ಬಿಸಿಸಿಐ ತೊರೆದ ಶಶಾಂಕ್ ಮನೋಹರ್ ಈಗ ಐಸಿಸಿ ಚೇರ್ಮನ್
ದುಬೈ, ಮೇ 12" ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸ್ಥಾನವನ್ನು ತೊರೆದ ಶಶಾಂಕ್ ಮನೋಹರ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ನ ಚೇರ್ಮನ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಗುರುವಾರ ಪ್ರಕಟಿಸಲಾಗಿದೆ.
ಶಶಾಂಕ್ ಮನೋಹರ್ ಅವರು ಮೇ 10 ರಂದು ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸ್ಥಾನವನ್ನು ತೊರೆದಿದ್ದರು. ಐಸಿಸಿ ಚೇರ್ಮನ್ ಸ್ಥಾನವನ್ನು ತೊರೆದು ಚುನಾವಣೆ ಎದುರಿಸುತ್ತಾರೆ ಎಂಬ ಸುದ್ದಿ ಇತ್ತು. [ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಶಶಾಂಕ್ ಮನೋಹರ್ ರಾಜೀನಾಮೆ!]

ಆದರೆ, ಐಸಿಸಿ ಚೇರ್ಮನ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನು ಎರಡು ವರ್ಷಗಳ ಕಾಲ ಈ ಹುದ್ದೆಯಲ್ಲಿ ಮುಂದುವರೆಯಲಿದ್ದಾರೆ.
ಇನ್ನು ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕಾಗಿ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಅಜಯ್ ಶಿರ್ಕೆ, ಆಂಧ್ರಪ್ರದೇಶ ಕ್ರಿಕೆಟ್ ಸಂಸ್ಥೆಯ ಜಿ.ಗಂಗರಾಜು ಹಾಗೂ ಐಪಿಎಲ್ ಚೇರ್ಮನ್ ರಾಜೀವ್ ಶುಕ್ಲಾ ಈ ಮೂವರು ಪ್ರಬಲ ಪೈಪೋಟಿ ನಡೆಸಿದ್ದಾರೆ. ಇದರಿಂದ ತೀವ್ರ ಕುತೂಹಲ ಕೆರಳಿಸಿದ್ದು ಯಾರು ಅಧ್ಯಕ್ಷರಾಗಲಿದ್ದಾರೆಂದು ಕಾದು ನೋಡಬೇಕಿದೆ. ಇದೇ ಮೇ 14 ರಂದು ಬಿಸಿಸಿಐ ಅಧ್ಯಕ್ಷ ಹುದ್ದೆಗೆ ಚುನಾವಣೆ ನಡೆಯಲಿದೆ.
Story first published: Wednesday, January 3, 2018, 10:03 [IST]
Other articles published on Jan 3, 2018
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications