Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಶೇನ್ ವ್ಯಾಟ್ಸನ್

Shane Watson Announces Retire From All Forms Of Cricket

ಚೆನ್ನೈ ಸೂಪರ್ ಕಿಂಗ್ಸ್ ಓಪನರ್ ಶೇನ್ ವ್ಯಾಟ್ಸನ್ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿಯನ್ನು ಘೋಷಿಸಿದ್ದಾರೆ. ಐಪಿಎಲ್ 13ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ತಂಡವು ಲೀಗ್ ತನ್ನ ಕೊನೆಯ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ ಗೆದ್ದ ಬಳಿಕ ವ್ಯಾಟ್ಸನ್ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.

ಸಿಎಸ್‌ಕೆ ತಂಡದ ಸಹ ಆಟಗಾರರಿಗೆ ತಿಳಿಸಿರುವ ಶೇನ್ ವ್ಯಾಟ್ಸನ್ ' ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿಯಾಗುತ್ತೇನೆ' ಎಂದಿದ್ದಾರೆ. ಆಸ್ಟ್ರೇಲಿಯಾದ ಮಾಜಿ ಓಪನರ್ ಈಗಾಗಲೇ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದು 2018ರಲ್ಲಿ ಸಿಎಸ್‌ಕೆ ಫ್ರಾಂಚೈಸಿ ಶೇನ್ ವ್ಯಾಟ್ಸನ್‌ರನ್ನು ತನ್ನ ತೆಕ್ಕೆಗೆ ಹಾಕಿಕೊಂಡಿತು.

ಸಿಎಸ್‌ಕೆ ಡ್ರೆಸ್ಸಿಂಗ್‌ ರೂಮ್‌ನಲ್ಲಿ ತನ್ನ ನಿವೃತ್ತಿ ನಿರ್ಧಾರವನ್ನು ತಿಳಿಸಿದ ವ್ಯಾಟ್ಸನ್ ಕಿಂಗ್ಸ್‌ ಇಲೆವೆನ್ ಪಂಜಾಬ್‌ ವಿರುದ್ಧ ಆಡುತ್ತಿರುವುದೇ ತನ್ನ ಕೊನೆಯ ಪಂದ್ಯ ಎಂದು ಹೇಳುವಾಗ ತುಂಬಾನೆ ಭಾವನಾತ್ಮಕವಾಗಿ ಮಾತನಾಡಿದ್ದಾರೆ. ಜೊತೆಗೆ ಸಿಎಸ್‌ಕೆ ಫ್ರಾಂಚೈಸಿಗೆ ಆಡುವುದು ದೊಡ್ಡ ಭಾಗ್ಯ ಎಂದು ಹೇಳಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ಸಿಎಸ್‌ಕೆಗೆ ಆಡುವ ಮೊದಲು ಶೇನ್ ವ್ಯಾಟ್ಸನ್ ಅವರು ರಾಜಸ್ಥಾನ್ ರಾಯಲ್ಸ್‌ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡಿದ್ದರು. ರಾಜಸ್ಥಾನ್ ರಾಯಲ್ಸ್‌ ಚೊಚ್ಚಲ ಐಪಿಎಲ್ ಆವೃತ್ತಿಯಲ್ಲೇ(2008) ಚಾಂಪಿಯನ್ ಆಗಲು ಶೇನ್ ವ್ಯಾಟ್ಸನ್ ಪಾತ್ರ ಬಹುದೊಡ್ಡದು.

39 ವರ್ಷದ ಆಸ್ಟ್ರೇಲಿಯಾದ ಮಾಜಿ ಆಟಗಾರ ಶೇನ್ ವ್ಯಾಟ್ಸನ್ 59 ಟೆಸ್ಟ್, 190 ಏಕದಿನ, 58 ಅಂತರಾಷ್ಟ್ರೀಯ ಟಿ-20 ಪಂದ್ಯಗಳನ್ನು ಆಡಿದ್ದಾರೆ. ಇನ್ನು 145 ಐಪಿಎಲ್ ಪಂದ್ಯಗಳನ್ನಾಡಿದ್ದು, ಸಿಎಸ್‌ಕೆ ಪರ 43 ಪಂದ್ಯಗಳಲ್ಲಿ ಹಳದಿ ಬಣ್ಣದ ಜೆರ್ಸಿ ತೊಟ್ಟಿದ್ದಾರೆ.

Story first published: Monday, November 2, 2020, 17:50 [IST]
Other articles published on Nov 2, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+