IND vs BAN: ಭಾರತಕ್ಕೆ ಕಾಟ ನೀಡಲು ಬಾಂಗ್ಲಾದೇಶ ಈ ಸ್ಟಾರ್ ಸ್ಪಿನ್ನರ್ ಸಜ್ಜು
ಭಾರೀ ಕುತೂಹಲ ಕೆರಳಿಸಿರುವ ಭಾರತ ಮತ್ತು ಬಾಂಗ್ಲಾದೇಶ ನಡುವಿನ 2 ಪಂದ್ಯಗಳ ಟೆಸ್ಟ್ ಸರಣಿಯು ಸೆಪ್ಟೆಂಬರ್ 19 ರಂದು ಪ್ರಾರಂಭವಾಗಲಿದೆ. ಈ ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಿದೆ. ಮತ್ತೊಂದೆಡೆ, ಭಾರತ ಪ್ರವಾಸಕ್ಕೆ ಬರುವ ಆಟಗಾರರ ಹೆಸರನ್ನು ಬಾಂಗ್ಲಾದೇಶ ಇನ್ನೂ ಬಹಿರಂಗಪಡಿಸಿಲ್ಲ.
ಈ ವರ್ಷದ ಆರಂಭದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತ ತಂಡ ಟೆಸ್ಟ್ ಸರಣಿ ಆಡಿದ್ದು, ಸುಮಾರು ಆರು ತಿಂಗಳ ಟೆಸ್ಟ್ ಕ್ರಿಕೆಟ್‌ಗೆ ಮರಳಿದೆ. ಇಂಗ್ಲೆಂಡ್ ವಿರುದ್ಧದ 4-1 ಅಂತರದಲ್ಲಿ ಸರಣಿ ಗೆಲ್ಲುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿತ್ತು. ಮತ್ತೊಂದೆಡೆ, ಬಾಂಗ್ಲಾದೇಶ ಇತ್ತೀಚೆಗೆ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಕಿಸ್ತಾನ ವಿರುದ್ಧ ಕ್ಲೀನ್ ಸ್ವೀಫ್ ಸಾಧನೆ ಮಾಡುವ ಮೂಲಕ ಸಂಚಲನ ಮೂಡಿಸಿದೆ.

ಭಾರತಕ್ಕೆ ಬಾಂಗ್ಲಾ ಸ್ಪಿನ್ನರ್ ಕಾಟ
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಬಹು ನಿರೀಕ್ಷಿತ ಟೆಸ್ಟ್ ಸರಣಿಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಾಗಿದೆ. ಈ ಸರಣಿಯಲ್ಲಿ ಭಾರತದ ವಿರುದ್ಧ ಬಾಂಗ್ಲಾದೇಶದ ಸ್ಟಾರ್ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಸ್ಪಿನ್ ಬೌಲಿಂಗ್ ಮೋಡಿ ಮಾಡಲು ಸಜ್ಜಾಗಿದ್ದಾರೆ.
ಬಾಂಗ್ಲಾದೇಶದ ಈ ಆಲ್‌ರೌಂಡರ್ ಅತ್ಯುತ್ತಮ ಫಾರ್ಮ್‌ನಲ್ಲಿದ್ದು, ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಭಾರತ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ. ಈ ಅನುಭವಿ ಆಲ್‌ರೌಂಡರ್‌ನನ್ನು ಟೀಮ್ ಇಂಡಿಯಾ ಹಗುರವಾಗಿ ಪರಿಗಣಿಸುವಂತಿಲ್ಲ.
ಕೌಂಟಿಯಲ್ಲಿ ಮೋಡಿ
ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿ ಸರ್ರೆ ಪರ ಶಕೀಬ್ ಅಲ್ ಹಸನ್ ಅದ್ಭುತ ಪ್ರದರ್ಶನ ನೀಡಿದ್ದರು. 33 ಓವರ್‌ಗಳಲ್ಲಿ 97 ರನ್‌ಗಳನ್ನು ನೀಡಿ 4 ವಿಕೆಟ್‌ಗಳನ್ನು ಉರುಳಿಸಿದ್ದರು. ಇದರೊಂದಿಗೆ ಸೋಮರ್‌ಸೆಟ್ ತಂಡವನ್ನು ಮೊದಲ ಇನ್ನಿಂಗ್ಸ್‌ನಲ್ಲಿ 317 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ಈ ಪ್ರದರ್ಶನವು ಬೌಲರ್ ಆಗಿ ಶಕೀಬ್ ಅವರ ಸಾಮರ್ಥ್ಯವನ್ನು ತೋರಿಸುತ್ತದೆ. ಆದರೆ ಅವರ ಸಾಮರ್ಥ್ಯಗಳ ಬಗ್ಗೆ ಭಾರತಕ್ಕೆ ಸ್ಪಷ್ಟ ತಿಳಿದಿದೆ. ಸರ್ರೆ ಪರ ಆಡುತ್ತಿರುವುದು ಶಕೀಬ್‌ಗೆ ಭಾರತದಲ್ಲಿ ಟೆಸ್ಟ್ ಸರಣಿಗೆ ತಯಾರಿ ನಡೆಸಲು ಉತ್ತಮ ಅವಕಾಶವನ್ನು ನೀಡಿದೆ.
ತಂಡದ ಪ್ರಮುಖ ಆಟಗಾರ
ಬಾಂಗ್ಲಾದೇಶ ಕ್ರಿಕೆಟ್ ತಂಡಕ್ಕೆ ಶಕೀಬ್ ಕೊಡುಗೆ ಅಸಾಧಾರಣವಾಗಿದೆ. ಆಲ್ ರೌಂಡರ್ ಆಗಿ ಹೆಸರುವಾಸಿಯಾಗಿರುವ ಅವರು ಇತ್ತೀಚಿನ ವರ್ಷಗಳಲ್ಲಿ ತಂಡದ ಯಶಸ್ಸಿಗೆ ಪ್ರಮುಖ ಕಾರಣವಾಗಿದ್ದಾರೆ. ಪಾಕಿಸ್ತಾನ ವಿರುದ್ಧ ಬಾಂಗ್ಲಾದೇಶದ ಐತಿಹಾಸಿಕ ಸರಣಿ ಗೆಲುವಿನಲ್ಲಿ ಅವರ ಶ್ರಮ ವಹಿಸಿದ್ದಾರೆ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಿಂದಲೂ ಆಟದ ಮೇಲೆ ಪ್ರಭಾವ ಬೀರುವ ಶಕೀಬ್ ಅವರ ಸಾಮರ್ಥ್ಯವು ಭಾರತಕ್ಕೆ ಸವಾಲಾಗಬಹದು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications