ಭಾರತ ವಿರುದ್ಧದ ಟೆಸ್ಟ್ ಸರಣಿಗೆ ಬಾಂಗ್ಲಾದೇಶದ 17 ಆಟಗಾರರ ಬಲಿಷ್ಠ ತಂಡ ಪ್ರಕಟ

ಭಾರತ ಹಾಗೂ ಬಾಂಗ್ಲಾದೇಶಗಳ ನಡುವಿನ ಏಕದಿನ ಸರಣಿ ಮುಕ್ತಾಯವಾದ ಬಳಿಕ ಟೆಸ್ಟ್ ಸರಣಿ ಆರಂಭವಾಗಲಿದೆ. ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದ್ದು ಈ ಸರಣಿಗೆ ಬಾಂಗ್ಲಾದೇಶ ತಂಡವನ್ನು ಪ್ರಕಟಿಸಲಾಗಿದೆ. 17 ಆಟಗಾರರ ಪಡೆಯನ್ನು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಪ್ರಕಟಿಸಿದೆ. ಶಕೀಬ್ ಅಲ್ ಹಸನ್ ಬಾಂಗ್ಲಾ ಪಡೆಯನ್ನು ಟೆಸ್ಟ್ ಮಾದರಿಯಲ್ಲಿ ಮುನ್ನಡೆಸಲಿದ್ದಾರೆ. ಈ ಮೂಲಕ ಟೆಸ್ಟ್ ಸರಣಿಗೆ ಬಾಂಗ್ಲಾ ಪಡೆ ಸಜ್ಜಾಗಿದೆ.
ಚಿತ್ತಗಾಂಗ್‌ನಲ್ಲಿ ಡಿಸೆಂಬರ್ 14ರಿಂದ ಮೊದಲ ಟೆಸ್ಟ್ ಆರಂಭವಾಗುವ ಮೂಲಕ ಈ ಎರಡು ಪಂದ್ಯಗಳ ಟೆಸ್ಟ ಸರಣಿಗೆ ಚಾಲನೆ ದೊರೆಯಲಿದೆ. ಅನುಭವಿ ಆಟಗಾರ ಮುಷ್ಫಿಕರ್ ರಹೀಮ್, ಯಾಸಿರ್ ಅಲಿ ಮತ್ತು ಟಸ್ಕಿನ್ ಅಹ್ಮದ್ ಈ ಸರಣಿಯ ಮೂಲಕ ಟೆಸ್ಟ್‌ಗೆ ಕಮ್‌ಬ್ಯಾಕ್ ಮಾಡಿದ್ದಾರೆ. ಕಳೆದ ಜೂನ್‌ನಲ್ಲಿ ವೆಸ್ಟ್ ಇಂಡಿಸ್ ವಿರುದ್ಧದ ಸರಣಿಯಿಂದ ಈ ಆಟಗಾರರು ಹೊರಗುಳಿದಿದ್ದರು. ಇನ್ನು ಜಾಕಿರ್ ಹಸನ್ ಮೊದಲ ಬಾರಿಗೆ ಟೆಸ್ಟ್ ಮಾದರಿಗೆ ಆಯ್ಕೆಯಾಗಿದ್ದಾರೆ.
ಏಕದಿನ ಸರಣಿ ಗೆದ್ದಿರುವ ಬಾಂಗ್ಲಾದೇಶ: ಇನ್ನು ಬಾಂಗ್ಲಾದೇಶ ಹಾಗೂ ಭಾರತ ತಂಡಗಳು ಮೊದಲಿಗೆ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮೂಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಮೊದಲ ಎರಡು ಪಂದ್ಯಗಳನ್ನು ಕೂಡ ಬಾಂಗ್ಲಾದೇಶ ತಂಡ ಗೆದ್ದುಕೊಂಡಿದ್ದು ಸರಣಿಯನ್ನು ವಶಕ್ಕೆ ಪಡೆದುಕೊಂಡಿದೆ. ಅಂತಿಮ ಪಂದ್ಯ ಶನಿವಾರ ನಡೆಯಲಿದ್ದು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದು ವೈಟ್‌ವಾಶ್ ಮುಖಭಂಗದಿಂದ ತಪ್ಪಿಸಿಕೊಳ್ಳುವ ಪ್ರಯತ್ನ ನಡೆಸಲಿದೆ.
ಮೊದಲ ಟೆಸ್ಟ್‌ಗೆ ಆಯ್ಕೆಯಾಗಿರುವ ಬಾಂಗ್ಲಾದೇಶ ತಂಡ: ಮಹಮ್ಮದುಲ್ ಹಸನ್ ಜಾಯ್, ನಜ್ಮುಲ್ ಹಸನ್ ಶಾಂಟೊ, ಮೊಮಿನುಲ್ ಹಕ್, ಯಾಸಿರ್ ಅಲಿ ಚೌಧರಿ, ಮುಶ್ಫಿಕರ್ ರಹೀಮ್, ಶಕೀಬ್ ಅಲ್ ಹಸನ್ (ನಾಯಕ), ಲಿಟನ್ ದಾಸ್, ನೂರುಲ್ ಹಸನ್, ಮೆಹಿದಿ ಹಸನ್ ಮಿರಾಜ್, ತೈಜುಲ್ ಇಸ್ಲಾಂ, ತಸ್ಕಿನ್ ಇಸ್ಲಾಂ, ತಸ್ಕಿನ್ ಅಹ್ಮದ್ ಅಹ್ಮದ್ , ಎಬಾಡೋತ್ ಹೊಸೈನ್, ಶೋರಿಫುಲ್ ಇಸ್ಲಾಂ, ಜಾಕಿರ್ ಹಸನ್, ರೆಜೌರ್ ರೆಹಮಾನ್ ರಾಜಾ, ಅನಾಮುಲ್ ಹಕ್ ಬಿಜೋಯ್
ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications