Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Shapoor Zadran Retirement: 2015ರ ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನದ ಮೊದಲ ಗೆಲುವಿನ ಹೀರೋ ನಿವೃತ್ತಿ

ಐಸಿಸಿ ಪುರುಷರ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿ ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ನಡೆಯಲಿದೆ. ಇದಕ್ಕೂ ಮುನ್ನ ಅಫ್ಘಾನಿಸ್ತಾನ ಕ್ರಿಕೆಟ್ ಅಭಿಮಾನಿಗಳಿಗೆ ಬೇಸರ ಸಂಗತಿಯೊಂದು ಎದುರಾಗಿದೆ. ಅಫ್ಘಾನಿಸ್ತಾನದ ವೇಗದ ಬೌಲರ್ ಶಪೂರ್ ಝದ್ರಾನ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿರುವ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಶಪೂರ್ ಝದ್ರಾನ್ 10 ವರ್ಷಗಳಿಗೂ ಹೆಚ್ಚು ಕಾಲ ಸುದೀರ್ಘ ವೃತ್ತಿಜೀವನದ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಅವರು ಮೂರು ಟಿ20 ವಿಶ್ವಕಪ್‌ಗಳನ್ನು ಆಡಿದ್ದು, 2015ರ ಏಕದಿನ ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನದ ಮೊದಲ ಗೆಲುವಿನ ಹೀರೋ ಆಗಿದ್ದರು.

Shapoor Zadran retires from international cricket

ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಯು (ಎಸಿಬಿ) ಶಪೂರ್ ಝದ್ರಾನ್ ಅವರಿಗೆ ಶುಭ ಹಾರೈಸಿದೆ. ಎಸಿಬಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ. ಅಫ್ಘಾನಿಸ್ತಾನ ಕ್ರಿಕೆಟ್‌ನ ಉಗಮಕ್ಕೆ ನೀಡಿದ ಕೊಡುಗೆಗಾಗಿ ಎಸಿಬಿ ಶಪೂರ್ ಜದ್ರಾನ್ ಅವರಿಗೆ ಧನ್ಯವಾದಗಳನ್ನು ಅರ್ಪಿಸುವುದರ ಜೊತೆಗೆ ಭವಿಷ್ಯಕ್ಕಾಗಿ ಅವರಿಗೆ ಶುಭ ಹಾರೈಸುತ್ತದೆ ಎಂದು ಅಫ್ಘಾನಿಸ್ತಾನ ಕ್ರಿಕೆಟ್ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದೆ.

ಝದ್ರಾನ್ 80 ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಅಫ್ಘಾನಿಸ್ತಾನವನ್ನು ಪ್ರತಿನಿಧಿಸಿದ್ದಾರೆ. ಅವರ ಹೆಸರಿನಲ್ಲಿ ಅಷ್ಟೇ ಸಂಖ್ಯೆಯ ಅಂತಾರಾಷ್ಟ್ರೀಯ ವಿಕೆಟ್‌ಗಳನ್ನು ಪಡೆದಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 43 ವಿಕೆಟ್‌ಗಳು ಮತ್ತು ಟಿ20 ಅಂತರಾಷ್ಟ್ರೀಯ ಪಂದ್ಯಗಳಲ್ಲಿ 37 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

ಝದ್ರಾನ್ ಪೋಸ್ಟ್

ಶಪೂರ್ ಝದ್ರಾನ್ ತಮ್ಮ ಪೋಸ್ಟ್‌ನಲ್ಲಿ, 'ಇಂದು ನಾನು ಎಂದಿಗೂ ಎದುರಿಸಲು ಬಯಸದ ದಿನ. ಆದರೆ ಅಂತಿಮವಾಗಿ ಅದು ಪ್ರತಿಯೊಬ್ಬ ಆಟಗಾರನಿಗೂ ಬರುತ್ತದೆ. 22 ವರ್ಷಗಳ ಸೇವೆ, ತ್ಯಾಗ ಮತ್ತು ಕ್ರಿಕೆಟ್ ಮೇಲಿನ ಪ್ರೀತಿಯ ನಂತರ ನಾನು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಅಧಿಕೃತವಾಗಿ ನಿವೃತ್ತಿ ಘೋಷಿಸುತ್ತೇನೆ. ಇದು ನನ್ನ ಜೀವನದ ಅತ್ಯಂತ ಕಠಿಣ ನಿರ್ಧಾರವಾಗಿದೆ. ಏಕೆಂದರೆ ನನಗೆ ಕ್ರಿಕೆಟ್ ಕೇವಲ ಆಟವಲ್ಲ. ಇದು ನನ್ನ ಉತ್ಸಾಹ, ಗುರುತು ಮತ್ತು ಉದ್ದೇಶವಾಗಿದೆ.

ಬಾಲ್ಯದಿಂದಲೂ, ನಾನು ಅಫ್ಘಾನಿಸ್ತಾನವನ್ನು ಪ್ರತಿನಿಧಿಸುವ ಕನಸು ಕಂಡಿದೆ. ಈಗ ಹಿಂತಿರುಗಿ ನೋಡಿದಾಗ, ನನ್ನ ದೇಶದ ಧ್ವಜವನ್ನು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಏರಿಸುವಲ್ಲಿ ನಾನು ಪ್ರಮುಖ ಪಾತ್ರವನ್ನು ನಿರ್ವಹಿಸಿದ್ದೇನೆ ಎಂದು ನನಗೆ ಹೆಮ್ಮೆ ಅನಿಸುತ್ತದೆ. ನಾನು ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ದೂರವಾಗಿದ್ದರೂ, ಆಟದ ಕಡೆಗೆ ನನ್ನ ಬದ್ಧತೆ ಉಳಿದಿದೆ. ಅಲ್ಲಾ ಇಚ್ಛೆ, ಮುಂದಿನ ಪೀಳಿಗೆಯ ಆಫ್ಘನ್ ಕ್ರಿಕೆಟಿಗರು ಬೆಳೆಯಲು ಮತ್ತು ಬೆಳಗಲು ಸಹಾಯ ಮಾಡಲು ನಾನು ನನ್ನ ಅನುಭವವನ್ನು ಬಳಸುವುದನ್ನು ಮುಂದುವರಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

2015ರ ವಿಶ್ವಕಪ್‌ನಲ್ಲಿ ಹೀರೋ

ಝದ್ರಾನ್ 2009ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಪಾದರ್ಪಣೆ ಮಾಡಿದರು. ನಿವೃತ್ತಿ ಘೋಷಿಸುವ ಮೊದಲು 2020 ರಲ್ಲಿ ತಮ್ಮ ಕೊನೆಯ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. 37 ವರ್ಷ ವಯಸ್ಸಿನ ಝದ್ರಾನ್ ಮೂರು ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಗಳಲ್ಲಿ ಅಫ್ಘಾನಿಸ್ತಾನ ತಂಡವನ್ನು ಪ್ರತಿನಿಧಿಸಿದ್ದಾರೆ. ಡ್ಯುನೆಡಿನ್‌ನಲ್ಲಿ ನಡೆದ 2015ರ ವಿಶ್ವಕಪ್ ಟೂರ್ನಿಯ ಸ್ಕಾಟ್ಲೆಂಡ್ ವಿರುದ್ಧ ಅಫ್ಘಾನಿಸ್ತಾನ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು. ಈ ಮೂಲಕ ಐಸಿಸಿ ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನ ತಂಡದ ಮೊದಲ ಗೆಲುವಿನ ಹೀರೋ ಆಗಿದ್ದರು.

Story first published: Friday, January 31, 2025, 19:50 [IST]
Other articles published on Jan 31, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+