For Quick Alerts
ALLOW NOTIFICATIONS  
For Daily Alerts
 

IPL 2025: ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹೆಸರಿನಲ್ಲಿ ನಾಚಿಕೆಗೇಡಿನ ದಾಖಲೆ!

ಮುಂಬೈ ಇಂಡಿಯನ್ಸ್ ಐಪಿಎಲ್ 2025ರ ಸೀಸನ್‌ ಅನ್ನು ಸೋಲಿನೊಂದಿಗೆ ಆರಂಭಿಸುವ ಪ್ರವೃತ್ತಿ ಮುಂದುವರೆದಿದೆ. ಭಾನುವಾರ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025 ರ ಮೂರನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡವು 4 ವಿಕೆಟ್‌ಗಳ ಹೀನಾಯ ಸೋಲನ್ನು ಅನುಭವಿಸಿತು. ಇದರೊಂದಿಗೆ, ಮುಂಬೈ ಇಂಡಿಯನ್ಸ್ ತಂಡವು ಸತತ 13 ನೇ ವರ್ಷವೂ ಅನಗತ್ಯ ದಾಖಲೆಯ ಕಲೆಯನ್ನು ಅಳಿಸಿಹಾಕುವಲ್ಲಿ ವಿಫಲವಾಗಿದೆ.

ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಸೂರ್ಯಕುಮಾರ್ ಕುಮಾರ್ ಮುಂಬೈ ಇಂಡಿಯನ್ಸ್‌ ತಂಡವನ್ನು ಮುನ್ನಡೆಸಿದರು. ಆದರೂ ಮುಂಬೈ ಇಂಡಿಯನ್ಸ್ ತಂಡಕ್ಕೆ ತನ್ನ ಹೆಸರಿನಲ್ಲಿದ್ದ ಅನಗತ್ಯ ದಾಖಲೆಯನ್ನು ತೆಗೆದು ಹಾಕಲು ಸಾಧ್ಯವಾಗಲಿಲ್ಲ. ಸತತ 13ನೇ ವರ್ಷವೂ ಮುಂಬೈ ಇಂಡಿಯನ್ಸ್ ತಂಡ ಐಪಿಎಲ್‌ನಲ್ಲಿ ತನ್ನ ಮೊದಲ ಪಂದ್ಯವನ್ನು ಸೋಲಿನೊಂದಿಗೆ ಆರಂಭಿಸಬೇಕಾಯಿತು.

Shameful record in the name of Mumbai Indians in IPL history

ಐಪಿಎಲ್ 2013 ರಿಂದ 2025 ರವರೆಗೆ, ಮುಂಬೈ ಇಂಡಿಯನ್ಸ್ ತಂಡವು ಮೊದಲ ಪಂದ್ಯವನ್ನು ಗೆದ್ದಿಲ್ಲ. ಮುಂಬೈ ಇಂಡಿಯನ್ಸ್ ಕೊನೆಯ ಬಾರಿಗೆ 2012 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮೊದಲ ಪಂದ್ಯವನ್ನು ಗೆದ್ದು ಸೀಸನ್ ಅನ್ನು ಆರಂಭಿಸಿತ್ತು. ಇದಾದ ಬಳಿಕ 2013 ರಿಂದ ಮುಂಬೈ ಇಂಡಿಯನ್ಸ್ ತಂಡ ತನ್ನ ದಾಖಲೆಯನ್ನು ಬದಲಾಯಿಸಲು ಸಾಧ್ಯವಾಗಿಲ್ಲ. ಸತತ 13 ಸೋಲುಗಳೊಂದಿಗೆ ಐಪಿಎಲ್ ಸೀಸನ್ ಅನ್ನು ಆರಂಭಿಸಿದೆ.

ಮುಂಬೈ ಇಂಡಿಯನ್ಸ್ ಸೋಲುಗಳು

ಗುಜರಾತ್ ಟೈಟಾನ್ಸ್‌ ವಿರುದ್ಧ 6 ರನ್‌ಗಳಿಂದ ಸೋಲು, 2024 ಅಹಮದಾಬಾದ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 8 ವಿಕೆಟ್‌ಗಳಿಂದ ಸೋಲು, 2023 ಬೆಂಗಳೂರು
ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ 4 ವಿಕೆಟ್‌ಗಳಿಂದ ಸೋಲು, 2022 ಬ್ರಬೋರ್ನ್
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 2 ವಿಕೆಟ್‌ಗಳಿಂದ ಸೋಲು, 2021 ಚೆನ್ನೈ
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 5 ವಿಕೆಟ್‌ಗಳಿಂದ ಸೋಲು, 2020 ಅಬುಧಾಬಿ
ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ 37 ರನ್‌ಗಳಿಂದ ಸೋಲು, 2019 ವಾಂಖೆಡೆ
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 1 ವಿಕೆಟ್‌ನಿಂದ ಸೋಲು, 2018 ವಾಂಖೆಡೆ
ರೈಸಿಂಗ್ ಪುಣೆ ಸೂಪರ್‌ಜೈಂಟ್‌ ವಿರುದ್ಧ 7 ವಿಕೆಟ್‌ಗಳಿಂದ ಸೋಲು, 2017 ಪುಣೆ
ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್‌ ವಿರುದ್ಧ 9 ವಿಕೆಟ್‌ಗಳಿಂದ ಸೋಲು, 2016 ವಾಂಖೆಡೆ
ಕೋಲ್ಕತ್ತಾ ನೈಟ್ ರೈಡರ್ಸ್‌ ವಿರುದ್ಧ 7 ವಿಕೆಟ್‌ಗಳಿಂದ ಸೋಲು, 2015 ಈಡನ್ ಗಾರ್ಡನ್ಸ್
ಕೋಲ್ಕತ್ತಾ ನೈಟ್ ರೈಡರ್ಸ್‌ ವಿರುದ್ಧ 41 ರನ್‌ಗಳಿಂದ ಸೋಲು, 2014 ಅಬುಧಾಬಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 2 ರನ್‌ಗಳಿಂದ ಸೋಲು, 2013 ಬೆಂಗಳೂರು

ರಚಿನ್ ಅಬ್ಬರ

ಮುಂಬೈ ಇಂಡಿಯನ್ಸ್ ನೀಡಿದ್ದ 156 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಚೆನ್ನೈ ತಂಡವು ಇನ್ನೂ ಐದು ಎಸೆತಗಳು ಬಾಕಿ ಇರುವಾಗಲೇ ಗುರಿ ತಲುಪಿತು. 20ನೇ ಓವರ್‌ನ ಮೊದಲ ಎಸೆತದಲ್ಲಿ ರಚಿನ್ ರವೀಂದ್ರ ಸಿಕ್ಸರ್ ಬಾರಿಸಿ ಸಿಎಸ್‌ಕೆ ತಂಡಕ್ಕೆ ಐಪಿಎಲ್ ಟೂರ್ನಿಯಲ್ಲಿ ಮೊದಲ ಗೆಲುವು ತಂದುಕೊಟ್ಟರು. ರಚಿನ್ ರವೀಂದ್ರ 45 ಎಸೆತಗಳಲ್ಲಿ ಎರಡು ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳ ನೆರವಿನಿಂದ 65 ರನ್ ಗಳಿಸಿ ಅದ್ಭುತ ಇನ್ನಿಂಗ್ಸ್ ಆಡಿದರು. ನಾಯಕ ರುತುರಾಜ್ ಗಾಯಕ್ವಾಡ್ ಕೂಡು ಬಿರುಸಿನ ಬ್ಯಾಟಿಂಗ್ ಮಾಡುವ ಮೂಲಕ ತಂಡವನ್ನು ಗೆಲುವಿನ ಕಡೆ ಮುನ್ನಡೆಸಿದರು.

Story first published: Monday, March 24, 2025, 14:28 [IST]
Other articles published on Mar 24, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+