಲ್ಲಿ ಮತ್ತೆ ಪಾಕಿಸ್ತಾನ ತಂಡ 3 ರನ್‌ಗಳ ಅಂತರದಿಂದ ರೋಚಕವಾಗಿ ಗೆಲ್ಲುವ ಮೂಲಕ ಸರಣಿಯನ್ನು ಸಮಬಲ ಮಾಡಿಕೊಂಡಿದೆ.

ವಿಶ್ವಕಪ್‌ನಲ್ಲಿ ಭಾರತ ಪಾಕ್ ಮುಖಾಮುಖಿ

ವಿಶ್ವಕಪ್‌ನಲ್ಲಿ ಭಾರತ ಪಾಕ್ ಮುಖಾಮುಖಿ

ಇನ್ನು ಈ ಬಾರಿಯ ವಿಶ್ವಕಪ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ತಮ್ಮ ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಅಕ್ಟೋಬರ್ 22ರಿಂದ ಸೂಪರ್ 12 ಹಂತದ ಪಂದ್ಯಗಳು ನಡೆಯಲಿದ್ದು ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಪಂದ್ಯದ ಮೂಲಕ ಚಾಲನೆ ದೊರೆಯಲಿದೆ. ಅಕ್ಟೋಬರ್ 23ರಂದು ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿದೆ. ಮೆಲ್ಬರ್ನ್‌ನಲ್ಲಿರುವ ಎಂಸಿಜಿ ಕ್ರಿಕೆಟ್ ಮೈದಾನದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ.

Story first published: Wednesday, September 28, 2022, 11:35 [IST]
Other articles published on Sep 28, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X